ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾನಗಲ್ ಶಾಸಕ ಮನೋಹರ್‌ ತಹಶೀಲ್ದಾರ್‌ ಪರಿಚಯ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 28 : ನಾಲ್ಕು ದಶಕಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿರುವ ಮನೋಹರ್‌ ತಹಶೀಲ್ದಾರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ತಹಶೀಲ್ದಾರ್ ಅವರು ಸಚಿವರಾಗುತ್ತಿದ್ದಾರೆ.

4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮನೋಹರ್‌ ತಹಶೀಲ್ದಾರ್‌ (69) ಅವರು ಬಿಇ ಮೆಕ್ಯಾನಿಕಲ್ ಪದವೀಧರರು. ಹಿಂದೆ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ತಹಶೀಲ್ದಾರ್ ಅವರು ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. [ವಿನಯ್ ಕುಲಕರ್ಣಿ ಪರಿಚಯ ಓದಿ]

manohar tahsildar

1978ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್‌ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದಾರೆ. ಪಕ್ಷಕ್ಕೆ ನಿಷ್ಠವಾಗಿರುವ ಅವರಿಗೆ ಈಗ ಸಚಿವರಾಗುವ ಅವಕಾಶ ಸಿಕ್ಕಿದೆ. [ಜಾರ್ಜ್ ಕೈತಪ್ಪಲಿದೆ ಗೃಹ ಖಾತೆ]

ಮನೋಹರ್‌ ತಹಶೀಲ್ದಾರ್‌ ಅವರು ಬಲಿಜ ಸಮುದಾಯಕ್ಕೆ ಸೇರಿದ್ದಾರೆ. 2013ರ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ 66,324 ಮತಗಳನ್ನು ಪಡೆದ ತಹಶೀಲ್ದಾರ್ ಅವರು ಕೆಜೆಪಿಯಿಂದ ಸ್ಪರ್ಧಿಸಿದ್ದ ಸಿ.ಎಂ.ಉದಾಸಿ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ. ತಹಶೀಲ್ದಾರ್ ಅವರ ಪರಿಚಯ ಇಲ್ಲಿದೆ....

* ಮನೋಹರ್‌ ತಹಶೀಲ್ದಾರ್‌ ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಶಾಸಕ
* 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ
* ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ
* ಮೊದಲ ಬಾರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ

English summary
Manohar Tahsildar profile : Hangal MLA Manohar Tahsildar will join CM Siddaramaiah cabinet on Thursday, October 29, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X