ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Hassan JDS Ticket Row : ಹಾಸನ ಟಿಕೆಟ್ ವಿವಾದ, ಮೌನ ಮುರಿದ ಎಚ್‌ಡಿ ರೇವಣ್ಣ!

ಮಾಜಿ ಸಚಿವ ಎಚ್. ಡಿ. ರೇವಣ್ಣ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಮೌನ ಮುರಿದಿದ್ದಾರೆ. ರೇವಣ್ಣ ಪತ್ನಿ ಭವಾನಿ ರೇವಣ್ಣ ಮತ್ತು ಎಚ್. ಪಿ. ಸ್ವರೂಪ್ ಟಿಕೆಟ್ ಆಕಾಂಕ್ಷಿಗಳು.

|
Google Oneindia Kannada News

ಬೆಂಗಳೂರು, ಜನವರಿ 29; ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಜಾಟಪಟಿ ಪಕ್ಷ ಮತ್ತು ಎಚ್. ಡಿ. ದೇವೇಗೌಡರ ಕುಟುಂಬದಲ್ಲಿಯೇ ಭಾರೀ ಚರ್ಚೆಗೆ ಕಾರಣವಾಗಿತ್ತು. ಮಾಜಿ ಸಚಿವ ಎಚ್. ಡಿ. ರೇವಣ್ಣ ಈ ವಿಚಾರದಲ್ಲಿ ಕೊನೆಗೂ ಮೌನ ಮುರಿದಿದ್ದಾರೆ.

ಭಾನುವಾರ ಹೊಳೆನರಸೀಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಚ್. ಡಿ. ರೇವಣ್ಣ, "ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ವರಿಷ್ಠರು ಕೈಗೊಳ್ಳುವ ತೀರ್ಮಾನವೇ ಅಂತಿಮ" ಎಂದು ಹೇಳುವ ಮೂಲಕ ಹಲವು ದಿನಗಳ ಚರ್ಚೆಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಹಾಸನದ ಜೆಡಿಎಸ್‌ ಟಿಕೆಟ್; ಭವಾನಿ ರೇವಣ್ಣ V/S ಸ್ವರೂಪ್ ಹಾಸನದ ಜೆಡಿಎಸ್‌ ಟಿಕೆಟ್; ಭವಾನಿ ರೇವಣ್ಣ V/S ಸ್ವರೂಪ್

ಎಚ್. ಡಿ. ರೇವಣ್ಣ ಮಾತನಾಡಿ, "ಕುಮಾರಸ್ವಾಮಿ ನಮ್ಮ ನಾಯಕ. ಕುಮಾರಸ್ವಾಮಿ, ರೇವಣ್ಣ ಹೊಡೆದಾಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದರು. ನನ್ನ ತಲೆ ಇರುವವರೆಗೆ ಯಾವುದೇ ಕಾರಣಕ್ಕೂ ನಾವು ಹೊಡೆದಾಡಲ್ಲ" ಎಂದರು.

Breaking; ಹಾಸನದ ಅಭ್ಯರ್ಥಿ, ಭವಾನಿ ರೇವಣ್ಣ ಮಹತ್ವದ ಘೋಷಣೆ Breaking; ಹಾಸನದ ಅಭ್ಯರ್ಥಿ, ಭವಾನಿ ರೇವಣ್ಣ ಮಹತ್ವದ ಘೋಷಣೆ

Hassan JDS Ticket Row HD Revanna Breaks His Silence

"ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್​ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಟಿಕೆಟ್ ಹಂಚಿಕೆ​ ವಿಚಾರದಲ್ಲಿ ವರಿಷ್ಠರು ಕೈಗೊಳ್ಳುವ ನಿರ್ಧಾರವೇ ಅಂತಿಮ" ಎಂದು ಮಾಜಿ ಸಚಿವ, ಟಿಕೆಟ್ ಆಕಾಂಕ್ಷಿಯಾಗಿರುವ ಭವಾನಿ ರೇವಣ್ಣ ಪತಿ ಎಚ್. ಡಿ. ರೇವಣ್ಣ ಸ್ಪಷ್ಟಪಡಿಸಿದರು.

Bhavani Revanna : ಹಾಸನ ಟಿಕೆಟ್ ಬಗ್ಗೆ ಮಾತನಾಡಲು ರೇವಣ್ಣ ಬಿಟ್ಟರೆ ಯಾರಿಗೂ ಅವಕಾಶವಿಲ್ಲ; HDKಗೆ ಸೂರಜ್ ಟಾಂಗ್Bhavani Revanna : ಹಾಸನ ಟಿಕೆಟ್ ಬಗ್ಗೆ ಮಾತನಾಡಲು ರೇವಣ್ಣ ಬಿಟ್ಟರೆ ಯಾರಿಗೂ ಅವಕಾಶವಿಲ್ಲ; HDKಗೆ ಸೂರಜ್ ಟಾಂಗ್

"ಮುಂದಿನ ಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರಾದ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷರಾದ ಸಿ. ಎಂ. ಇಬ್ರಾಹಿಂ ನಿರ್ಧಾರವೇ ಅಂತಿಮ" ಎಂದು ರೇವಣ್ಣ ಹೇಳಿದರು.

"ನನ್ನ ಮಕ್ಕಳಾಗಲಿ, ನಾನಾಗಲಿ ಟಿಕೆಟ್​ ಅಂತಿಮಗೊಳಿಸುವುದಿಲ್ಲ.​ ಎಚ್. ಡಿ. ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ, ನಮ್ಮಿಬ್ಬರನ್ನು ದೂರ ಮಾಡುತ್ತೇವೆ ಎಂಬುದು ಕೆಲವರ ಭ್ರಮೆ ಅಷ್ಟೇ" ಎಂದು ಹೊಳೆನರಸೀಪುರದ ಶಾಸಕರ ಎಚ್. ಡಿ. ರೇವಣ್ಣ ತಿಳಿಸಿದರು.

"ಹಾಸನ ಜಿಲ್ಲೆಯ ಏಳೂ ಕ್ಷೇತ್ರಗಳ ಟಿಕೆಟ್ ನಾನೊಬ್ಬನೇ ಅಂತಿಮಗೊಳಿಸುವ ಪ್ರಶ್ನೆ ಇಲ್ಲ. ಎಲ್ಲರೂ ಕುಳಿತುಕೊಂಡು ಚರ್ಚೆ ಮಾಡಿ, ಅಭಿಪ್ರಾಯ ಸಂಗ್ರಹಣೆ ಮಾಡಿ, ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಅಂತಿಮಗೊಳಿಸುತ್ತೇವೆ" ಎಂದು ಎಚ್. ಡಿ. ರೇವಣ್ಣ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಎಲ್ಲರೂ ಬದ್ಧರು; "ಹಾಸನ ಕ್ಷೇತ್ರದಲ್ಲಿ ಕೆಲವರು ಭವಾನಿ ಅವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಇನ್ನೂ ಕೆಲವರು ಇನ್ನೊಬ್ಬರಿಗೆ ಕೊಡಿ ಎನ್ನುತ್ತಿದ್ದಾರೆ. ಇದೆಲ್ಲವನ್ನೂ ತೀರ್ಮಾನ ಮಾಡುವುದು ಪಕ್ಷ. ‌ನಾನಾಗಲಿ, ಸೂರಜ್ ಅಥವ ಪ್ರಜ್ವಲ್ ಆಗಲಿ ತೀರ್ಮಾನ ಮಾಡುವ ಪ್ರಶ್ನೆ ಇಲ್ಲ. ಪಕ್ಷದ ಹೈಕಮಾಂಡ್ ಹೇಳುವುದಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ" ಎಂದರು.

ಹಾಸನ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಆದರೆ ಹಾಸನ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. ಎಚ್. ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಮಂಗಳವಾರ ಮಾತನಾಡಿ, "ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ವಲ್ಪ ದಿನದಲ್ಲಿಯೇ ನನ್ನ ಹೆಸರು ಘೋಷಣೆಯಾಗಲಿದೆ" ಎಂದು ಹೇಳಿದ್ದರು. ಬಳಿಕ ಹಾಸನ ಟಿಕೆಟ್ ವಿಚಾರದಲ್ಲಿ ಕಾವೇರಿದ ಚರ್ಚೆಗಳು ಆರಂಭವಾದವು.

ಭವಾನಿ ರೇವಣ್ಣಗೆ ಟಿಕೆಟ್ ನೀಡಲು ಎಚ್. ಡಿ. ಕುಮಾರಸ್ವಾಮಿ ವಿರೋಧ ಮಾಡುತ್ತಿದ್ದಾರೆ ಎಂಬ ಚರ್ಚೆ ಆರಂಭವಾಯಿತು. ಹಾಸನದಲ್ಲಿ ಹೆಚ್. ಪಿ. ಸ್ವರೂಪ್ ಅಭ್ಯರ್ಥಿಯಾಗಬಹುದು ಎಂಬ ಮಾತುಗಳು ಕೇಳಿ ಬಂದವು. ಮಾಜಿ ಶಾಸಕರಾದ ದಿ. ಹೆಚ್. ಎಸ್. ಪ್ರಕಾಶ್ ಪುತ್ರ ಸ್ವರೂಪ್‌ಗೆ ಟಿಕೆಟ್ ನೀಡುಬೇಕು ಎಂಬ ಬೇಡಿಕೆಯೂ ಇದೆ.

English summary
Former minister and JD(S) leader H. D. Revanna breaks his silence on Hassan assembly seat party ticket row.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X