ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking:ಮಂಕಿಫಾಕ್ಸ್ ತಡೆಗೆ ಕರ್ನಾಟಕದಲ್ಲಿ ಕಟ್ಟೆಚ್ಚರ: ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು ಜುಲೈ 25: ಜಾಗತಿಕವಾಗಿ ಮಂಕಿಫಾಕ್ಸ ಕಾಯಿಲೆ ಹರಡುತ್ತಿದ್ದು, ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಗಡಿಭಾಗ ಜಿಲ್ಲೆ ಸೇರಿದಂತೆ ಪ್ರತಿ ಜಿಲ್ಲೆಗಳ ಜಿಲ್ಲಾಧಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈಧ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, "ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಿದ್ದೇವೆ. ಮಂಕಿಫಾಕ್ಸ್ ಪ್ರಕರಣ ಕಂಡು ಬಂದರೆ ರೋಗಿಗಳನ್ನು ಪ್ರತ್ಯೇಕಿಸಿ, ಅಗತ್ಯ ಚಿಕಿತ್ಸೆ ನೀಡುವ ಕುರಿತು ಸೂಚಿಸಲಾಗಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಅವರು ಸಹ ಇದನ್ನು ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿದೆ," ಎಂದರು.

ಮಂಕಿಫಾಕ್ಸ ಕೊರೋನಾದಂತೆ ವೇಗವಾಗಿ ಹರಡದಲ್ಲ. ಹುಣ್ಣುಗಳಿಂದ ಹಾಗೂ ರೋಗಿಗಳ ಬಳಸಿದ ವಸ್ತುಗಳ ಬಳಕೆಯಿಂದ ಮಂಕಿಫಾಕ್ಸ ಹರಡುತ್ತದೆ. ಪ್ರಕರಣ ಕಂಡು ಬಂದು ಕೂಡಲೇ ರೋಗಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಿದರೆ ತೊಂದರೆ ಇಲ್ಲ. ಈ ಕಾಯಿಲೆಯಿಂದ ಸಾವು ನೋವು ತೀರಾ ಕಡಿಮೆ ಇದ್ದು, ಜನರ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.

Karnataka has take action for control of Monkeypox virus

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, "ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳು ಆಗಬೇಕಿದೆ. ಆದರೆ ಕಳೆದ 50-60ವರ್ಷದಲ್ಲಿ ಆಗಿರಲಿಲ್ಲ. ಬಿಜೆಪಿ ಕಳೆದ ಎರಡು ವರ್ಷದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಮಾಡಿದೆ. ಸರ್ಕಾರಕ್ಕೆ ಹಣಕಾಸಿನ ನಿರ್ಬಂಧ ಇರುತ್ತದೆ. ಇನ್ನು ಕೋವಿಡ್ ಬಂದಿದ್ದರಿಂದಲೇ ಆರೋಗ್ಯ ವ್ಯವಸ್ಥೆ ಮತ್ತಷ್ಟು ಸುಧಾರಿಸಲು ಸಾಧ್ಯವಾಯಿತು. ವೈದ್ಯರ ನೇಮಕಾತಿಯಂತ ಪ್ರಕ್ರಿಯೆ ನಡೆದಿವೆ. ಈ ಹಿಂದಿನಗಿಂತಲೂ ಕಳೆದ ಎರಡು ವರ್ಷದಲ್ಲಿ ಆರೋಗ್ಯ, ವೈದ್ಯಕೀಯ ಸೇವೆ ಉತ್ತಮವಾಗಿದೆ. ಆದಷ್ಟು ಬೇಗ ಉತ್ತರ ಕನ್ನಡದಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿಲಿದ್ದೇವೆ," ಎಂದರು.

Recommended Video

Tiger Crossing Road: ಹುಲಿಯನ್ನ ರಸ್ತೆ ದಾಟಿಸಿದ ಪೊಲೀಸ್ ಅಧಿಕಾರಿ | *India | OneIndia Kannada

English summary
The Karnataka government has already taken action for control of Monkeypox virus, Health minister Dr.K.Sudhakar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X