ದೇಶದಲ್ಲೇ ಮೂರನೇ ಸ್ಥಾನ: ಕರ್ನಾಟಕದಲ್ಲಿ 5.73 ಕೋಟಿ ಮಂದಿಗೆ ಕೊವಿಡ್-19 ಪರೀಕ್ಷೆ

ಬೆಂಗಳೂರು, ಜನವರಿ 8: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಆರಂಭದಿಂದಲೂ ಕರ್ನಾಟಕದಲ್ಲಿ ಸೋಂಕು ತಪಾಸಣೆಯನ್ನು ಶರವೇಗದಲ್ಲಿ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಈವರೆಗೂ 5.73 ಕೋಟಿ ಜನರಿಗೆ ಕೊವಿಡ್-19 ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಕೊವಿಡ್-19 ಹೂಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚುತ್ತಿರುವುದರ ಮಧ್ಯೆ ಒಂದೇ ದಿನ 2 ಲಕ್ಷ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 69,952 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,33,308 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 2,03,260 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,08,28,304 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ.

ಭಾರತದಲ್ಲಿ ಒಂದೇ ದಿನ 15,29,948 ಮಂದಿಗೆ ಕೊರೊನಾವೈರಸ್ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಇದುವರೆಗೂ 68,84,70,959 ಜನರಿಗೆ ಸೋಂಕು ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ತಿಳಿಸಿದರೆ. ಈ ಪೈಕಿ ಕರ್ನಾಟಕದಲ್ಲಿ ಇದುವರೆಗೂ 1,08,28,304 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. 4,65,01,611 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,73,29, 915 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Karnataka has conducted 5.73 crore Covid-19 tests to date; third highest in the country

ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ:

ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 8,400ದ ಗಡಿ ದಾಟಿದ್ದು, ಪಾಸಿಟಿವಿಟಿ ದರ ಶೇ.4.15ರಷ್ಟಾಗಿದೆ. ಕಳೆದ ಒಂದೇ ದಿನದಲ್ಲಿ 8449 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 505 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 38362 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3031052ಕ್ಕೆ ಏರಿಕೆಯಾಗಿದೆ. ಒಟ್ಟು 2962548 ಸೋಂಕಿತರು ಗುಣಮುಖರಾಗಿದ್ದು. 30113 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಯಾವ ರೂಪಾಂತರಿ ಸೋಂಕು ಹೆಚ್ಚು?

ಕೊರೊನಾವೈರಸ್ ಸೋಂಕಿನ ಯಾವ ರೂಪಾಂತರಿಯು ಹೆಚ್ಚು ಹರಡುತ್ತಿದೆ ಎಂಬುದನ್ನು ಮುಂದೆ ಪಟ್ಟಿ ಮಾಡಲಾಗಿದೆ:

ಅಲ್ಫಾ/ B.1.1.7 - 156

ಬೀಟಾ/ B.1.351 - 08

ಡೆಲ್ಟಾ / B.1.617.2 - 2937

ಡೆಲ್ಟಾ ಪ್ಲಸ್ - 1350

ಕಪ್ಪಾ / B.1.617.1 - 160

ETA / B.1.525 - 01

ಓಮಿಕ್ರಾನ್/ B.1.1.529 - 333

{document2}

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+