ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ 5ರಿಂದ ಹಾಸನಾಂಬೆ ದರ್ಶನ ಪಡೆಯಿರಿ

|
Google Oneindia Kannada News

ಹಾಸನ, ಸೆಪ್ಟೆಂಬರ್ 26 : ಪುರಾಣ ಪ್ರಸಿದ್ಧ ಹಾಸನಾಂಬೆ ದೇವಾಲಯ ನ.5 ರಿಂದ 13ರ ವರೆಗೆ 9 ದಿನಗಳ ಕಾಲ ತೆರೆದಿರುತ್ತದೆ. ದೇವಾಲಯಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಅಗತ್ಯವಿರುವ ಮೂಲ ಸೌಕರ್ಯವನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ. ಪ್ರತಿ ಸಂವತ್ಸರದ ಅಶ್ವಯುಜ ಮಾಸದ ಹುಣ್ಣಿಮೆಯ ನಂತರದ ಗುರುವಾರ ದೇವಿಯ ಗರ್ಭಗುಡಿಯನ್ನು ತೆರೆಯಲಾಗುತ್ತದೆ. ಈ ಬಾರಿ ನ.5ರಂದು ದೇವಾಲಯವನ್ನು ತೆರೆಯಲಾಗುತ್ತದೆ 13ರ ತನಕ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿದೆ.

temple

ಹಾಸನ ಜಿಲ್ಲಾಧಿಕಾರಿ ಉಮೇಶ್ ಎಚ್.ಕುಸುಗಲ್ ಅವರ ನೇತೃತ್ವದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು, ದೇವಾಲಯದ ಆಡಳಿತ ಮಂಡಳಿ ಸದಸ್ಯರು ಸಭೆ ಸೇರಿ ದೇವಾಲಯ ತೆರೆಯುವ ಬಗ್ಗೆ ತೀರ್ಮಾನ ಕೈಗೊಂಡಿದ್ದು, ದಿನಾಂಕ ಘೋಷಣೆ ಮಾಡಿದ್ದಾರೆ. [ಹಾಸಬಾಂಬೆ ಸ್ಥಳ ಪುರಾಣ ಓದಿ]

ಹಾಸನಾಂಬ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರ 2 ಕೋಟಿ ರೂ.ಗಳನ್ನು ಘೋಷಣೆ ಮಾಡಿದೆ. 70 ಲಕ್ಷ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ರಾಜಗೋಪುರ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.

250 ರೂ. ಟಿಕೆಟ್ : ದೇವಾಲಯದ ಆಡಳಿತ ಮಂಡಳಿ ವಿಶೇಷ ದರ್ಶನಕ್ಕಾಗಿ 250 ರೂ.ಗಳ ಟಿಕೆಟ್ ವ್ಯವಸ್ಥೆ ಮಾಡಿದೆ. ಟಿಕೆಟ್ ಪಡೆದವರನ್ನು ದೇವಿಯ ದರ್ಶನಕ್ಕೆ ವಿಶೇಷ ಕ್ಯೂನಲ್ಲಿ ಕಳುಹಿಸಿಕೊಡಲಾಗುತ್ತದೆ.

ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ. 2012ರಲ್ಲಿ 15 ದಿನ, 2013ರಲ್ಲಿ 13 ದಿನ, 2014ರಲ್ಲಿ 8 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆಯಲು ಆಗಮಿಸುತ್ತಾರೆ.

English summary
Hassan : The historic Hasanamba temple will be opened for devotees from November 5 to 13, 2015. This year temple will open for nine days said, Hassan Deputy Commissioner Umesh H. Kusugal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X