ಹಾಸನದಲ್ಲಿ ಏ.14ರಂದು ಉದ್ಯೋಗ ಮೇಳ

ಹಾಸನ, ಏ.8 : ಅರಕಲಗೂಡು ತಾಲ್ಲೂಕು ಆಡಳಿತ ಮತ್ತು ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.14ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 18 ರಿಂದ 35 ವರ್ಷಗಳ ಯುವಕ/ಯುವತಿಯರು ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಅರಕಲಗೂಡಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏಪ್ರಿಲ್ 14ರ ಮಂಗಳವಾರ ಬೆಳಗ್ಗೆ 9 ರಿಂದ ಉದ್ಯೋಗ ಮೇಳ ನಡೆಯಲಿದೆ. ಹಾಸನ, ಬೆಂಗಳೂರು, ಮೈಸೂರು ಮತ್ತು ಇತರ ಜಿಲ್ಲೆಗಳ ಹೆಸರಾಂತ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. [ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ]

Jobs

ವಿವಿಧ ವಿದ್ಯಾರ್ಹತೆ ಹಾಗೂ ತರಬೇತಿ ಹೊಂದಿ ಉದ್ಯೋಗ ಹುಡುಕುತ್ತಿರುವ ಯುವಕ/ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸುವುದು ಈ ಉದ್ಯೋಗ ಮೇಳದ ಉದ್ದೇಶವಾಗಿದೆ. ಉದ್ಯೋಗದಾತರನ್ನು ಹಾಗೂ ಉದ್ಯೋಗಾರ್ಥಿಗಳನ್ನು ಒಂದೇ ಸೂರಿನಡಿಯಲ್ಲಿ ಸೇರಿಸಲಾಗುತ್ತಿದೆ. [ಕೆಎಸ್ಆರ್ ಟಿಸಿಯಲ್ಲಿ 5,266 ಹುದ್ದೆಗಳಿವೆ]

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಫೇಲ್/ಪಾಸು, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರ ಶೈಕ್ಷಣಿಕ ಅರ್ಹತೆ ಹೊಂದಿರುವ ಪದವೀಧರರು, ಸ್ನಾತಕೋತ್ತರ ಪದವಿ, ವೃತ್ತಿಪರ ಪದವೀಧರರು ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಯೋಮಿತಿ 18 ರಿಂದ 35 ವರ್ಷ.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಯುವಕ, ಯುವತಿಯರು ತಮ್ಮ ಸ್ವಂತ ಖರ್ಚಿನಲ್ಲಿ ಮೇಳಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು. 08172 - 268374 ಸಂಖ್ಯೆಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+