ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಹುಟ್ಟಿಸಿದ ಎಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್ ಭೇಟಿ

|
Google Oneindia Kannada News

Recommended Video

ಕುತೂಹಲ ಹುಟ್ಟಿಸಿದ ಎಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್ ಭೇಟಿ | Oneindia Kannada

ಬೆಂಗಳೂರು, ಸೆಪ್ಟೆಂಬರ್ 25 : ಸಚಿವ ಎಚ್.ಡಿ.ರೇವಣ್ಣ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. 'ನಾನೇನು ರಾಜಕೀಯ ಮಾಡಲ್ಲ ಎಲ್ಲವನ್ನು ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ' ಎಂದು ಭೇಟಿಯ ಬಳಿಕ ಹೇಳಿದರು.

ಮಂಗಳವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಡಿ.ಕೆ.ಶಿವಕುಮಾರ್ ಅವರು ಈ ಸಂದರ್ಭದಲ್ಲಿ ನಿವಾಸದಲ್ಲಿದ್ದರು.

ಸಿದ್ದರಾಮಯ್ಯ ಭೇಟಿ ಮಾಡಿದ ಶಾಸಕ ಎಂ.ಟಿ.ಬಿ.ನಾಗರಾಜ್ಸಿದ್ದರಾಮಯ್ಯ ಭೇಟಿ ಮಾಡಿದ ಶಾಸಕ ಎಂ.ಟಿ.ಬಿ.ನಾಗರಾಜ್

ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರು ಇರುವಾಗಲೇ ಎಚ್.ಡಿ.ರೇವಣ್ಣ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಪರಿಷತ್ ಚುನಾವಣೆ : ಜೆಡಿಎಸ್‌ನಲ್ಲಿ ಅಭ್ಯರ್ಥಿ ಬಗ್ಗೆ ಅಸಮಾಧಾನಪರಿಷತ್ ಚುನಾವಣೆ : ಜೆಡಿಎಸ್‌ನಲ್ಲಿ ಅಭ್ಯರ್ಥಿ ಬಗ್ಗೆ ಅಸಮಾಧಾನ

ಕಳೆದ ವಾರ ಸಚಿವ ಡಿ.ಕೆ.ಶಿವಕುಮಾರ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು, ಇಂದು ರೇವಣ್ಣ ಅವರು ಭೇಟಿಯಾದರು...

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಏಕೆ ಸ್ಪರ್ಧಿಸುತ್ತಿಲ್ಲ?ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಏಕೆ ಸ್ಪರ್ಧಿಸುತ್ತಿಲ್ಲ?

ನಾನೇನು ರಾಜಕೀಯ ಮಾಡಲ್ಲ

ನಾನೇನು ರಾಜಕೀಯ ಮಾಡಲ್ಲ

ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಮಾತನಾಡಿದ ಎಚ್.ಡಿ.ರೇವಣ್ಣ ಅವರು, 'ನಾನೇನು ರಾಜಕೀಯ ಮಾಡಲ್ಲ. ಎಲ್ಲವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೋಡಿಕೊಳ್ಳುತ್ತಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರಲಿಲ್ಲ. ಆದ್ದರಿಂದ, ಇಂದು ಭೇಟಿಯಾಗಿದ್ದೇನೆ' ಎಂದರು.

ಆರೋಗ್ಯ ವಿಚಾರಿಸಿದೆ

ಆರೋಗ್ಯ ವಿಚಾರಿಸಿದೆ

'ಡಿ.ಕೆ.ಶಿವಕುಮಾರ್ ಅವರು ನಮ್ಮ ಕ್ಷೇತ್ರಕ್ಕೆ ಬರಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದಾಗಿ ಬರಲಾಗಿಲ್ಲ. ಆದ್ದರಿಂದ, ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ' ಎಂದು ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.

ಅಸಮಾಧಾನವಿಲ್ಲ

ಅಸಮಾಧಾನವಿಲ್ಲ

ಕಾಂಗ್ರೆಸ್ ಶಾಸಕರು ಅನುದಾನ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಎಚ್.ಡಿ.ರೇವಣ್ಣ ತಳ್ಳಿ ಹಾಕಿದರು. 'ಶಾಸಕರಲ್ಲಿ ಯಾವ ಅಸಮಾಧಾನವೂ ಇಲ್ಲ. ಇಂತಹ ಸುದ್ದಿಗಳಲ್ಲಿ ಹುರುಳಿಲ್ಲ' ಎಂದು ಸ್ಪಷ್ಟನೆ ನೀಡಿದರು.

ಪಕ್ಷದ ನಿರ್ಧಾರವದು

ಪಕ್ಷದ ನಿರ್ಧಾರವದು

ವಿಧಾನ ಪರಿಷತ್ ಚುನಾವಣೆಗೆ ರಮೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು, 'ಅದು ಪಕ್ಷದ ನಿರ್ಧಾರ. ಮಧು ಬಂಗಾರಪ್ಪ ಅವರನ್ನು ಅಭ್ಯರ್ಥಿ ಮಾಡಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ, ಅವರು ಹಿಂಬಾಗಿಲ ರಾಜಕಾರಣ ಮಾಡುವುದಿಲ್ಲ ಎಂದು ತಿರಸ್ಕರಿಸಿದರು. ಆದ್ದರಿಂದ, ಕೊನೆ ಕ್ಷಣದಲ್ಲಿ ರಮೇಶ್ ಗೌಡ ಅವರ ಹೆಸರು ಅಂತಿಮಗೊಳಿಸಲಾಯಿತು' ಎಂದರು.

English summary
PWD minister H.D.Revanna met Water Resources minister D.K.Shivakumar in Bengaluru on September 25, 2018. D.K.Shivakumar recovering after food poisoning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X