ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ ಮರಳಿದ ಹಾಲಾಡಿ ಶ್ರೀನಿವಾಸ ಶೆಟ್ಟಿ!

|
Google Oneindia Kannada News

ಬೆಂಗಳೂರು, ಫೆಬ್ರವರಿ 02 : ಕುಂದಾಪುರದ ವಾಜಪೇಯಿ ಎಂದು ಪ್ರಸಿದ್ಧಿ ಪಡೆದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿಗೆ ವಾಪಸ್ ಆಗಿದ್ದಾರೆ. ಎರಡು ದಿನಗಳ ಹಿಂದೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರಿದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಂದಾಪುರ ವಾಜಪೇಯಿ ಹಾಲಾಡಿ ದಿಗ್ವಿಜಯಕುಂದಾಪುರ ವಾಜಪೇಯಿ ಹಾಲಾಡಿ ದಿಗ್ವಿಜಯ

'ಹಿಂದೆ ಕ್ಷೇತ್ರದ ಜನರ ಆಕಾಂಕ್ಷೆಯಂತೆ ಪಕ್ಷೇತರನಾಗಿ ಸ್ಪರ್ಧೆ ಮಾಡಿದೆ. ನಂತರ ಜನರ ಆಶಯದಂತೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಜನರ ಸಲಹೆ ಪಡೆದು ಬಿಜೆಪಿ ಸೇರಿದ್ದೇನೆ' ಎಂದು ಶ್ರೀನಿವಾಸ ಶೆಟ್ಟಿ ಹೇಳಿದರು. ಕುಂದಾಪುರ ಕ್ಷೇತ್ರಕ್ಕೆ ಅವರು ಬಿಜೆಪಿ ಅಭ್ಯರ್ಥಿ ಎಂದು ಈಗಾಗಲೇ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

ರಾಜ್ಯ ಸಂಪುಟ ವಿಸ್ತರಣೆಯ ಸಂದರ್ಭ ತನ್ನನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ ನೀಡಿದ್ದರು. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು...

ಕುಂದಾಪುರ ಬಂದ್ ನಡೆಸಲಾಗಿತ್ತು

ಕುಂದಾಪುರ ಬಂದ್ ನಡೆಸಲಾಗಿತ್ತು

ಕುಂದಾಪುರದ ವಾಜಪೇಯಿ ಎಂದು ಪ್ರಸಿದ್ಧಿ ಪಡೆದಿದ್ದಾರೆ ಹಾಲಾಡಿ ಶ್ರೀನಿವಾಸ ಶೆಟ್ಟಿ. ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ 2012ರಲ್ಲಿ ಕುಂದಾಪುರ ಬಂದ್ ನಡೆಸಲಾಗಿತ್ತು. ಮೊದಲು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಕೊನೆ ಕ್ಷಣದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಸ್ಥಾನ ಕಲ್ಪಿಸಲಾಯಿತು.

ಪಕ್ಷೇತರರಾಗಿ ಸ್ಪರ್ಧೆ

ಪಕ್ಷೇತರರಾಗಿ ಸ್ಪರ್ಧೆ

ಬಿಜೆಪಿಗೆ ರಾಜೀನಾಮೆ ನೀಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. 80,563 ಮತಗಳನ್ನು ಪಡೆದು ಜಯಗಳಿಸಿದರು.

ಜೆಡಿಎಸ್‌, ಕಾಂಗ್ರೆಸ್‌ನಿಂದ ಆಹ್ವಾನ

ಜೆಡಿಎಸ್‌, ಕಾಂಗ್ರೆಸ್‌ನಿಂದ ಆಹ್ವಾನ

2017ರ ಸೆಪ್ಟೆಂಬರ್‌ನಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಆಹ್ವಾನ ಬಂದಿತ್ತು. ಆದರೆ, ಬಿಜೆಪಿ ಸೇರುವುದಾಗಿ ಶ್ರೀನಿವಾಸ ಶೆಟ್ಟಿ ಅವರು ಘೋಷಣೆ ಮಾಡಿದರು.

ಜನವರಿ 31ರಂದು ರಾಜೀನಾಮೆ

ಜನವರಿ 31ರಂದು ರಾಜೀನಾಮೆ

ಜನವರಿ 31ರಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪರಿವರ್ತನಾ ಯಾತ್ರೆ ಸಂದರ್ಭದಲ್ಲಿಯೇ ಬಿ.ಎಸ್.ಯಡಿಯೂರಪ್ಪ ಅವರು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು.

English summary
Kundapur assembly constituency three time MLA Halady Srinivas Shetty joined BJP on February 2, 2018. He will contest for 2018 assembly elections as BJP candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X