Hassan: ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ; 517 ಎಕರೆ ಭೂಮಿ ಹಸ್ತಾಂತರಕ್ಕೆ ಸಚಿವ ಶಿವಲಿಂಗೇಗೌಡ ಸೂಚನೆ

ಹಾಸನದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗುವುದಿಲ್ಲ ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಹೇಳಿದ್ದಾರೆ. ಹಾಸನದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಸ್ವಾತಂತ್ರ್ಯೋತ್ಸವದ ಸಂದರ್ಭ ಜಿಲ್ಲೆಯ ಜನತೆಗೆ ನಾನು ಆಶ್ವಾಸನೆ ಕೊಟ್ಟಿದ್ದೇನೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ವಿಕಾಸಸೌಧದಲ್ಲಿ ಆಗಸ್ಟ್‌ 31ರ ಸೋಮವಾರ ಹಾಸನ ನಗರದ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಮಾತನಾಡಿದ ಶಿವಲಿಂಗೇಗೌಡ ಅವರು, ಉಸ್ತುವಾರಿ ಸಚಿವನಾಗಿ ಹಾಸನದ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನನ್ನ ಜನರಿಗೆ ಆದಷ್ಟು ಬೇಗ ವಿಮಾನ ನಿಲ್ದಾಣವನ್ನು ಕಲ್ಪಿಸಬೇಕು, ಹಾಸನದಲ್ಲಿ ವಿಮಾನ ಬಂದಿಳಿಯುವಂತಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Hassan Airport Work to Be Completed Soon Minister Shivlingegowda Directs Handover of 517 Acres

Hassan: 517 ಎಕರೆ ಭೂಮಿ ಹಸ್ತಾಂತರಕ್ಕೆ ಸೂಚನೆ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು ಭೂಸ್ವಾದೀನ ಪಡೆಸಿಕೊಂಡಿರುವ 517 ಎಕರೆ ಭೂಮಿಯನ್ನು ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ತಕ್ಷಣ ಹಸ್ತಾಂತರಿಸಬೇಕು. ಯಾವುದೇ ರೀತಿಯ ಭೂವ್ಯಾಜ್ಯವಿದ್ದರೂ ಅದನ್ನು ಜಿಲ್ಲಾಡಳಿತದ ಮೂಲಕ ಪರಿಹರಿಸಿಕೊಡಲಾಗುವುದು. ಹೆಚ್ಚುವರಿ ಭೂಮಿಯ ಅವಶ್ಯಕತೆಯಿದ್ದಲ್ಲಿ ಅದನ್ನು ಪೂರೈಸಲು ಸರ್ಕಾರ ಸಿದ್ಧವಿದೆ. ಕಾಮಗಾರಿಗೆ ಅಡಚಣೆಯುಂಟಾಗುತ್ತಿರುವ ಭೂವ್ಯಾಜ್ಯವಿರುವ ಎರಡು ಗ್ರಾಮಗಳ ಸುಮಾರು 15 ಎಕರೆ ಭೂಮಿಯ ವಿಚಾರವಾಗಿ ಜಿಲ್ಲಾಧಿಕಾರಿಗೆ ಪತ್ರ ಬರೆದು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ನೆನೆಗುದಿಗೆ ಬಿದ್ದಿರುವ ವಿದ್ಯುತ್‌ ಸಂಪರ್ಕ ಕಾಮಗಾರಿಗೆ ಸಂಬಂಧಿಸಿ ಕೆಪಿಟಿಸಿಎಲ್‌ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಕಾಲದಲ್ಲಿ ಭೂಪರಿಹಾರ ವಿತರಿಸಿ, ವಿದ್ಯುತ್‌ ಸಂಪರ್ಕ್‌ ಕಲ್ಪಿಸಬೇಕು ಎಂದು ಸೂಚನೆ ನೀಡಿದರು ಇದೇ ವೇಳೆ, ವಿಮಾನ ನಿಲ್ದಾಣ ಯೋಜನೆಯಿಂದ ಭೂಮಿ ಕಳೆದುಕೊಂಡ ದ್ಯಾವಲಾಪುರಕ್ಕೆ ಅಲ್ಲಿನ ಗ್ರಾಮಸ್ಥರ ಅಪೇಕ್ಷೆಯಂತೆ ಮುಖ್ಯರಸ್ತೆಗೆ ಸಂಪರ್ಕ ಸಾಧಿಸುವ ಹೊಸ ಮಾರ್ಗವನ್ನು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಮೂರು ಇಲಾಖೆಗಳ ಮುಖ್ಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳುವ ವರೆಗೆ ವಿರಮಿಸದೆ ಎಲ್ಲರೂ ಸಹಕರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Hassan: ಬಾಕಿ ಕಾಮಗಾರಿಗಳನ್ನು ಶೀಘ್ರ ಮುಗಿಸಲು ನಿರ್ದೇಶನ

ಇನ್ನು ಹಾಸನದಲ್ಲಿ ಹಲವು ದಿನಗಳಿಂದ ಬಾಕಿ ಉಳಿದಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರೈಸುವಂತೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+