• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
LIVE

Hanagal, Sindgi By-Polls Voting Live: ಉಪ ಚುನಾವಣೆ: ಹಾನಗಲ್ 90, ಸಿಂಧಗಿ ಶೇ 82.85ರಷ್ಟು ಮತದಾನ

|
Google Oneindia Kannada News

ಕರ್ನಾಟಕ, ಅಕ್ಟೋಬರ್ 30: ಕರ್ನಾಟಕದ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಶನಿವಾರ ಉಪ ಚುನಾವಣೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು, 29 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ.

ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಮತ್ತು ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಅಕ್ಟೋಬರ್ 30ರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಸಿಂಧಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಜುಲೈ 26ರಂದು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು.

Hanagal, Sindagi By Elections Voting Live Updates, News and Highlights

ಹಾನಗಲ್ ಕ್ಷೇತ್ರ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮುಖ್ಯಮಂತ್ರಿಗಳ ಮುಂದಿದೆ.

Newest First Oldest First
9:08 PM, 30 Oct
ಸಂಜೆ 7 ಗಂಟೆಯ ತನಕ ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಶೇ 90.60, ಸಿಂಧಗಿ ಕ್ಷೇತ್ರದಲ್ಲಿ ಶೇ 82.85ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
5:37 PM, 30 Oct
ಸಂಜೆ 5 ಗಂಟೆಯ ತನಕ ವಿಜಯಪುರದಲ್ಲಿ ಶೇ 64.54 ಮತ್ತು ಹಾನಗಲ್‌ನಲ್ಲಿ 77.90ಯಷ್ಟು ಮತದಾನವಾಗಿದೆ.
4:45 PM, 30 Oct
ಹಾನಗಲ್ ಉಪ ಚುನಾವಣೆಯಲ್ಲಿ ಕುಟುಂಬದವರ ಜೊತೆ ಮತದಾನಮಾಡಿದ ಹಾವೇರಿ ಸಂಸದ ಶಿವಕುಮಾರ್ ಉದಾಸಿ.
3:34 PM, 30 Oct
ಮಧ್ಯಾಹ್ನ 3 ಗಂಟೆಗೆ ಸಿಂಧಗಿ,ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಆದ ಮತದಾನದ ವಿವರ
3:09 PM, 30 Oct
ವೃದ್ಧರು, ಮಹಿಳೆಯರು ಸೇರಿದಂತೆ ಯುವ ಮತದಾರರು ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣಾ ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನದ ನಂತರ ಮತದಾನ ಚುರುಕುಗೊಂಡಿದೆ.
1:33 PM, 30 Oct
ಕರ್ನಾಟಕದ ಎರಡು ವಿಧಾನಸಭಾ ಉಪ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 32.49ರಷ್ಟು ಮತದಾನವಾಗಿದೆ.
1:32 PM, 30 Oct
ಕರ್ನಾಟಕದ ಎರಡು ವಿಧಾನಸಭಾ ಉಪ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಶೇ.44.59ರಷ್ಟು ಮತದಾನವಾಗಿದೆ.
12:07 PM, 30 Oct
ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಹಾನಗಲ್‌ ಶ್ರೀಕುಮಾರೇಶ್ವರ ಸರ್ಕಾರಿ ಪದವಿ ಕಾಲೇಜಿನಲ್ಲಿರುವ ಮತಗಟ್ಟೆ ಸಂಖ್ಯೆ 89ರಲ್ಲಿ ಹಕ್ಕು ಚಲಾಯಿಸಿದರು.
12:06 PM, 30 Oct
ಸಿಂದಗಿ ಜೆಡಿಎಸ್ ಅಭ್ಯರ್ಥಿ ನಾಜೀಯಾ ಅಂಗಡಿ ದರ್ಗಾಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಗಣಿಗಾರ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
12:02 PM, 30 Oct
ಹಾನಗಲ್ ಉಪ ಚುನಾವಣೆ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಸಂಸದ ಶಿವಕುಮಾರ್ ಉದಾಸಿ.
11:59 AM, 30 Oct
ಕರ್ನಾಟಕದ ಎರಡು ವಿಧಾನಸಭಾ ಉಪ ಚುನಾವಣೆ: ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 32.47ರಷ್ಟು ಮತದಾನವಾಗಿದೆ.
11:58 AM, 30 Oct
ಕರ್ನಾಟಕದ ಎರಡು ವಿಧಾನಸಭಾ ಉಪ ಚುನಾವಣೆ: ಬೆಳಗ್ಗೆ 11 ಗಂಟೆಯವರೆಗೆ ಹಾನಗಲ್ ಕ್ಷೇತ್ರದಲ್ಲಿ ಶೇ.22.46ರಷ್ಟು ಮತದಾನವಾಗಿದೆ.
11:50 AM, 30 Oct
ಕುಟುಂಬ ಸಮೇತರಾಗಿ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಸಿಂದಗಿ ತಾಲ್ಲೂಕಿನ ದೇವಣಗಾಂವ್ ಗ್ರಾಮದ ಸರ್ಕಾರಿ ಶಾಲೆಯ ವಾರ್ಡ್ ನಂಬರ್ 9ರಲ್ಲಿ ಮತದಾನ ಮಾಡಿದರು.
11:48 AM, 30 Oct
ಹಾನಗಲ್ ವಿಧಾನಸಭಾ ಕ್ಷೇತ್ರದ ಮೂರು ಬೂತ್‌ಗಳಲ್ಲಿ ಇವಿಎಂ ಯಂತ್ರ (EVM) ದೋಷದ ಪರಿಣಾಮ ಮತದಾನ ತಡವಾಗಿ ಆರಂಭವಾಯಿತು. ಇನ್ನುಳಿದಂತೆ ಎರಡೂ ಕ್ಷೇತ್ರಗಳ ಎಲ್ಲ ಬೂತ್ ಗಳಲ್ಲಿ ಮತದಾನ ನಡೆಯುತ್ತಿದೆ.
11:41 AM, 30 Oct
ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಬೆಳಗ್ಗೆ ನೀರಸವಾಗಿ ಮತದಾನ ಕಂಡು ಬಂದರೂ, 10 ಗಂಟೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸುತ್ತಿದ್ದಾರೆ.
11:12 AM, 30 Oct
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಭಾವಚಿತ್ರ ಹಾಗೂ ಕಾಂಗ್ರೆಸ್ ಪಕ್ಷದ ಗುರುತು ಹಾಕಿ ಮತಚೀಟಿ ಹಂಚುತ್ತಿರುವ ಆರೋಪ ಸಿಂದಗಿ ಕ್ಷೇತ್ರದ ಬೋರಗಿ ಗ್ರಾಮದಲ್ಲಿ ಕೇಳಿಬಂದಿದ್ದು, ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
10:41 AM, 30 Oct
ಹಾನಗಲ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತದಾರರು ಮತ ಹಾಕುತ್ತಿರುವುದು.
10:21 AM, 30 Oct
ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯ ಮತದಾನ ನಡೆಯುತ್ತಿದ್ದು, ಹೆಚ್ಚಿನ ಮತದಾನ ಮಾಡುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ವಿನಂತಿಸಿದ್ದಾರೆ.
10:17 AM, 30 Oct
ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯ ಮತದಾನ ನಡೆಯುತ್ತಿದ್ದು, ಹೆಚ್ಚಿನ ಮತದಾನ ಮಾಡುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ವಿನಂತಿಸಿದ್ದಾರೆ.
10:06 AM, 30 Oct
ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ: ಬೆಳಗ್ಗೆ 9 ಗಂಟೆಯವರೆಗೆ ಒಟ್ಟು ಶೇಕಡಾ 9.77ರಷ್ಟು ಮತದಾನ. ಹಾನಗಲ್ ಕ್ಷೇತ್ರದಲ್ಲಿ ಶೇ.10.1, ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 9.48ರಷ್ಟು ಮತದಾನವಾಗಿದೆ.
9:47 AM, 30 Oct
ಸಿಂದಗಿ ಉಪ ಚುನಾವಣೆ: ಬೆಳಿಗ್ಗೆ 9 ವರೆಗೆ ಶೇಕಡಾ 10ರಷ್ಟು ಮತದಾನ ಆಗಿದೆ.
9:24 AM, 30 Oct
ಸಿಂದಗಿ ಉಪ ಚುನಾವಣೆಯಲ್ಲಿ ಮತದಾನ ಕೇಂದ್ರಗಳಲ್ಲಿ ಮತದಾರರು ಸಾಲುಗಟ್ಟಿ ನಿಂತಿರುವುದು.
9:04 AM, 30 Oct
ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸುತ್ತಿದ್ದು, ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.
8:04 AM, 30 Oct
ಹಾನಗಲ್ ಕ್ಷೇತ್ರದಲ್ಲಿರುವ 33 ಸೂಕ್ಷ್ಮ ಮತ್ತು 3 ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 121 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಒಂದು ವಿಕಲಚೇತನ ಸ್ನೇಹಿ ಮತಗಟ್ಟೆ ಮತ್ತು ಎರಡು ಸಖಿ ಮತಗಟ್ಟೆಗಳ ಸ್ಥಾಪನೆ ಸಹ ಮಾಡಲಾಗಿದೆ.
7:40 AM, 30 Oct
ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಡಿವೈಎಸ್ಪಿ-02, ಸಿಪಿಐ-4, ಪಿಎಸ್ಐ-22, ಎಎಸ್ಐ-70, ಹೆಡ್ ಕಾನ್‌ಸ್ಟೆಬಲ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್-477, ಡಿಎಆರ್-40, ಐ ಆರ್ ಬಿ-180, ಸಿಐಎಸ್ಎಫ್-185 ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.
7:38 AM, 30 Oct
ಹಾನಗಲ್ ಕ್ಷೇತ್ರದಲ್ಲಿ 610 ಪೊಲೀಸ್ ಸಿಬ್ಬಂದಿ, ನಾಲ್ಕು ಡಿವೈಎಸ್ಪಿ, 11 ಸಿಪಿಐಗಳು, 29 ಪಿಎಸ್ಐಗಳು, 85 ಎಎಸ್ಐಗಳು, 481 ಜನ ಕಾನ್‌ಸ್ಟೆಬಲ್‌ಗಳು, 30 ಜನ ಮಹಿಳಾ ಸಿಬ್ಬಂದಿಗಳು, 90 ಜನ ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಆರ್‌ಪಿಎಫ್ ಮತ್ತು 90 ಜನ ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಐಎಸ್ಎಫ್ ತಂಡ ನಿಯೋಜನೆ ಮಾಡಲಾಗಿದೆ.
7:23 AM, 30 Oct
ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆಸ್‌ನಿಂದ ಅಶೋಕ್. ಎಂ. ಮನಗೂಳಿ, ಜೆಡಿಎಸ್‌ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.
7:20 AM, 30 Oct
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ, ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ, ಜೆಡಿಎಸ್‌ನಿಂದ ನಿಯಾಜ್ ಶೇಖ್ ಸೇರಿದಂತೆ 13 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.
7:09 AM, 30 Oct
ಹಾನಗಲ್ ಕ್ಷೇತ್ರದಲ್ಲಿ ಒಟ್ಟು 2,04,481 ಮತದಾರರು ಮತ ಚಲಾಯಿಸಲಿದ್ದು, ಈ ಪೈಕಿ 1,05,525 ಪುರುಷರು, 98,953 ಮಹಿಳೆಯರು ಹಾಗೂ 3 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ.
7:07 AM, 30 Oct
ಸಿಂದಗಿ ಕ್ಷೇತ್ರದಲ್ಲಿ ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದು, ಈ ಪೈಕಿ 1,20,844 ಪುರುಷರು, 1,13,561 ಮಹಿಳೆಯರು ಹಾಗೂ 32 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ.
READ MORE

English summary
The bypolls to Sindgi (Vijayapura) and Hangal (Haveri) assembly constituencies will be held on October 30. Check out the Hanagal and Sindagi By Elections Voting Live Updates, News and Highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X