Channapatna Congress Candidate: ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ?
ಬೆಂಗಳೂರು,ಜೂನ್ 28: ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಕೇಂದ್ರ ಸಚಿವರಾಗಿ ಹೆಚ್ಡಿ ಕುಮಾರಸ್ವಾಮಿ ಆಯ್ಕೆ ಆಗಿದ್ದಾರೆ. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯ ತೆರವಾಗಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ನಡೆಯಲಿದೆ.
ಚನ್ನಪಟ್ಟಣ ಕ್ಷೇತ್ರದಿಂದ ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎನ್ನುವ ಕುರಿತು ಡಿ ಕೆ ಬ್ರದರ್ಸ್ ಅಚ್ಚರಿ ಹೇಳಿಕೆ ನೀಡಿದ್ದು, ಕೆಲ ದಿನಗಳ ಹಿಂದೆಯಷ್ಟೇ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡದೇ ನನಗೆ ವಿಧಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದು, ಕಮಲ-ದಳ ನಾಯಕರ ನಿದ್ದೆಗೆಡಿಸುವಂತೆ ಮಾಡಿದ್ರು. ಆದರೆ, ನಮ್ಮ ಕುಟುಂಬದಿಂದ ಯಾರು ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡುತ್ತಿಲ್ಲ. ಆದರೆ ಡಿಕೆ ಸುರೇಶ್ರನ್ನು ಸ್ಪರ್ಧೆಗ ಇಳಿಸುವ ನಿಟ್ಟಿನಲ್ಲಿ ಅಣಿಯಾಗುತ್ತಿದ್ದಾರೆ. ಅವರ ಮಾತಿನಲ್ಲಿ ರಾಜಕೀಯ ತಂತ್ರಗಾರಿಕೆ ಇದೆ ಎಂದು ಇತ್ತೀಚೆಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದರು. ಇತ್ತ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಗ್ಡೆ ರಾಜಕೀಯ ಬರ್ತಾರಾ ಎಂಬ ಕುತೂಹಲ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮೂಡಿತ್ತು. ಕಳೆದ ಲೋಕಸಭಾ ಚುಣಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು, ರಾಜಕೀಯಕ್ಕೆ ಬರ್ತಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಡಿ ಕೆ ಬ್ರದರ್ಸ್ ಗೆ ಚನ್ನಪಟ್ಟಣ ಕ್ಷೇತ್ರ ಪ್ರತಿಷ್ಠಯ ಕಣವಾಗಿದ್ದು, ಚನ್ನಪಟ್ಟಣ ಕ್ಷೇತ್ರದಿಂದ ಮಹಿಳಾ ಅಭ್ಯರ್ಥಿಯನ್ನ ಕಣಕ್ಕಿಳಿಸುವ ತಯಾರಿಯನ್ನ ಕಾಂಗ್ರೆಸ್ ನಾಯಕರು ನಡೆಸಿದ್ದಾರೆ ಎಂದು ಹೇಳಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹೆಚ್ ಕುಸುಮ ಅವರು ಮುನಿರತ್ನ ಅವರ ವಿರುದ್ಧ ಸೋಲು ಅನುಭವಿಸಿದ್ದು, ಇದೀಗ ಚನ್ನಪಟ್ಟಣ ಕ್ಷೇತ್ರದಿಂದ ಹೆಚ್ ಕುಸುಮ ಅವರನ್ನ ಕಣಕ್ಕಿಳಿಸಲು ಡಿ ಕೆ ಬ್ರದರ್ಸ್ ಮುಂದಾಗಿದ್ದಾರೆ.












Click it and Unblock the Notifications