ಹಾಸನ, ಚಿಕ್ಕಮಗಳೂರಿನಲ್ಲಿ ಹಲವೆಡೆ ಭೂಕಂಪ
ಚಿಕ್ಕಮಗಳೂರು, ಫೆ. 25 : ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಮಾರು 4 ಸೆಕೆಂಡ್ ಭೂಮಿ ಕಂಪಿಸಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಬಂದು ನಿಂತಿದ್ದಾರೆ. ರಿಕ್ಟರ್ ಮಾಪಕದಲ್ಲಿ 2.1ರಷ್ಟು ಕಂಪನ ದಾಖಲಾಗಿದೆ.
ಹಾಸನ ಜಿಲ್ಲೆಯ ಮೂರು ತಾಲೂಕುಗಳು ಮತ್ತು ಚಿಕ್ಕಮಗಳೂರಿನ ಸಕಲೇಶಪುರ, ಮೂಡಿಗೆರೆಯ ಕೆಲವು ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ತಕ್ಷಣ ಆತಂಕದಿಂದ ಮನೆಯಿಂದ ಹೊರಗೆ ಬಂದಿದ್ದಾರೆ.

ಸುಮಾರು 4 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಪಾತ್ರಗಳು ಕೆಳಗೆ ಬಿದ್ದವು ಎಂದು ಜನರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಭೂಮಿ ಕಂಪಿಸಿದ ಅನುಭವವಾದ ನಂತರ ಎಲ್ಲರೂ ಮನೆಯಿಂದ ಹೊರಗೋಡಿದೆವು ಎಂದು ತಿಳಿಸಿದ್ದಾರೆ. [ಕುಂದಾಪುರ, ಕಾರ್ಕಳದಲ್ಲಿ ಲಘು ಭೂಕಂಪನ]
ಜನರು ಆತಂಕ ಪಡುವ ಅಗತ್ಯವಿಲ್ಲ : ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಆಗಿರುವ ಭೂಕಂಪನದ ಬಗ್ಗೆ ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.
ಬುಧವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ರಿಕ್ಟರ್ ಮಾಪಕದಲ್ಲಿ 2.1ರಷ್ಟು ಕಂಪನ ದಾಖಲಾಗಿದೆ. ಇದು ಕಡಿಮೆ ಪ್ರಮಾಣದ ಕಂಪನವಾಗಿದ್ದು, ಜನರು ಈ ಬಗ್ಗೆ ಆತಂಕಗೊಳ್ಳುವುದು ಬೇಡ ಎಂದು ಅಧಿಕಾರಿಗಳು ಮಾಧ್ಯಮಗಳ ಮೂಲಕ ಜನರಿಗೆ ಕರೆ ನೀಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications