Happy New Year 2024: 2023ಕ್ಕೆ ವಿದಾಯ ಹೇಳಿ, ಹೊಸ ವರ್ಷ ಬರಮಾಡಿಕೊಂಡ ಜನತೆ

ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಎಂಜಿ ರಸ್ತೆ, ಚರ್ಚ್‌ಸ್ಟ್ರೀಟ್‌ ರಸ್ತೆಯಲ್ಲಿ ಜನ ಗುಂಪು ಗುಂಪಾಗಿ ಸೇರಿದ್ದು 2024 ಕ್ಕೆ ಸ್ವಾಗತ ಕೋರಿದರು. 2023ರ ವರ್ಷಕ್ಕೆ ವಿದಾಯ ಹೇಳಿದ ಜನ, 12 ಗಂಟೆಯಾಗುತ್ತಿದ್ದಂತೆ ಕುಣಿದು ಕುಪ್ಪಳಿಸಿದರು, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಂತರ ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿದರು. ಎಂ.ಜಿ.ರಸ್ತೆಯ ಪ್ರವೇಶದ್ವಾರ ಸಂಪೂರ್ಣ ಬಂದ್​ ಮಾಡಲಾಗಿದ್ದು, ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿತ್ತು. ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್ ಪ್ರವೇಶಿಸುವ ರಸ್ತೆಯನ್ನು ಕೂಡ ಬಂದ್ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು.

Happy New Year

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸುಮಾರು ಒಂದೂವರೆ ಲಕ್ಷ ಜನ ಸೇರಿದ್ದು, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು. ಸ್ನೇಹಿತರು, ಕುಟುಂಬಸ್ಥರು ಸಂಭ್ರಮದಲ್ಲಿ ಭಾಗವಹಿಸಿ ಖುಷಿಪಟ್ಟರು. ಹೆಚ್ಚಿನ ಜನ ಸೇರಿದ್ದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರೆತೆಗಾಗಿ ನಾಲ್ವರು ಡಿಸಿಪಿ, 3000 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಬ್ರಿಗೇಡ್ ರಸ್ತೆಯಲ್ಲಿ ನೂಕು ನುಗ್ಗಲು

ಬ್ರಿಗೇಡ್ ರಸ್ತೆಯಲ್ಲಿ ಹೆಚ್ಚಿನ ಜನ ಸೇರಿದ ಕಾರಣ ಕೆಲ ಕಾಲ ನೂಕು ನುಗ್ಗಲು ಉಂಟಾಯಿತು. ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು ಹೆಚ್ಚಿನ ಜನ ಸೇರಿದ ಕಾರಣ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ತನ್ನ ಗೆಳತಿ ಜೊತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಹಿನ್ನಲೆ ಬ್ರಿಗೇಡ್ ರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ್ದು, ಜಗಳ ಉಂಟಾಗಿದೆ ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದರು.

ಕಾಫಿನಾಡಿನಲ್ಲೂ ಸಂಭ್ರಮ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿತ್ತು. ಚುಮು-ಚುಮು ಚಳಿಯಲ್ಲೂ ಹೊಸ ವರ್ಷದ ಡ್ಯಾನ್ಸ್ ಮಾಡಿದರು. ಡಿಜೆ ಸದ್ದಿಗೆ ಹೆಜ್ಜೆ ಹಾಕಿದ ಪ್ರವಾಸಿಗರು ಖುಷಿಪಟ್ಟರು. ಚಿಕ್ಕಮಗಳೂರಿನಲ್ಲಿ ಹೋಂಸ್ಟೇ, ರೆಸಾರ್ಟ್ ಗಳು ಪ್ರವಾಸಿಗರಿಂದ ಭರ್ತಿಯಾಗಿವೆ. ಚಿಕ್ಕಮಗಳೂರಿನ 1400 ಹೋಂ ಸ್ಟೇ ಗಳು, 200ಕ್ಕೂ ಹೆಚ್ಚು ರೆಸಾರ್ಟ್ ಗಳು ಭರ್ತಿಯಾಗಿದ್ದು, ಸಾವಿರಾರು ಪ್ರವಾಸಿಗರು ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಮೈಸೂರಿನಲ್ಲಿ ಕೂಡ ಅರಮನೆಯನ್ನು ವಿದ್ಯುದೀಪಗಳಿಂದ ಅಲಂಕರಿಸಲಾಗಿದ್ದು, ಸಿಡಿಮದ್ದು ಸಿಡಿಸುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಯಿತು. ಶಿವಮೊಗ್ಗದಲ್ಲಿ ಕೂಡ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದು, ಹೊಸ ವರ್ಷವನ್ನು ಸ್ವಾಗತಿಸಲಾಗಿದೆ.

ದೆಹಲಿ, ಚಂಡೀಗಢ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಮುಂಬೈ ನಗರಗಳಲ್ಲಿ ಕೂಡ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+