Get Updates
Get notified of breaking news, exclusive insights, and must-see stories!
Live

Karnataka By Elections Result Live: ಹಾನಗಲ್‌ನಲ್ಲಿ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿಗೆ ಜಯ

ಬೆಂಗಳೂರು, ನವೆಂಬರ್ 02; ಕರ್ನಾಟಕದ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಎರಡು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಜಯಗಳಿಸಿದೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ.

ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ಹಾನಗಲ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಎದುರಾಯಿತು. ಆದರೆ ಸಿಂದಗಿಯಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡು 31,088 ಮತಗಳ ಅಂತರದಲ್ಲಿ ಗೆದ್ದರು.

ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಮತ್ತು ಬಿಜೆಪಿಯ ಶಿವರಾಜ ಸಜ್ಜನರ ನಡುವೆ ಪ್ರಬಲ ಪೈಪೋಟಿ ನಡೆಯಿತು. ಅಂತಿಮವಾಗಿ ಶ್ರೀನಿವಾಸ ಮಾನೆ 7598 ಮತಗಳಿಂದ ಗೆಲುವು ಸಾಧಿಸಿದರು. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಪಕ್ಷದ ಅಭ್ಯರ್ಥಿ ಸೋಲು ಕಂಡು ಮುಖಭಂಗ ಅನುಭವಿಸಿದರು.

 Hanagal, Sindagi By Election Results Live Updates, News and Highlights

ಹಾನಗಲ್‌ನಲ್ಲಿ ಶಾಸಕರಾಗಿದ್ದ ಸಿ. ಎಂ. ಉದಾಸಿ ನಿಧನದಿಂದ ಮತ್ತು ಸಿಂಧಗಿಯಲ್ಲಿ ಶಾಸಕರಾಗಿದ್ದ ಎಂ. ಸಿ. ಮುನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಎರಡೂ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದ ಜೆಡಿಎಸ್ ಹೀನಾಯ ಸೋಲು ಕಂಡಿತು. 2018ರಲ್ಲಿ ಗೆದ್ದಿದ್ದ ಸಿಂದಗಿ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿತು.

ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ, ಚಿತ್ರಗಳು, ವಿಡಿಯೋ ಈ ಪುಟದಲ್ಲಿ ಓದುಗರಿಗೆ ಸಿಗಲಿದೆ.

Nov 02, 2021, 5:35 pm IST

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 87,113 ಮತಗಳು, ಬಿಜೆಪಿಯ ಶಿವರಾಜ್ ಸಜ್ಜನರಗೆ 79,515 ಮತಗಳು ಹಾಗೂ ಜೆಡಿಎಸ್​ ಅಭ್ಯರ್ಥಿ ನಿಯಾಜ್ ಶೇಖ್​ಗೆ 921 ಮತಗಳು ಸಿಕ್ಕಿವೆ. ಕಾಂಗ್ರೆಸ್​ನ ಶ್ರೀನಿವಾಸ ಮಾನೆಗೆ 7,598 ಮತಗಳ ಅಂತದಿಂದ ಜಯ ಸಿಕ್ಕಿದೆ.
Nov 02, 2021, 4:48 pm IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಗಲ್ ಪಕ್ಕದ ಕ್ಷೇತ್ರದವರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಬಿಜೆಪಿ ಸೋತಿದೆ. ಹಾನಗಲ್‌ನಲ್ಲಿ ಪ್ರಚಾರದ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ, ನಾನು ಅಕ್ಕಿಆಲೂರಿನ ಅಳಿಯ ಎಂದೆಲ್ಲಾ ಭಾವನಾತ್ಮಕವಾಗಿ ಮಾತನಾಡಿದರೂ ಕೂಡ ಜನರು ಅವರ ಮಾತಿಗೆ ಮರುಳಾಗದೆ ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Nov 02, 2021, 4:13 pm IST

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಮ್ಮ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಅಭೂತಪೂರ್ವ ವಿಜಯಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಎಲ್ಲ ಹಿರಿಯ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Nov 02, 2021, 3:54 pm IST

ಕರ್ನಾಟಕದಲ್ಲಿ ನಮಗೆ ಮಿಶ್ರ ಫಲಿತಾಂಶ ಸಿಕ್ಕಿದ್ದು, ಇದಕ್ಕೆ ಇವಿಎಂ ದೂರಲ್ಲ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನನಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
Nov 02, 2021, 3:53 pm IST

ಹಾನಗಲ್​ನಲ್ಲಿ ನಿರೀಕ್ಷಿಸಿದಷ್ಟು ಮತಗಳು ಬಂದಿಲ್ಲ, ಹೀಗಾಗಿಯೇ ನಮಗೆ ಹಿನ್ನಡೆ ಆಗಿದೆ. ಸಿ.ಎಂ. ಉದಾಸಿಗೆ ಸಲ್ಲಬೇಕಿದ್ದ ಮತ ಪಡೆಯಲು ಆಗಿಲ್ಲ. ನಮ್ಮ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದರು. ಉಪ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಧನ್ಯವಾದ ಎಂದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Nov 02, 2021, 3:24 pm IST

ಜೆಡಿಎಸ್ ಪಕ್ಷವು ಬಿಜೆಪಿ ಬಿ ಟೀಮ್ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ. ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.‌ಡಿ. ಕುಮಾರಸ್ವಾಮಿ ಹೇಳಿದರು.
Nov 02, 2021, 2:39 pm IST

ಹಾನಗಲ್‌ ಉಪ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಪ್ರತಿಕ್ರಿಯೆ ನೀಡಿದ್ದು, ಸೋಲಿನ ಹೊಣೆ ಪಕ್ಷದ್ದೂ ಹೌದು, ನನ್ನದೂ ಹೌದು. ಸೋಲಿಗೆ ಕಾರಣ ಗೊತ್ತಾಗುತ್ತಿಲ್ಲ. ವಿಜೇತ ಶ್ರೀನಿವಾಸ ಮಾನೆಗೆ ಅಭಿನಂದನೆ ಎಂದು ಹೇಳಿದ್ದಾರೆ.
Nov 02, 2021, 2:15 pm IST

ಹಾನಗಲ್ ಕ್ಷೇತ್ರದ 19ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 3789 ಮತ, ಬಿಜೆಪಿ ಅಭ್ಯರ್ಥಿಗೆ 3516 ಮತ ಹಾಗೂ ಜೆಡಿಎಸ್ ಅಭ್ಯರ್ಥಿಗೆ 55 ಮತ ಲಭಿಸಿದೆ.
Nov 02, 2021, 1:55 pm IST

ಅಂತಿಮವಾಗಿ 31,573 ಮತಗಳ ಅಂತರದಿಂದ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು.
Nov 02, 2021, 1:51 pm IST

ಸಿಂದಗಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ, ಜೆಡಿಎಸ್‌ನಿಂದ ಬಂದ ಕಾರ್ಯಕರ್ತರೊಂದಿಗೆ ಹೊಂದಾಣಿಕೆಯಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Nov 02, 2021, 1:46 pm IST

ಹಾನಗಲ್‌ನ 17ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 78342 ಮತ, ಬಿಜೆಪಿ ಅಭ್ಯರ್ಥಿ 71326 ಮತ ಹಾಗೂ ಜೆಡಿಎಸ್ ಅಭ್ಯರ್ಥಿ 820 ಮತಗಳನ್ನು ಪಡೆದಿದ್ದಾರೆ. 7016 ಮತಗಳಿಂದ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
Nov 02, 2021, 1:36 pm IST
ಕರ್ನಾಟಕ

ಕಾಂಗ್ರೆಸ್ ಮುನ್ನಡೆ

ಹಾನಗಲ್‌ನಲ್ಲಿ 6,828 ಮತಗಳ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ.
Nov 02, 2021, 1:23 pm IST
ಕರ್ನಾಟಕ

ಹಾನಗಲ್

ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಮುನ್ನಡೆ. ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 73,450 ಮತಗಳು ಬಿಜೆಪಿಯ ಶಿವರಾಜ್ ಸಜ್ಜನರ 66,622 ಜೆಡಿಎಸ್‌ನ ನಿಯಾಜ್ ಶೇಕ್ 714
Nov 02, 2021, 1:16 pm IST
ಕರ್ನಾಟಕ

ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್

ಸಿಂದಗಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀ ರಮೇಶ್‌ ಭೂಸನೂರ ಅವರಿಗೆ ಅಭಿನಂದನೆಗಳು. ಕ್ಷೇತ್ರದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಮತ್ತು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
Nov 02, 2021, 1:14 pm IST
ಕರ್ನಾಟಕ

ಸಿಂಧಗಿ ಉಪ ಚುನಾವಣೆಯಲ್ಲಿ ಗೆಲುವು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್
Nov 02, 2021, 1:04 pm IST
ಕರ್ನಾಟಕ

ಬಸವರಾಜ ಬೊಮ್ಮಾಯಿಗೆ ಹಿನ್ನಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಮುಖ್ಯಮಂತ್ರಿಗಳ ಸ್ವಕ್ಷೇತ್ರದ ಪಕ್ಕದ ಕ್ಷೇತ್ರದಲ್ಲೇ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ.
Nov 02, 2021, 1:01 pm IST
ಕರ್ನಾಟಕ

ಹಾನಗಲ್ ಉಪ ಚುನಾವಣೆ

ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿದ್ದು, "ಹಾನಗಲ್‌ನಲ್ಲಿ ಜನಬಲ ಗೆದ್ದಿದೆ, ಹಣ ಬಲ ಸೋತಿದೆ. ಹಾನಗಲ್ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ. ನಮ್ಮ ನಾಯಕರು ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ, ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದರು ಜನರ ಕಲ್ಯಾಣ ಮಾಡಲಿ" ಎಂದು ಹೇಳಿದರು.
Nov 02, 2021, 12:57 pm IST
ದಾದ್ರಾ ಹಾಗೂ ನಗರ್ ಹವೇಲಿ

ಲೋಕಸಭೆ ಉಪ ಚುನಾವಣೆ

ದಾದ್ರ ಮತ್ತು ನಗರ ಹವೇಲಿ ಲೋಕಸಭೆ ಉಪ ಚುನಾವಣೆಯಲ್ಲಿ ಶಿವಸೇನೆ ಅಭ್ಯರ್ಥಿ 20,000 ಮತಗಳ ಅಂತರದಿಂದ ಮುನ್ನಡೆ ಪಡೆದುಕೊಂಡಿದ್ದಾರೆ.
Nov 02, 2021, 12:51 pm IST
ಕರ್ನಾಟಕ

ಸಿಂದಗಿ ಬಿಜೆಪಿ ಗೆಲುವು

ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿಗೆ 31,185 ಮತಗಳ ಗೆಲುವು. ಅಧಿಕೃತ ಘೋಷಣೆ ಬಾಕಿ ಬಿಜೆಪಿಯ ರಮೇಶ್ ಭೂಸನೂರು 93,865 ಮತಗಳು ಕಾಂಗ್ರೆಸ್‌ನ ಅಶೋಕ್ ಮನಗೂಳಿ 62,680 ಜೆಡಿಎಸ್‌ನ ನಾಜಿಯಾ ಶಕೀಲಾ ಅಂಗಡಿ 4353
Nov 02, 2021, 12:43 pm IST
ಕರ್ನಾಟಕ

ಶ್ರೀನಿವಾಸ ಮಾನೆ

ಶ್ರೀನಿವಾಸ ಮಾನೆ
ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 7 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಪಡೆದಿದ್ದಾರೆ.
Nov 02, 2021, 12:37 pm IST
ಕರ್ನಾಟಕ

ಕಾಂಗ್ರೆಸ್ 2ನೇ ಸ್ಥಾನಕ್ಕೆ

2018ರ ಚುನಾವಣೆಯಲ್ಲಿ ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷ 22,818 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರಿ 62,680 ಮತಗಳನ್ನು ಪಡೆದು 2ನೇ ಸ್ಥಾನವನ್ನು ಪಡೆದಿದೆ.
Nov 02, 2021, 12:35 pm IST
ಕರ್ನಾಟಕ

ಹಾನಗಲ್

ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 7063 ಮತಗಳ ಮುನ್ನಡೆ. ಬಿಜೆಪಿ 52,922. ಕಾಂಗ್ರೆಸ್ 59,985. ಜೆಡಿಎಸ್ 629 ಮತಗಳು.
Nov 02, 2021, 12:32 pm IST
ಕರ್ನಾಟಕ

ಕುಮಾರಸ್ವಾಮಿ ಪ್ರತಿಕ್ರಿಯೆ

"ನಾವು ಉಪ ಚುನಾವಣೆಗೆ ಹೆಚ್ಚು ಒತ್ತು ಕೊಡುವುದಿಲ್ಲ. ನಮ್ಮ ಗುರಿ 2023ರ ವಿಧಾನಸಭೆ ಚುನಾವಣೆ" ಎಂದು ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
Nov 02, 2021, 12:30 pm IST
ಕರ್ನಾಟಕ

ಸಿಂದಗಿ ಕ್ಷೇತ್ರ ಕಳೆದುಕೊಂಡ ಜೆಡಿಎಸ್

2018ರಲ್ಲಿ ಸಿಂದಗಿಯಲ್ಲಿ ಜೆಡಿಎಸ್‌ನ ಎಂ. ಸಿ. ಮನಗೂಳಿ ಗೆಲುವು ಸಾಧಿಸಿದ್ದರು. 2021ರ ಉಪ ಚುನಾವಣೆಯಲ್ಲಿ ಬಿಜೆಪಿ ಗೆದಿದ್ದು, ಅಧಕೃತ ಘೋಷಣೆ ಮಾತ್ರ ಬಾಕಿ ಇದೆ.
Nov 02, 2021, 12:24 pm IST
ರಾಜಸ್ಥಾನ

ಉಪ ಚುನಾವಣೆ

ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ
Nov 02, 2021, 12:22 pm IST

ಹಾನಗಲ್ ಕಾಂಗ್ರೆಸ್ ಮುನ್ನಡೆ

ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 6,818 ಮತಗಳ ಮುನ್ನಡೆ. ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 55,665 ಬಿಜೆಪಿಯ ಶಿವರಾಜ್ ಸಜ್ಜನರ 48,847 ಜೆಡಿಎಸ್‌ನ ನಿಯಾಜ್ ಶೇಕ್ 570 ಮತಗಳು
Nov 02, 2021, 12:18 pm IST
ಕರ್ನಾಟಕ

ಸಿಂದಗಿ

ಸಿಂದಗಿಯಲ್ಲಿ 21ನೇ ಸುತ್ತಿನಲ್ಲಿ ಬಿಜೆಪಿಗೆ 30,846 ಮತಗಳ ಮುನ್ನಡೆ. ಬಿಜೆಪಿ 92,581 ಮತ. ಕಾಂಗ್ರೆಸ್ 61,735, ಜೆಡಿಎಸ್ 4,248 ಮತಗಳು.
Nov 02, 2021, 12:09 pm IST
ಕರ್ನಾಟಕ

ಹಾನಗಲ್

ಹಾನಗಲ್‌ನಲ್ಲಿ 8 ಸುತ್ತಿನ ಮತ ಎಣಿಕೆ ಬಾಕಿ. ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 6,459 ಮತಗಳ ಮುನ್ನಡೆ. ಬಿಜೆಪಿ 44,178 ಮತಗಳು, ಕಾಂಗ್ರೆಸ್ 50,637, ಜೆಡಿಎಸ್ 523 ಮತಗಳು.
Nov 02, 2021, 12:04 pm IST
ಕರ್ನಾಟಕ

ಹಾನಗಲ್ ಕಾಂಗ್ರೆಸ್ ಮುನ್ನಡೆ

ಹಾನಗಲ್‌ನಲ್ಲಿ 11ನೇ ಸುತ್ತಿನ ಬಳಿಕ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 6,459 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
Nov 02, 2021, 12:00 pm IST
ಕರ್ನಾಟಕ

ಸಿಂದಗಿ

ಸಿಂದಗಿಯಲ್ಲಿ 20ನೇ ಸುತ್ತಿನಲ್ಲಿ ಬಿಜೆಪಿಗೆ 28,462 ಮತಗಳ ಮುನ್ನಡೆ. ಕೇವಲ 2 ಸುತ್ತಿನ ಮತ ಎಣಿಕೆ ಬಾಕಿ ಇದೆ.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+