Cauvery Dispute: ಕಾವೇರಿ ನೀರಿಗಾಗಿ ಹೋರಾಟ: ಬೆಂಗಳೂರು ಬಂದ್‌ಗೆ ಕುಮಾರಸ್ವಾಮಿ ಬೆಂಬಲ
ಬೆಂಗಳೂರು, ಸೆಪ್ಟೆಂಬರ್ 26: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ರೈತ ಸಂಘಟನೆಗಳ ಒಕ್ಕೂಟ, ಪ್ರತಿಪಕ್ಷ ಬಿಜೆಪಿ, ಆಮ್ ಆದ್ಮಿ ಪಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ನವ ನಿರ್ಮಾಣ ಸೇನೆ ಸೇರಿದಂತೆ 150ಕ್ಕೂ ಹೆಚ್ಚು ಸಂಘಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ, ಬಂದ್ ಯಶಸ್ವಿ ಆಗಲಿ. @JanataDal_S ಪಕ್ಷದ ಕಾರ್ಯಕರ್ತರು ಕೂಡ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. #ಬೆಂಗಳೂರು_ಬಂದ್#ಕಾವೇರಿ_ನಮ್ಮದು
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 26, 2023
ಈಗಾಗಲೇ ಬೆಂಗಳೂರು ಬಂದ್ ಆರಂಭವಾಗಿದ್ದು, ಕಾವೇರಿ ನೀರಿಗಾಗಿ ಹೋರಾಟಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‌ಗೆ ನನ್ನ ಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಕಾವೇರಿಗಾಗಿ ಹೋರಾಟ ಶಾಂತಿಯುತವಾಗಿರಲಿ, ಬಂದ್ ಯಶಸ್ವಿ ಆಗಲಿ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಕೂಡ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಇನ್ನು ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ನಿನ್ನೆ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಮಾಹಿತಿ ನೀಡಿದ್ದು, ವಿವಿಧ ಸಂಘಟನೆಗಳಿ ಬಂದ್ ಘೋಷಣೆ ಮಾಡಿವೆ. ಜೊತೆಗೆ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದರು.
ನಗರದಲ್ಲಿ ಎಂದಿನಂತೆ ಬಿಎಂಟಿಸಿ ಕೆಎಸ್‌ಆರ್‌ಟಿಸಿ
ಬೆಂಗಳೂರು ಬಂದ್ ನಡುವೆಯೇ ಇಂದು ಎಂದಿನಂತೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಚಾರ ಆರಂಭಿಸಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳು ರಾಜ್ಯದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸುತ್ತಿವೆ. ಇನ್ನು ಬಿಎಂಟಿಸಿ ಬಸ್‌ಗಳು ನಗರದ ವಿವಿಧ ಪ್ರದೇಶಗಳಲ್ಲಿ ಸಂಚಾರ ನಡೆಸುತ್ತಿವೆ.












Click it and Unblock the Notifications