ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಒಂದೇ ದಿನ ಎಚ್‌1 ಎನ್‌1 ಗೆ 5 ಜನ ಬಲಿ

|
Google Oneindia Kannada News

ಬೆಂಗಳೂರು, ನವೆಂಬರ್ 3: ರಾಜ್ಯದಲ್ಲಿ ಒಂದೇ ದಿನ ಎಚ್‌1ಎನ್1 ರೋಗಕ್ಕೆ ಐದು ಮಂದಿ ಬಲಿಯಾಗಿರುವುದು ಆತಂಕ ಉಂಟು ಮಾಡಿದೆ. ಇದುವರೆಗೆ ಸತ್ತವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಈ ಬಾರಿ ಡೆಂಗ್ಯೂ ಹಾವಳಿ ನಿಯಂತ್ರಣದಲ್ಲಿ! ಕರ್ನಾಟಕದಲ್ಲಿ ಈ ಬಾರಿ ಡೆಂಗ್ಯೂ ಹಾವಳಿ ನಿಯಂತ್ರಣದಲ್ಲಿ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು, ಹಾಸನ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯು ತಿಳಿಸಿದೆ. ಕಳೆದ ಎರಡು ವಾರಗಳಲ್ಲಿ ಸೋಂಕಿನ ಪ್ರಮಾಣ ಶೇ.35ರಷ್ಟು ಹೆಚ್ಚಿದೆ. ಅ.20ರಿಂದ ಇಲ್ಲಿಯವರೆಗೆ ರೋಗಕ್ಕೆ 7 ಮಂದಿ ಬಲಿಯಾಗಿದ್ದಾರೆ. ಹದಿನೈದು ದಿನಗಳಲ್ಲಿ 347 ಜನರಿಗೆ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.

ರೋಗದ ಲಕ್ಷಣಗಳೇನು?

ರೋಗದ ಲಕ್ಷಣಗಳೇನು?

ಹಂದಿ ಜ್ವರ ಮೂರು ಹಂತದಲ್ಲಿ ಕಾಣಿಸಿಕೊಳ್ಳುತ್ತದೆ ಆರಂಭದಲ್ಲೇ ಚಿಕಿತ್ಸೆ ಪಡೆಯದಿದ್ದರೆ ಪ್ರಾಣ ಹಾನಿ ಸಂಭವಿಸುತ್ತದೆ. ಮೊದಲ ಹಂತದಲ್ಲಿ ಸಾಮಾನ್ಯವಾಗಿ ಜ್ವರ, ಕೆಮ್ಮು, ನೆಗಡಿ, ವಾಕರಿಕೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಚಿಕಿತ್ಸೆಯೊಂದಿಗೆ 1-2 ದಿನಗಳ ನಿಗಾವಹಿಸಬೇಕಾಗುತ್ತದೆ.

ಎರಡನೇ ಹಂತದಲ್ಲಿ ಹಳದಿ ಕಫ, ಅತಿ ಭೇದಿ ಅಥವಾ ವಾಂತಿ, ನೆಗಡಿ,ಗಂಟಲು ಕೆರೆತ ಉಂಟಾಗುತ್ತದೆ. ಮೂರನೇ ಹಂತದಲ್ಲಿ ತೀವ್ರ ಸ್ವರೂಪದ ಜ್ವರ, ಕಫದಲ್ಲಿ ರಕ್ತ, ಉಬ್ಬಸ, ನ್ಯುಮೋನಿಯಾದೊಂದಿಗೆ ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಳ್ಳುತ್ತದೆ.

ದೀಪಾವಳಿ ವಿಶೇಷ ಪುರವಣಿ

 ಜ್ವರ ಬಂದರೆ ಹೀಗೆ ಮಾಡಿ

ಜ್ವರ ಬಂದರೆ ಹೀಗೆ ಮಾಡಿ

ಎಚ್‌1 ಎನ್‌1 ಸೋಂಕು ಉಂಟಾದ ರೋಗಿಯಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜತೆಗೆ ಉಸಿರಾಟ ದ ತೊಂದರೆಯಾಗುತ್ತದ ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು.

ಮುಂಜಾಗ್ರತೆಯಾಗಿ ಸೋಮಕು ಪೀಡಿತರಿಂದ ದೂರವಿರಬೇಕು. ಶಂಕಿತರೋಗಿಯನ್ನು ಪ್ರತ್ಯೇಕವಾಗಿ ಆರೈಕೆ ಮಾಡಬೇಕು. ವಯಕ್ತಿಕ ಸ್ವಚ್ಛತೆಗೆ ಹೆಚ್ಚು ಕೆಮ್ಮುವಾಗ ಸೀನುವಾಗ ಕರವಸ್ತ್ರ ಬಳಸಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ಮಾಡಬಾರದು.

ಬೆಂಗಳೂರಲ್ಲಿ 10 ದಿನಗಳಲ್ಲಿ 23 ಎಚ್‌1ಎನ್‌1 ಪ್ರಕರಣ ಪತ್ತೆ ಬೆಂಗಳೂರಲ್ಲಿ 10 ದಿನಗಳಲ್ಲಿ 23 ಎಚ್‌1ಎನ್‌1 ಪ್ರಕರಣ ಪತ್ತೆ

4902ಮಂದಿಯ ಪರೀಕ್ಷೆ, 456 ಮಂದಿಯಲ್ಲಿ ರೋಗಾಣು ಮತ್ತೆ

4902ಮಂದಿಯ ಪರೀಕ್ಷೆ, 456 ಮಂದಿಯಲ್ಲಿ ರೋಗಾಣು ಮತ್ತೆ

ಜನವರಿ 2018ರಿಂದ ಇಲ್ಲಿಯವರಗೆ ಒಟ್ಟು 4902 ಜನರನ್ನು ಪರೀಕ್ಷಿಸಲಾಗಿದೆ. ಈ ಪೈಕಿ 456 ಪ್ರಕರಣಗಳು ಎಚ್‌1ಎನ್‌1 ರೋಗೋಣು ಇರುವುದು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಈ ಸಂಬಂಧ ಈಗಾಗಲೇ ಎಲ್ಲ ಭಾಗದ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.‌ ಯಾವುದೇ ರೀತಿಯ ಜ್ವರ ಕಂಡು ಬಂದರು ಅಥವಾ ಈ ರೋಗಾಣುವಿನ ಲಕ್ಷಣದ ಅನುಭವವಾದರೆ ಕೂಡಲೇ ಜನರು ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಿ ಎಂದು ಮೇಯರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಎಚ್‌1ಎನ್‌1 46 ಪ್ರಕರಣ ಪತ್ತೆ: ರಾಜ್ಯಾದ್ಯಂತ ಹೈ ಅಲರ್ಟ್ ಬೆಂಗಳೂರಲ್ಲಿ ಎಚ್‌1ಎನ್‌1 46 ಪ್ರಕರಣ ಪತ್ತೆ: ರಾಜ್ಯಾದ್ಯಂತ ಹೈ ಅಲರ್ಟ್

ಎಚ್‌1ಎನ್1ಗೆ ಉಚಿತ ಚಿಕಿತ್ಸೆ

ಎಚ್‌1ಎನ್1ಗೆ ಉಚಿತ ಚಿಕಿತ್ಸೆ

ವೈದ್ಯ ಶಿಕ್ಷಣ ಸಂಸ್ಥೆ ಮತ್ತು ಆಸ್ಪತ್ರೆಗಳು, ತಾಲೂಕು, ಜಿಲ್ಲಾ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಟಾಮಿಫ್ಲೂ ಮಾತ್ರೆ ಸೇರಿದಂತೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಎಚ್‌1ಎನ್1 ಚಿಕಿತ್ಸೆ ಹಾಗೂ ಔಷಧವನ್ನು ಉಚಿತವಾಗಿ ನೀಡಬೇಕು. ಎಲ್ಲಾ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯ ಆಸ್ಪತ್ರೆಗಳಿಗೆ ಮೊದಲ ಹಂತದಲ್ಲಿ ತಲಾ 12.5 ಲಕ್ಷ ರೂ. ತಾಲೂಕು ಆಸ್ಪತ್ರೆಗಳಿಗೆ 5 ಲಕ್ಷ ರೂ, ಸಮುದಾಯ ಕೇಂದ್ರಗಳಿಗೆ 1.5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

English summary
Department of health and family welfare sources have revealed that at least five people have died Single day following H1N1 flu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X