Heavy Rain: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಸೋಮವಾರದಿಂದ ಹಲವು ಜಿಲ್ಲೆಗಳಲ್ಲಿ ರೌದ್ರಾವತಾರ ತೋರಿದ್ದ ಮಳೆ ಕಳೆದ ಎರಡು ದಿನಗಳಿಂದ ಕೆಲವು ಕಡೆಗಳಲ್ಲಿ ಬಿಡುವು ಕೊಟ್ಟಿದೆ. ಶನಿವಾರದಿಂದ ಮಳೆ ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಜೊತೆಗೆ ಅಲ್ಲಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Haevy rain continues in karnataka imd given yellow alert to these states

ಯಾವ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ?

ಶನಿವಾರ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೂಡ ಹಲವು ಪ್ರದೇಶಗಳಲ್ಲಿ 115.6 ಮಿಮೀ ನಿಂದ 204.04 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 25ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 21ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೂಡ ಅಕ್ಟೋಬರ್ 21ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅಕ್ಟೋಬರ್ 21 ಮತ್ತು 22ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಶಿವಮೊಗ್ಗ, ಬಳ್ಳಾರಿ, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಿದೆ.

ವಾರಾಂತ್ಯದಲ್ಲಿ ಬೆಂಗಳೂರಿಗೂ ಭಾರಿ ಮಳೆ

ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಶನಿವಾರ ಬಿಬಿಎಂಪಿ ವ್ಯಾಪ್ತಿಯ ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿ, ದಕ್ಷಿಣ ವಲಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಭಾನುವಾರ ದಕ್ಷಿಣ ವಲಯ, ಬೊಮ್ಮನಹಳ್ಳಿ ವಲಯ, ಮಹದೇವಪುರ, ಆರ್ ಆರ್ ನಗರ, ದಾಸರಹಳ್ಳಿ, ಉತ್ತರ ವಲಯಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ. 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಯಲಹಂಕ ವಲಯದಲ್ಲಿ ಮಳೆ ಪ್ರಮಾಣ ಮತ್ತಷ್ಟು ತೀವ್ರವಾಗಿರಲಿದ್ದು 204.5 ಮಿಮೀ ಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+