ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಪರಿಸ್ಥಿತಿ ನಿರ್ವಹಣೆ; ಕಾಂಗ್ರೆಸ್‌ಗೆ ಆರೋಗ್ಯ ಸಚಿವರಿಂದ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24; ವಿಧಾನಸಭೆ ಕಲಾಪವನ್ನು ಒಂದು ವಾರ ವಿಸ್ತರಣೆ ಮಾಡಿ ಎಂದು ಪ್ರತಿಪಕ್ಷ ಕಾಂಗ್ರೆಸ್ ಬೇಡಿಕೆ ಇಟ್ಟಿತ್ತು. ಕಾಂಗ್ರೆಸ್ ಸದಸ್ಯರ ಬೇಡಿಕೆಗೆ ಒಪ್ಪಿಗೆ ಸಿಗದಿದ್ದಾಗ ಸಭಾತ್ಯಾಗ ಮಾಡಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಶುಕ್ರವಾರದ ಕಲಾಪ ಆರಂಭವಾಗುತ್ತಿದ್ದಂತೆ ನಮ್ಮ‌ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಧರಣಿ ಆರಂಭಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಜನರ ಸಮಸ್ಯೆಗಳು ಚರ್ಚೆಯಾಗುತ್ತಿಲ್ಲ. ಒಂದು ವಾರ ಕಲಾಪ ವಿಸ್ತರಣೆ ಮಾಡಿ" ಎಂದು ಆಗ್ರಹಿಸಿದರು.

 2 ಡೋಸ್ ಲಸಿಕೆ ಪಡೆದವರಲ್ಲಿ ದೀರ್ಘಕಾಲೀನ ಪರಿಣಾಮ ಕಡಿಮೆ 2 ಡೋಸ್ ಲಸಿಕೆ ಪಡೆದವರಲ್ಲಿ ದೀರ್ಘಕಾಲೀನ ಪರಿಣಾಮ ಕಡಿಮೆ

ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಒಂದು ವಾರ ಅಧಿವೇಶನ ಮುಂದುವರೆಸುವಂತೆ ಒತ್ತಾಯಿಸಿದರು. ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿದೆ, ರಾಜ್ಯದ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕೋವಿಡ್ ಲಸಿಕೆ ಅಭಿಯಾನ; ಸಿಬ್ಬಂದಿಗೆ ಭಾನುವಾರ ವಿರಾಮ ಕೋವಿಡ್ ಲಸಿಕೆ ಅಭಿಯಾನ; ಸಿಬ್ಬಂದಿಗೆ ಭಾನುವಾರ ವಿರಾಮ

ಆದರೆ ಸರ್ಕಾರ ಕಲಾಪ ಮುಂದುವರೆಸಲು ಒಪ್ಪಿಗೆ ಕೊಡಲಿಲ್ಲ. ಆಗ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಕಾಂಗ್ರೆಸ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. 'ಕೋವಿಡ್-19 ಸಾವಿನಲ್ಲೂ ರಾಜಕೀಯ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯನ್ನು ರಾಜ್ಯದ ಜನತೆ ಗಮನಿಸಿದ್ದಾರೆ' ಎಂದು ಹೇಳಿದ್ದಾರೆ.

ಕೋವಿಡ್ ಸಾವು: ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ವಿತರಣೆಕೋವಿಡ್ ಸಾವು: ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ವಿತರಣೆ

ಗುರುವಾರ ಸದನದಲ್ಲಿ ಕಾವೇರಿದ ಚರ್ಚೆ

ಗುರುವಾರ ಸದನದಲ್ಲಿ ಕಾವೇರಿದ ಚರ್ಚೆ

ಕೋವಿಡ್ ಪರಿಸ್ಥಿತಿ ನಿರ್ವಹಣೆ, ಸ್ಯಾನಿಟೈಸರ್ ಖರೀದಿ, ಕೋವಿಡ್‌ನಿಂದ ಮೃತಪಟ್ಟವರ ಲೆಕ್ಕ ಸೇರಿದಂತೆ ವಿವಿಧ ವಿಚಾರಗಳ ಕುರಿತು ಗುರುವಾರ ಕಲಾಪದಲ್ಲಿ ಕಾವೇರಿದ ಚರ್ಚೆ ನಡೆದಿತ್ತು. ಕೋವಿಡ್ ಪರಿಸ್ಥಿತಿ ನಿಭಾಯಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಆರೋಪ ಮಾಡಿತ್ತು. ಆದರೆ ಇಂದು ಸರ್ಕಾರ ಉತ್ತರ ಕೊಡುವ ಮೊದಲೇ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಆರೋಗ್ಯ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾ. ಕೆ. ಸುಧಾಕರ್ ಟ್ವೀಟ್

ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, 'ಕೋವಿಡ್-19 ನಿರ್ವಹಣೆ ಕುರಿತು ಸದನದಲ್ಲಿ ನೆನ್ನೆ 5 ಗಂಟೆಗಳ ಕಾಲ ರಾಜಕೀಯ ಭಾಷಣ ಮಾಡಿದ ವಿಪಕ್ಷಗಳಿಗೆ ಇಂದು ಸರ್ಕಾರದ ಉತ್ತರ ಕೇಳುವ ಆಸಕ್ತಿಯೂ ಇಲ್ಲ, ಧೈರ್ಯವೂ ಇಲ್ಲ. ಸತ್ಯವನ್ನು ಕೇಳಲಾಗದೆ ಪಲಾಯನ ಮಾಡಿರುವ ಕಾಂಗ್ರೆಸ್ ಪಕ್ಷದ ಈ ನಡೆ, ಜನರ ಅರೋಗ್ಯದ ಬಗ್ಗೆ ಅವರಿಗೆ ಇರುವ ನಿಜವಾದ ಕಾಳಜಿ ಮತ್ತು ಬದ್ಧತೆಯನ್ನು ಬಟಾಬಯಲು ಮಾಡಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ

'ಸರ್ಕಾರದ ಉತ್ತರ ಕೇಳದೆ ಸದನದಿಂದ ಪಲಾಯನ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ತಾನು ಮಾಡಿರುವ ಎಲ್ಲ ಆರೋಪಗಳೂ ಸತ್ಯಕ್ಕೆ ದೂರವಾದ, ನಿರಾಧಾರ ಮತ್ತು ರಾಜಕೀಯ ಪ್ರೇರಿತ ಆರೋಪಗಳು ಎಂದು ಸಾಬೀತುಪಡಿಸಿದೆ. ಕಾಂಗ್ರೆಸ್ ಪಕ್ಷದ ಇಂದಿನ ನಡೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ' ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸಾವಿನಲ್ಲೂ ರಾಜಕೀಯ

'ಕೋವಿಡ್-19 ಸಾವಿನಲ್ಲೂ ರಾಜಕೀಯ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯನ್ನ ರಾಜ್ಯದ ಜನತೆ ಗಮನಿಸಿದ್ದಾರೆ. ಸಾವಿನ ಮನೆಯಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್ ಪಕ್ಷದ ಈ ನೀಚ ರಾಜಕೀಯವನ್ನು ಜನತೆ ಖಂಡಿತ ಕ್ಷಮಿಸುವುದಿಲ್ಲ' ಎಂದು ಆರೋಗ್ಯ ಸಚಿವರು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓಂ ಬಿರ್ಲಾ ಭಾಷಣಕ್ಕೆ ವಿರೋಧ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕರ್ನಾಟಕ ಪ್ರವಾಸದಲ್ಲಿದ್ದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಇದನ್ನು ವಿರೋಧಿಸಿದೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ.

'ಸನ್ಮಾನ್ಯ ಲೋಕಸಭಾಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವುದನ್ನು ಧಿಕ್ಕರಿಸಿರುವುದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ ನಿಲುವು. ಸಾಂವಿಧಾನಿಕ ಹುದ್ದೆಯಲ್ಲಿರುವ ಲೋಕಸಭಾಧ್ಯಕ್ಷರನ್ನು ಅಗೌರವಿಸುವುದು ಕಾಂಗ್ರೆಸ್ ನ ನೀಚ ರಾಜಕೀಯವನ್ನು ಎತ್ತಿ ತೋರಿಸಿದೆ' ಎಂದು ಸಚಿವರು ಹೇಳಿದ್ದಾರೆ.

Recommended Video

DK Shivakumar ಹಾಗು Siddaramaiah ಟಾಂಗಾ ಗಾಡಿ ಏರಿ ಪ್ರತಿಭಟಿಸಿದರು | Oneindia Kannada

ಆರೋಪಿಗಳನ್ನು ಆಹ್ವಾನಿಸಬೇಕಿತ್ತೇ?

ಪ್ರತಿಪಕ್ಷ ಕಾಂಗ್ರೆಸ್‌ಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

'ಸಂಸತ್ ಕಲಾಪದಲ್ಲಿ ಕಣ್ಣು‌ ಮಿಟುಕಿಸುವವರ ಮಾತೇ ಸರ್ವಶ್ರೇಷ್ಠ ಎಂದು ಕಾಂಗ್ರೆಸ್‌ ಭಾವಿಸಿದೆ. ಹೀಗಾಗಿ, ಲೋಕಸಭಾ ಸ್ಪೀಕರ್ ಅವರನ್ನು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವುದನ್ನು ಕೆಟ್ಟ ಸಂಪ್ರದಾಯ ಎನ್ನುತ್ತಿದೆ.ಲೋಕಸಭಾ ಸ್ಪೀಕರ್‌ ಅವರ ಬದಲಿಗೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ಆರೋಪಿಗಳನ್ನು ಆಹ್ವಾನಿಸಬೇಕಿತ್ತೇ?' ಎಂದು ಪ್ರಶ್ನೆ ಮಾಡಿದೆ.

English summary
Congress members walkout from Karnataka assembly on Friday. Health minister Dr. Sudhakar tweet against Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X