ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ 60ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್ ಮಾಡಿಸಿದ ಜಮೀರ್ ಅಹ್ಮದ್
ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿ ಉತ್ಸವವು ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಮರುಸೃಷ್ಟಿಸುತ್ತಿದ್ದು, ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ. ಈ ಬಾರಿಯ ಉತ್ಸವದಲ್ಲಿ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾತ್ರವಲ್ಲದೆ, ಒಂದು ಹೃದಯವಂತಿಕೆಯ ಘಟನೆಯೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಹಂಪಿ ಉತ್ಸವದಲ್ಲಿ 'ಹಂಪಿ ಬೈ ಸ್ಕೈ' (Hampi by Sky) ವೀಕ್ಷಣೆಗೆ ಆಗಮಿಸಿದ್ದ 60ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂಪೂರ್ಣ ಉಚಿತವಾಗಿ ಹೆಲಿಕಾಪ್ಟರ್ ರೈಡ್ ಮಾಡಿಸುವ ಮೂಲಕ ಬಡ ಮಕ್ಕಳ ಆಕಾಶಯಾನದ ಕನಸನ್ನು ನನಸು ಮಾಡಿದ್ದಾರೆ.
ಹಂಪಿ ಉತ್ಸವದ ಎರಡನೇ ದಿನವಾದ ಶನಿವಾರ, ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ಏವಿಯೇಷನ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ಸ್ಕೈ ಹೆಲಿಕಾಪ್ಟರ್ ಸೇವೆ'ಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಹಂಪಿಯ ವಿರೂಪಾಕ್ಷ ದೇವಾಲಯ, ಕಲ್ಲಿನ ರಥ, ಉಗ್ರ ನರಸಿಂಹ ಸೇರಿದಂತೆ ಐತಿಹಾಸಿಕ ಸ್ಮಾರಕಗಳನ್ನು ಆಗಸದಿಂದಲೇ ವೀಕ್ಷಿಸಲು ಈ ಹೆಲಿಕಾಪ್ಟರ್ ಸೇವೆಯನ್ನು ಪರಿಚಯಿಸಲಾಗಿದೆ. ಈ ಉದ್ಘಾಟನಾ ಸಂದರ್ಭದಲ್ಲಿ ಹೆಲಿಕಾಪ್ಟರ್ ಹಾರಾಟವನ್ನು ಕಣ್ತುಂಬಿಕೊಳ್ಳಲು ಸ್ಥಳೀಯ ಸರ್ಕಾರಿ ಶಾಲೆಯ ಮುಗ್ಧ ಮಕ್ಕಳು ಮತ್ತು ಅವರ ಪೋಷಕರು ದೊಡ್ಡ ಸಂಖ್ಯೆಯಲ್ಲಿ ಕುತೂಹಲದಿಂದ ಆಗಮಿಸಿದ್ದರು.

ಮಕ್ಕಳ ಉತ್ಸಾಹವನ್ನು ಗಮನಿಸಿದ ಸಚಿವರು, ನೇರವಾಗಿ ಆ ಮಕ್ಕಳ ಬಳಿ ತೆರಳಿ, "ನೀವೂ ಹೆಲಿಕಾಪ್ಟರ್‌ನಲ್ಲಿ ಹೋಗಬೇಕಾ? ಆಕಾಶದಲ್ಲಿ ಹಾರುವ ಆಸೆ ನಿಮಗೂ ಇದೆಯಾ?" ಎಂದು ಪ್ರೀತಿಯಿಂದ ಕೇಳಿದ್ದಾರೆ. ಸಚಿವರ ಈ ಪ್ರಶ್ನೆಗೆ ಪುಳಕಿತರಾದ ಮಕ್ಕಳೆಲ್ಲರೂ ಒಕ್ಕೊರಲಿನಿಂದ "ಹೌದು ಸರ್, ನಮಗೂ ಹಾರುವ ಆಸೆಯಿದೆ" ಎಂದು ಮುಗ್ಧವಾಗಿ ಉತ್ತರಿಸಿದ್ದಾರೆ. ಮಕ್ಕಳ ಈ ಪ್ರತಿಕ್ರಿಯೆ ಕೇಳಿ ಜಮೀರ್ ಅಹ್ಮದ್ ಖಾನ್ ಅವರು, ತಕ್ಷಣವೇ ಅಲ್ಲಿ ಸೇರಿದ್ದ ಸುಮಾರು 60ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್‌ಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಮತ್ತು ಆಯೋಜಕರಿಗೆ ಸೂಚಿಸಿದರು. ಪ್ರತಿಯೊಬ್ಬರಿಗೂ ಸಾವಿರಾರು ರೂಪಾಯಿ ಟಿಕೆಟ್ ದರ ಇರುವ ಈ ರೈಡ್ ಅನ್ನು ಮಕ್ಕಳಿಗೆ ಸಂಪೂರ್ಣ ಉಚಿತವಾಗಿ ಕಲ್ಪಿಸಲಾಯಿತು.
ಬದುಕಿನಲ್ಲಿ ಮೊದಲ ಬಾರಿಗೆ ಹೆಲಿಕಾಪ್ಟರ್ ಹತ್ತಿ ಆಗಸದಿಂದ ಹಂಪಿಯ ಸೌಂದರ್ಯವನ್ನು ಕಣ್ತುಂಬಿಕೊಂಡ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿತ್ತು. "ಹಣ ಕೊಟ್ಟು ಹೆಲಿಕಾಪ್ಟರ್ ಏರಲು ಸಾಧ್ಯವಾಗದ ನಮ್ಮ ಮಕ್ಕಳಿಗೆ ಸಚಿವರು ತಮ್ಮ ಸ್ವಂತ ಹಣದಿಂದ ಉಚಿತವಾಗಿ ಈ ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ನಾವು ಸದಾ ಚಿರಋಣಿ" ಎಂದು ಪೋಷಕರು ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ಮಕ್ಕಳ ಈ ಜಾಲಿ ರೈಡ್‌ಗೆ ಇಡೀ ಕಮಲಾಪುರದ ಜನತೆ ಸಾಕ್ಷಿಯಾಗಿ ಸಂಭ್ರಮಿಸಿದರು.
ಒಟ್ಟಾರೆಯಾಗಿ, ಈ ಬಾರಿಯ ಹಂಪಿ ಉತ್ಸವವು ತಂತ್ರಜ್ಞಾನ ಆಧಾರಿತ ಡ್ರೋನ್ ಶೋ, ಅತ್ಯದ್ಭುತ ಸಾಂಸ್ಕೃತಿಕ ವೈಭವ, ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಈ ಮಾನವೀಯ ಕಾರ್ಯಗಳಿಂದಾಗಿ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications