• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಐಎಂಎ ಹಗರಣದ ತನಿಖೆ; ವಿಶೇಷಾಧಿಕಾರಿಯಾಗಿ ಹರ್ಷ ಗುಪ್ತ ನೇಮಕ

|

ಬೆಂಗಳೂರು, ಜನವರಿ 15: ಬಹುಕೋಟೆ ರೂಪಾಯಿ ಐಎಂಎ ಹಗರಣದ ತನಿಖೆಗೆ ವಿಶೇಷ ಅಧಿಕಾರಿಯಾಗಿ ಹರ್ಷ ಗುಪ್ತರನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ.

ಸರ್ಕಾರ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಿರ ಹಾಗೂ ಚರ ಆಸ್ತಿ ಜಪ್ತಿ ಪ್ರಕ್ರಿಯೆ ನಡೆಸುವ ಸಂಬಂಧ ಸಕ್ಷಮ ಪ್ರಾಧಿಕಾರ ರಚನೆ ಮಾಡಿದೆ. ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಎಂಬ ಹೊಸ ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ ಹೊರಡಿಸಿದೆ.

ವ್ಯಕ್ತಿಚಿತ್ರ: ಬಿಜೆಪಿ ಸರ್ಕಾರಕ್ಕೆ ಸೆಡ್ಡು ಹೊಡೆದ ಐಎಎಸ್ ಅಧಿಕಾರಿ ಹರ್ಷಗುಪ್ತ

ಕೆಲವು ತಿಂಗಳ ಹಿಂದೆ ಹರ್ಷ ಗುಪ್ತರಿಗೆ ಐಎಂಎ ಪ್ರಕರಣದ ಸ್ಥಿರ ಹಾಗೂ ಚರ ಆಸ್ತಿ ಜಪ್ತಿ ಮಾಡುವ ಸಂಬಂಧ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿತ್ತು. ಬೇರೆ ಹುದ್ದೆಯ ಹೊಣೆಗಾರಿಕೆಯೂ ಅವರ ಮೇಲಿತ್ತು. ಈಗ ಅವರಿಗೆ ಐಎಂಎ ಪ್ರಕರಣದ ಸಕ್ಷಮ ಪ್ರಾಧಿಕಾರದ ಪೂರ್ಣ ಹೊಣೆ ನೀಡಲಾಗಿದೆ.

ಹಾಸನ : ಐಎಂಎ ಗ್ರೂಪ್‌ಗೆ ಸೇರಿದ ಸೈಟು ಸರ್ಕಾರದ ವಶಕ್ಕೆ

ಈ ಸಕ್ಷಮ ಪ್ರಾಧಿಕಾರ ಐಎಂಎಗೆ ಸೇರಿದ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಲಿದೆ. ಬಳಿಕ ನ್ಯಾಯಾಲಯದ ಸೂಚನೆ ಅನ್ವಯ ಆಸ್ತಿಗಳನ್ನು ಹರಾಜು ಹಾಕಿ ಸಂತ್ರಸ್ತರಿಗೆ ಹಣ ಹಂಚಿಕೆ ಮಾಡಲಿದೆ.

ಐಎಂಎ ಹಗರಣ; ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಹಗರಣದ ಸಿಬಿಐ ತನಿಖೆ

ಹಗರಣದ ಸಿಬಿಐ ತನಿಖೆ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ. ಮೊದಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು.

ಆಸ್ತಿಗಳು ಸರ್ಕಾರದ ವಶಕ್ಕೆ

ಆಸ್ತಿಗಳು ಸರ್ಕಾರದ ವಶಕ್ಕೆ

ಕರ್ನಾಟಕ ಸರ್ಕಾರ ಐಎಂಎಗೆ ಸೇರಿದ ಸ್ಥಿರ ಹಾಗೂ ಚರ ಆಸ್ತಿ ಜಪ್ತಿ ಪ್ರಕ್ರಿಯೆ ನಡೆಸಲು ಸಕ್ಷಮ ಪ್ರಾಧಿಕಾರ ರಚನೆ ಮಾಡಿದೆ. ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಎಂಬ ಹೊಸ ಹುದ್ದೆಯನ್ನು ಸೃಷ್ಟಿಸಿ ಐಎಎಸ್ ಅಧಿಕಾರಿ ಹರ್ಷ ಗುಪ್ತರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಆಸ್ತಿಗಳನ್ನು ವಶಕ್ಕೆ ಪಡೆದು, ಹರಾಜು ಹಾಕಿ ಅದರಿಂದ ಬಂದ ಹಣವನ್ನು ಸಂತ್ರಸ್ತರಿಗೆ ನೀಡಲಾಗುತ್ತದೆ.

ಹಲವು ಕಡೆ ಐಎಂಎ ಆಸ್ತಿ ಜಪ್ತಿ

ಹಲವು ಕಡೆ ಐಎಂಎ ಆಸ್ತಿ ಜಪ್ತಿ

ಬಹುಕೋಟಿ ರೂಪಾಯಿ ಐಎಂಎ ಹಗರಣದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಹಾಸನ, ಕೋಲಾರ, ಬೆಂಗಳೂರು ನಗರದಲ್ಲಿ ಐಎಂಎ ಖರೀದಿ ಮಾಡಿದ್ದ ಆಸ್ತಿಗಳನ್ನು ಈಗಾಗಲೇ ಸರ್ಕಾರ ತನ್ನ ವಶಕ್ಕೆ ಪಡೆದಿದೆ. ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನನ್ನು ಈಗಾಗಲೇ ಬಂಧಿಸಲಾಗಿದೆ.

ಹಿರಿಯ ಐಎಎಸ್ ಅಧಿಕಾರಿ

ಹಿರಿಯ ಐಎಎಸ್ ಅಧಿಕಾರಿ

ಹರ್ಷ ಗುಪ್ತ 1997ನೇ ಬ್ಯಾಚ್ ಐಎಎಸ್ ಅಧಿಕಾರಿ. ಬೀದರ್, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿಯಾಗಿ ಕೆಲಸ ಮಾಡುವಾಗ ಕರ್ನಾಟಕವನ್ನು ಸೀಮೆಎಣ್ಣೆ ಮುಕ್ತವಾಗಿಸಲು ಅವರು ಕೈಗೊಂಡ ಕ್ರಮಗಳು ಶ್ಲಾಘನೀಯ

English summary
Karnataka government appointed IAS officer Harsh Gupta as special officer to probe IMA scam. Government will take over the asset belongs to IMA Group. CBI probing the multi crore IMA scam main accused Mohammed Mansoor Khan in CBI custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X