ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ಧ ಹೆಲ್ಮೆಟ್‌ ಗೊಂದಲಕ್ಕೆ ತೆರೆ ಎಳೆದ ಸಾರಿಗೆ ಇಲಾಖೆ

|
Google Oneindia Kannada News

ಬೆಂಗಳೂರು, ಜನವರಿ 21 : ಅರ್ಧ ಹೆಲ್ಮೆಟ್ ಧರಿಸುವ ಕುರಿತು ಉಂಟಾಗಿರುವ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. ಸಾರಿಗೆ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ.

ಸವಾರರು ಧರಿಸುವ ಹೆಲ್ಮೆಟ್‌ ಐಎಸ್‌ಐ ಮಾನದಂಡಕ್ಕೆ ಅನುಗುಣವಾಗಿದ್ದರೆ ಸಾಕು ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಫೆ.1ರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬಂದಿ ಸವಾರರು ಅರ್ಧ ಹೆಲ್ಮೆಟ್ ಧರಿಸಬಹುದೇ? ಎಂಬ ಬಗ್ಗೆ ಗೊಂದಲ ಉಂಟಾಗಿತ್ತು.

ISI ಗುರುತಿನ ಹೆಲ್ಮೆಟ್ ಧರಿಸದಿದ್ದಲ್ಲಿ ವಿಮೆ ಹಣ ಸಿಗದುISI ಗುರುತಿನ ಹೆಲ್ಮೆಟ್ ಧರಿಸದಿದ್ದಲ್ಲಿ ವಿಮೆ ಹಣ ಸಿಗದು

ಕೆಲವು ದಿನಗಳ ಹಿಂದೆ ಮೈಸೂರು ನಗರ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿದ್ದ ವಾಹನ ಸವಾರರನ್ನು ತಡೆದಿದ್ದರು. ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದರು. ಅರ್ಧ ಹೆಲ್ಮೆಟ್‌ಗಳನ್ನು ಧರಿಸುವಂತಿಲ್ಲ ಎಂದು ಸೂಚನೆ ನೀಡಿದ್ದರು.

Half face helmets use : Transport department clarification

ಮೈಸೂರು ನಗರ ಪೊಲೀಸರ ಕ್ರಮವನ್ನು ಶ್ಲಾಘಿಸಿದ್ದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು, ಎಲ್ಲಾ ಕಡೆಯೂ ಐಎಸ್‌ಐ ಮಾರ್ಕ್‌ ಇರುವ ಹೆಲ್ಮೆಟ್‌ ಕಡ್ಡಾಯಕ್ಕೆ ಸೂಚನೆ ನೀಡಿದ್ದರು. ಇದರಿಂದಾಗಿ ಬೆಂಗಳೂರು ನಗರ ಪೊಲೀಸರು ಫೆ.1ರಿಂದ ಐಎಸ್‌ಐ ಮಾರ್ಕ್ ಹೊಂದಿರುವ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಹೇಳಿದ್ದರು.

ಪೊಲೀಸರಿಗೂ ಐಎಸ್ಐ ಪ್ರಮಾಣಿತ ಹೆಲ್ಮೆಟ್ ಕಡ್ಡಾಯ: ಇಲಾಖೆ ಸುತ್ತೋಲೆಪೊಲೀಸರಿಗೂ ಐಎಸ್ಐ ಪ್ರಮಾಣಿತ ಹೆಲ್ಮೆಟ್ ಕಡ್ಡಾಯ: ಇಲಾಖೆ ಸುತ್ತೋಲೆ

ಈ ಆದೇಶ ಜನರಲ್ಲಿ ಗೊಂದಲ ಉಂಟು ಮಾಡಿತ್ತು. ಅರ್ಧ ಹೆಲ್ಮೆಟ್ ಧರಿಸಬಹುದೇ?, ಬೇಡವೇ? ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದ್ದರಿಂದ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿ ಸ್ಪಷ್ಟನೆ ನೀಡಿದೆ.

English summary
In the clarification of Karnataka Transport Department said that, People can use ISI mark half face helmets in state. Traffic police has undertaken a mission to enforce two-wheeler safety, It is stopping and fining riders who are spotted wearing non-ISI half-face helmet in Mysuru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X