ಹೆಚ್.ಡಿ ರೇವಣ್ಣಗೆ ಲುಕ್‌ಔಟ್ ನೋಟಿಸ್: ಪುತ್ರನಂತೆ ವಿದೇಶಕ್ಕೆ ಹಾರಿದರಾ ಜೆಡಿಎಸ್ ನಾಯಕ?
ಬೆಂಗಳೂರು, ಮೇ 04: : ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸಿದೆ. ಈಗಾಗಲೇ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಲಾಗಿದ್ದು, ತನಿಖೆ ಕೂಡ ಆರಂಭವಾಗಿದೆ. ಪ್ರಕರಣದಲ್ಲಿ ಎ1 ಆರೋಪಿ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಎ2 ಆರೋಪಿ ಪ್ರಜ್ವಲ್ ರೇವಣ್ಣ ಎಂದು ದಾಖಲಿಸಲಾಗಿದೆ.
ಆದರೆ ಪ್ರಕರಣ ಸಂಬಂಧ ಈವರೆಗೂ ಯಾರೋಬ್ಬ ಆರೋಪಿಯ ಬಂಧನವಾಗಿಲ್ಲ. ಪ್ರಕರಣದ ಎ1 ಆರೋಪಿ ಹಾಗೂ ಎ2 ಆರೋಪಿ ಬಂಧನವಾಗಿಲ್ಲ. ಎ2 ಆರೋಪಿ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದೇ ಜರ್ಮಿನಿಯಲ್ಲಿರುವ ಕಾರಣ ಲುಕ್‌ಔಟ್ ನೋಟಿಸ್ ನೀಡಲಾಗಿತ್ತು. ಇದೀಗ ಹೆಚ್.ಡಿ ರೇವಣ್ಣ ಕೂಡ ದಿಢೀರ್ ನಾಪತ್ತೆ ಆಗಿದ್ದು, ವಿಚಾರಣೆಗೆ ನೋಟಿಸ್ ನೀಡಿದರೂ ಯಾವುದೇ ಉತ್ತರವಿಲ್ಲ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಕರಣ ಇಷ್ಟೊಂದು ಗಂಭೀರವಾಗಿದ್ದರೂ ಎ1 ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಯಾಕೆ ಬಂಧಿಸಿಲ್ಲ ಎನ್ನುವ ಪ್ರಶ್ನೆ ರಾಜ್ಯ ಸರ್ಕಾರದ ಮುಂದಿದೆ. ಇನ್ನು ಪ್ರಕರಣದ ಎ1 ಆರೋಪಿ ಕೂಡ ಈಗ ಕಣ್ಮರೆಯಾಗಿದ್ದು, ಮಗನಂತೆ ತಂದೆ ಕೂಡ ವಿದೇಶಕ್ಕೆ ಹಾರಿದರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಆರೋಪಿಗಳ ಬಂಧನದ ಬಗ್ಗೆ ಗೃಹ ಸಚಿವರ ಉತ್ತರವೇನು..?
ಇನ್ನು ಪ್ರಕರಣ ಸಂಬಂಧ ಆರೋಪಿಗಳನ್ನು ಯಾಕೆ ಬಂಧಿಸಿಲ್ಲ ಎನ್ನುವ ಪ್ರಶ್ನೆಗೆ ಈ ಹಿಂದೆಯೇ ಉತ್ತರಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎನ್ನುವುದೆಲ್ಲಾ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಅಥವಾ ಜಾಮೀನು ಸಿಗದಂತಹ ಪ್ರಕರಣವೇ? ಈ ಅಂಶಗಳನ್ನೆಲ್ಲ ನೋಡಬೇಕಾಗುತ್ತದೆ ಎಂದು ಹೇಳಿದ್ದರು.
ಇಂದು ಕೂಡ ಆರೋಪಿಗಳ ಬಂಧನದ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್‌ನಂತೆ ಬೇರೆ ದೇಶಕ್ಕೆ ಹೋಗುವುದನ್ನು ತಡೆಯಲು ರೇವಣ್ಣ ಅವರಿಗೆ ನೋಟೀಸ್ ಕೊಟ್ಟಾಗಿದ್ದು, ಎರಡನೇ ನೋಟಿಸ್‌ಗೆ ಪ್ರತಿಕ್ರಿಯಿಸಲು ಸಂಜೆಯವರೆಗೆ ಸಮಯವಿದೆ. ಅವರು ಮೈಸೂರು ಅಪಹರಣ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಆಗುತ್ತಿದೆ. ಬಂಧನ ಆಗುತ್ತದೆ ಎಂದು ಹೇಳಿದರು.












Click it and Unblock the Notifications