ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ರಾಜಕೀಯ ಚಿತ್ರಣ ಬದಲು : ಹಾಲಪ್ಪ ಕಾಂಗ್ರೆಸ್‌ಗೆ?

|
Google Oneindia Kannada News

ಬೆಂಗಳೂರು, ಮಾರ್ಚ್ 31 : ಶಿವಮೊಗ್ಗ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಗಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಹರತಾಳು ಹಾಲಪ್ಪ ಕಾಂಗ್ರೆಸ್ ಸೇರಲಿದ್ದಾರೆ? ಎಂಬ ಸುದ್ದಿ ಹಬ್ಬಿದೆ. ಹರತಾಳು ಹಾಲಪ್ಪ ಈ ಬಾರಿಯ ಚುನಾವಣೆಗೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂಬುದು ಸದ್ಯದ ಸುದ್ದಿ.

ಬೇಳೂರು v/s ಹಾಲಪ್ಪ : ಸಾಗರದ ಬಿಜೆಪಿ ಟಿಕೆಟ್‌ ಯಾರಿಗೆ?ಬೇಳೂರು v/s ಹಾಲಪ್ಪ : ಸಾಗರದ ಬಿಜೆಪಿ ಟಿಕೆಟ್‌ ಯಾರಿಗೆ?

ಟಿಕೆಟ್ ನೀಡುವೆ ಎಂದು ಹೇಳಿದ್ದ ಯಡಿಯೂರಪ್ಪ ನಂಬಿಸಿ ಮೋಸ ಮಾಡಿದ್ದಾರೆ ಎಂದು ಅಸಮಾಧಾನಗೊಂಡಿರುವ ಹರತಾಳು ಹಾಲಪ್ಪ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಲವು ಕಾಂಗ್ರೆಸ್ ನಾಯಕರು ಹಾಲಪ್ಪ ಅವರನ್ನು ಪೋನ್ ಮೂಲಕ ಸಂಪರ್ಕಿಸಿದ್ದಾರೆ.

ಕ್ಷೇತ್ರ ಪರಿಚಯ : ಸಾಗರದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಾಮುಖಿ ಕದನಕ್ಷೇತ್ರ ಪರಿಚಯ : ಸಾಗರದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಾಮುಖಿ ಕದನ

ಬೆಂಗಳೂರಿನಲ್ಲಿಯೇ ಇರುವ ಹರತಾಳು ಹಾಲಪ್ಪ ಅವರು ಬಸವೇಶ್ವರ ನಗರದ ನಿವಾಸದಲ್ಲಿ ಸತ್ಯನಾರಾಯಣ ಪೂಜೆ, ಗಣಹೋಮ ಮಾಡಿಸಿದ್ದಾರೆ. ಹಾಲಪ್ಪ ಅವರ ಮುಂದಿನ ನಡೆ ಏನು? ಎಂಬುದು ಇನ್ನೂ ನಿಗೂಢವಾಗಿದೆ. ಒಂದು ವೇಳೆ ಅವರು ಕಾಂಗ್ರೆಸ್ ಸೇರಿದರೆ ಶಿವಮೊಗ್ಗ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಗಲಿದೆ.

ಹಾಲಪ್ಪ, ಬೇಳೂರು ಇಬ್ಬರು ಆಕಾಂಕ್ಷಿಗಳು

ಹಾಲಪ್ಪ, ಬೇಳೂರು ಇಬ್ಬರು ಆಕಾಂಕ್ಷಿಗಳು

ಗುರುವಾರ ಬೇಳೂರು ಗೋಪಾಲಕೃಷ್ಣ ಮತ್ತು ಹಾರತಾಳು ಹಾಲಪ್ಪ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯುಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.

ಇಬ್ಬರೂ ಸಹ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕೆಲವು ದಿನಗಳಿಂದ ಸಾಗರದಲ್ಲಿ ಹಾಲಪ್ಪಗೆ ಟಿಕೆಟ್ ಖಚಿತ ಎಂಬ ಸುದ್ದಿ ಹಬ್ಬಿತ್ತು. ಈಗ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ಎಂಬ ಸುದ್ದಿ ಹಬ್ಬಿದ್ದು, ಹರತಾಳು ಹಾಲಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಹಾಲಪ್ಪ ಹೇಳುವುದೇನು?

ಹಾಲಪ್ಪ ಹೇಳುವುದೇನು?

ಹರತಾಳು ಹಾಲಪ್ಪ ಅವರು ಬೆಂಗಳೂರಿನಲ್ಲಿಯೇ ಇದ್ದಾರೆ. ಬಸವೇಶ್ವರ ನಗರದ ನಿವಾಸದಲ್ಲಿ ಅವರು ಸತ್ಯನಾರಾಯಣ ಪೂಜೆ, ಗಣಹೋಮವನ್ನು ಶನಿವಾರ ಮಾಡಿಸಿದ್ದಾರೆ. ನಂತರ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

'ನಾನು ಬಿಜೆಪಿ ಬಿಡುತ್ತೇನೆ ಎನ್ನುವುದು ಊಹಾಪೋಹ. ಸಾಗರದಲ್ಲಿ ಟಿಕೆಟ್ ಕೇಳಿದ್ದೇನೆ. ಟಿಕೆಟ್ ನೀಡುವ ಕುರಿತು ಇನ್ನೂ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಟಿಕೆಟ್ ಸಿಗುವುದಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಆದರೆ, ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ' ಎಂದು ಹೇಳಿದರು.

ಬೇಳೂರು ಹೆಸರು ಮುಂಚೂಣಿಯಲ್ಲಿದೆ

ಬೇಳೂರು ಹೆಸರು ಮುಂಚೂಣಿಯಲ್ಲಿದೆ

‘ಸಾಗರ ಕ್ಷೇತ್ರದ ಟಿಕೆಟ್ ಸಿಗುವುದಿಲ್ಲ ಎಂದು ಅಧಿಕೃತವಾಗಿ ಯಾರೂ ಹೇಳಿಲ್ಲ. ಆದರೆ, ಬೇಳೂರು ಗೋಪಾಲಕೃಷ್ಣ ಅವರ ಹೆಸರು ಮುಂಚೂಣಿಯಲ್ಲಿದೆ ಎಂಬ ಮಾಹಿತಿ ಇದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅವರು ಸಾಗರದಲ್ಲಿ ಸ್ಪರ್ಧಿಸಿದ್ದರು. 23,217 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು' ಎಂದು ಹಾಲಪ್ಪ ಹೇಳಿದರು.

‘ಸೊರಬದಲ್ಲಿ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ಎಂದು ಹೇಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು 3ನೇ ಸ್ಥಾನ ಪಡೆದಿದ್ದರು. ನಾನು 2ನೇ ಸ್ಥಾನ ಪಡೆದಿದ್ದೆ. ಬಹುಶಃ ಯಡಿಯೂರಪ್ಪ ಅವರ ಕೈಯನ್ನು ಯಾರೋ ಕಟ್ಟಿ ಹಾಕಿದಂತೆ ಕಾಣುತ್ತಿದೆ' ಎಂದು ಹಾಲಪ್ಪ ಹೇಳಿದರು.

ಕಾಂಗ್ರೆಸ್ ಸೇರಲಿದ್ದಾರೆಯೇ ಹಾಲಪ್ಪ?

ಕಾಂಗ್ರೆಸ್ ಸೇರಲಿದ್ದಾರೆಯೇ ಹಾಲಪ್ಪ?

'ಕಾಂಗ್ರೆಸ್ ಮತ್ತು ಜೆಡಿಸ್‌ನ ಯಾವ ನಾಯಕರನ್ನೂ ನಾನು ಭೇಟಿ ಮಾಡಿಲ್ಲ. ಕೆಲವರು ಫೋನ್ ಮೂಲಕ ನನ್ನನ್ನು ಸಂಪರ್ಕಿಸಿದ್ದಾರೆ. ನಿನಗೆ ಅನ್ಯಾಯವಾಯಿತಲ್ಲ ಎಂದು ಹೇಳಿದ್ದಾರೆ' ಎಂದು ಹಾಲಪ್ಪ ಹೇಳಿದರು.

‘ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬುದು ಇನ್ನೂ ಖಚಿತವಾಗಿಲ್ಲ. ಟಿಕೆಟ್ ಕೈ ತಪ್ಪಿದರೆ ಅಭಿಮಾನಿಗಳು, ಹಿತೈಷಿಗಳ ಜೊತೆ ಚರ್ಚೆ ನಡೆಸಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇನೆ' ಎಂದು ಹಾಲಪ್ಪ ಸ್ಪಷ್ಟಪಡಿಸಿದರು.

ಕುಮಾರ್ ಬಂಗಾರಪ್ಪಗೆ ಟಿಕೆಟ್

ಕುಮಾರ್ ಬಂಗಾರಪ್ಪಗೆ ಟಿಕೆಟ್

ಸೊರಬ ಕ್ಷೇತ್ರದಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಬಿಜೆಪಿ ಸೇರಿದ್ದಾರೆ. ಆದ್ದರಿಂದ, ಈ ಬಾರಿ ಹಾಲಪ್ಪ ಅವರು ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಾಲಪ್ಪ ಅವರು ಕಳೆದ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ವಿರುದ್ಧ ಸೋಲು ಅನುಭವಿಸಿದ್ದರು.

ಸಾಗರ ಕ್ಷೇತ್ರದ ಫಲಿತಾಂಶ

ಸಾಗರ ಕ್ಷೇತ್ರದ ಫಲಿತಾಂಶ

ಸಾಗರ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಜಯಗಳಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬೇಳೂರು ಗೋಪಾಲಕೃಷ್ಣ 3ನೇ ಸ್ಥಾನಕ್ಕೆ ಕುಸಿದಿದ್ದರು.

ಕಾಗೋಡು ತಿಮ್ಮಪ್ಪ - 71,960 ಮತಗಳು ಬಿ.ಆರ್.ಜಯಂತ್ - 30,712 ಮತಗಳು (ಕೆಜೆಪಿ) ಬೇಳೂರು ಗೋಪಾಲಕೃಷ್ಣ - 23,217 ಮತಗಳು (ಜೆಡಿಎಸ್) ಶರಾವತಿ ಸಿ.ರಾವ್ (ಬಿಜೆಪಿ) 5,355 ಮತಗಳನ್ನು ಪಡೆದಿದ್ದರು.

English summary
Former minister Hartal Halappa may join Congress. Hartal Halappa and Former MLA Beluru Gopalkrishna aspirants for BJP ticket in Sagar assembly constituency, Shivamogga. Who will get ticket for Karnataka assembly elections 2018. If party issued ticket to Beluru Gopalkrishna, Hapappa will join Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X