ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಎಲ್ಲರಿಗೂ ಯಾವ ಕಾಲಮಿತಿಯಲ್ಲಿ ಕೊರೊನಾ ಲಸಿಕೆ ನೀಡುತ್ತೀರಿ: ಹೈಕೋರ್ಟ್ ಪ್ರಶ್ನೆ

|
Google Oneindia Kannada News

ಬೆಂಗಳೂರು, ಜುಲೈ 29: ರಾಜ್ಯದ ಎಲ್ಲರಿಗೂ ಯಾವ ಕಾಲಮಿತಿಯಲ್ಲಿ ಕೊರೊನಾ ಲಸಿಕೆ ವಿತರಿಸುತ್ತೀರಿ ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ಹೇಳಿದೆ.
ಈ ಕುರಿತು ಹೈಕೋರ್ಟ್‌ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠ ಈ ನಿರ್ದೇಶನ ನೀಡಿದೆ.

ಕರ್ನಾಟಕಕ್ಕೆ ಸಿಹಿಸುದ್ದಿ: ಕೊರೊನಾವೈರಸ್ ಸಾವಿನ ಸಂಖ್ಯೆ ಇಷ್ಟಾಯ್ತಾ!?ಕರ್ನಾಟಕಕ್ಕೆ ಸಿಹಿಸುದ್ದಿ: ಕೊರೊನಾವೈರಸ್ ಸಾವಿನ ಸಂಖ್ಯೆ ಇಷ್ಟಾಯ್ತಾ!?

ಅಲ್ಲದೆ, ಈಗಾಗಲೇ ಕಾಲೇಜುಗಳನ್ನು ಆರಂಭಿಸಿರುವುದರಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಶಿಬಿರಗಳನ್ನು ನಡೆಸಲಾಗುತ್ತಿದೆಯೇ ಎಂಬ ಕುರಿತು ವಿವರ ಸಲ್ಲಿಸಬೇಕು. ಈ ಹಿಂದೆ ಪೀಠ ನೀಡಿರುವ ಆದೇಶದಂತೆ ಮೂರನೇ ಸಂಭಾವ್ಯ ಅಲೆ ತಡೆಯಲು ಕೈಗೊಂಡಿರುವ ಕ್ರಿಯಾ ಯೋಜನೆಯ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿತು

 Has a Timeline Been Fixed To Jab Entire Karnataka: HC Asks State Govt

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಲಸಿಕೆ ಕೊರತೆಯಾಗುವುದಿಲ್ಲ ಎಂದು ತಿಳಿಸಿ ಪ್ರಮಾಣ ಪತ್ರ ಸಲ್ಲಿಸಿದರು. ಈ ಹೇಳಿಕೆ ಪರಿಗಣಿಸಿದ ಪೀಠ, ಸೋಂಕಿನ ತೀವ್ರತೆ ತಗ್ಗುತ್ತಿದೆ.

ಜತೆಗೆ ಲಸಿಕೆ ನೀಡುವುದನ್ನು ತೀವ್ರಗೊಳಿಸಬೇಕಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜನರಿಗೆ ಲಸಿಕೆಯನ್ನು ನೀಡಲು ಕಾಲಮಿತಿಯ ಯೋಜನೆ ಹಾಕಿಕೊಂಡಿದ್ದರೆ ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 19 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36456 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1531 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1430 ಸೋಂಕಿತರು ಗುಣಮುಖರಾಗಿದ್ದಾರೆ.

Recommended Video

ಸೂಪರ್ CM ಟ್ಯಾಗ್ ಕಳಚಿ ಬಿದ್ದಿದ್ದಕ್ಕೆ ವಿಜಯೇಂದ್ರ ಫುಲ್ ಖುಷ್ | Oneindia Kannada

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2899195ಕ್ಕೆ ಏರಿಕೆಯಾಗಿದೆ. ಒಟ್ಟು 2840147 ಸೋಂಕಿತರು ಗುಣಮುಖರಾಗಿದ್ದು. 22569 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
The Karnataka High Court on Wednesday directed the State Government to place on record if a timeline has been fixed to vaccinate the entire population of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X