• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾನಗಲ್ ಉಪ ಚುನಾವಣೆ; ಮಹತ್ವದ ಹೆಜ್ಜೆ ಇಟ್ಟ ಜೆಡಿಎಸ್

|
Google Oneindia Kannada News

ಬೆಂಗಳೂರು, ಜುಲೈ 01; "ಹಾನಗಲ್ ಉತ್ತರ ಕರ್ನಾಟಕದ ಹೆಬ್ಬಾಗಿಲು. ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಬಾಗಿಲು ತೆರೆಯುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಗುರುವಾರ ಬೆಂಗಳೂರಿನ ಜೆಪಿ ಭವನದಲ್ಲಿ ಹಾನಗಲ್ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಚ್. ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹಾನಗಲ್ ಉಪ ಚುನಾವಣೆ: ಕಾಂಗ್ರೆಸ್‌ಗೆ ಶಾಕ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ!ಹಾನಗಲ್ ಉಪ ಚುನಾವಣೆ: ಕಾಂಗ್ರೆಸ್‌ಗೆ ಶಾಕ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ!

ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, "ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರಣ. ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಜೆಡಿಎಸ್‌ನಿಂದ ಅಲ್ಲ" ಎಂದರು.

ಯಡಿಯೂರಪ್ಪ ಅತ್ಯಾಪ್ತ ಮಾಜಿ ಸಚಿವ ಸಿಎಂ ಉದಾಸಿ ವ್ಯಕ್ತಿಚಿತ್ರ ಯಡಿಯೂರಪ್ಪ ಅತ್ಯಾಪ್ತ ಮಾಜಿ ಸಚಿವ ಸಿಎಂ ಉದಾಸಿ ವ್ಯಕ್ತಿಚಿತ್ರ

ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ. ಎಂ. ಉದಾಸಿ ಅನಾರೋಗ್ಯದ ಕಾರಣ ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದಾರೆ. ಇದರಿಂದಾಗಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಜೆಡಿಎಸ್ ಪಕ್ಷ ಈಗಾಗಲೇ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಿದೆ.

ವಚನದ ಮೂಲಕ ಬಿಜೆಪಿ ಕಚ್ಚಾಟ ಬಿಚ್ಚಿಟ್ಟ ಎಚ್. ಡಿ. ಕುಮಾರಸ್ವಾಮಿ ವಚನದ ಮೂಲಕ ಬಿಜೆಪಿ ಕಚ್ಚಾಟ ಬಿಚ್ಚಿಟ್ಟ ಎಚ್. ಡಿ. ಕುಮಾರಸ್ವಾಮಿ

ಬಿಜೆಪಿ ಲೂಟಿ ಮಾಡುತ್ತಿದೆ

ಬಿಜೆಪಿ ಲೂಟಿ ಮಾಡುತ್ತಿದೆ

"ಜೆಡಿಎಸ್‌ನಿಂದ ಅಲ್ಲ ಕಾಂಗ್ರೆಸ್‌ನಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ರಾಜ್ಯವನ್ನು ಬಿಜೆಪಿ ಲೂಟಿ ಮಾಡಿದೆ. ಇಂದು ಅಧಿಕಾರದಲ್ಲಿರುವ ಬಿಜೆಪಿ ಅಂದು ರೈತರ ಮೇಲೆ ಗೋಲಿಬಾರ್ ನಡೆಸಿತ್ತು" ಎಂದು ಕುಮಾರಸ್ವಾಮಿ ಆರೋಪಿಸಿದರು.

ಸಿಎಂ ಆಗಲು ಎಲ್ಲರೂ ಸಿದ್ಧರಾಗಿದ್ದಾರೆ

ಸಿಎಂ ಆಗಲು ಎಲ್ಲರೂ ಸಿದ್ಧರಾಗಿದ್ದಾರೆ

"ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಎಲ್ಲರೂ ಸಿದ್ಧರಾಗಿ ಕೂತಿದ್ದಾರೆ. ಗರಿ ಗರಿ ಬಟ್ಟೆ ಹೊಲಿಸಿಕೊಂಡು 8 ಜನ ತಯಾರಿ ಮಾಡಿಕೊಂಡಿದ್ದಾರೆ. ಚುನಾವಣೆ ನಡೆಯುವುದಕ್ಕೂ ಮೊದಲು ಸಿಎಂ ತಯಾರಿ ನಡೆದಿದೆ" ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಅಧಿಕಾರದಿಂದ ಕೆಳಗಿಳಿಸಿದ್ದು ದೇವರು

ಅಧಿಕಾರದಿಂದ ಕೆಳಗಿಳಿಸಿದ್ದು ದೇವರು

"15 ಜನರ ಮೇಲೆ ನನಗೆ ಯಾವುದೇ ಬೇಸರವಿಲ್ಲ. ನನ್ನನ್ನು ಅಧಿಕಾರದಿಂದ ಕೆಳಗಿ ಇಳಿಸಿದ್ದು ದೇವರು, 15 ಜನರಲ್ಲ. ನನ್ನ ಜೀವವನ್ನು ಉಳಿಸಿದ್ದು ಕೂಡಾ ದೇವರೇ" ಎಂದು ಕುಮಾರಸ್ವಾಮಿ ಹೇಳಿದರು.

  ಭಾರತ ಇಂಗ್ಲೆಂಡ್ ವಿರುದ್ಧ ಯಾವ ಆರಂಭಿಕರನ್ನ ಕಣಕ್ಕಿಳಿಸಿದೆ | Oneindia Kannada
  ಯಾರೇ ಬಂದರೂ ಸ್ವಾಗತ

  ಯಾರೇ ಬಂದರೂ ಸ್ವಾಗತ

  "ಪ್ರಾದೇಶಿಕ ಪಕ್ಷಕ್ಕೆ ಬಲ ತುಂಬಲು ಯಾರೇ ಬಂದರೂ ಜೆಡಿಎಸ್ ಪಕ್ಷ ಸ್ವಾಗತ ಮಾಡುತ್ತದೆ" ಎಂದು ಕುಮಾರಸ್ವಾಮಿ ಹೇಳಿದರು. 2023ರ ಚುನಾವಣೆ ತಯಾರಿ ಆರಂಭಿಸಿರುವ ಜೆಡಿಎಸ್ ಉತ್ತರ ಕರ್ನಾಟಕದಿಂದ ಪಕ್ಷ ಸಂಘಟನೆ ಮಾಡುವ ಚಿಂತನೆಯಲ್ಲಿದೆ.

  English summary
  Ahead of the Haveri district Hanagal by elections more than 300 workers joined JD(S) in the presence of former chief minister H. D. Kumaraswamy.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X