ಬಿಜೆಪಿ ಶಾಸಕ ನೆಹರು ಓಲೆಕಾರ್, ಮತ್ತವರ ಇಬ್ಬರು ಮಕ್ಕಳಿಗೆ 2 ವರ್ಷ ಜೈಲು ಶಿಕ್ಷೆ: ಕೋರ್ಟ್
ಲಕ್ಷಾಂತರ ರೂಪಾಯಿ ಮೊತ್ತದ ಕಾಮಗಾರಿಯನ್ನು ತನ್ನ ಮಕ್ಕಳಿಗೆ ನೀಡದ ಪ್ರಕರಣದಲ್ಲಿ ಹಾಲಿ ಶಾಸಕರೊಬ್ಬರು ಜೈಲುಪಾಲಾಗಲಿದ್ದಾರೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವ ತೀರ್ಪು ನೀಡಿದೆ.
ಬೆಂಗಳೂರು, ಫೆಬ್ರವರಿ 13: ಲಕ್ಷಾಂತರ ರೂಪಾಯಿ ಮೊತ್ತದ ಕಾಮಗಾರಿಯನ್ನು ತನ್ನ ಮಕ್ಕಳಿಗೆ ನೀಡದ ಪ್ರಕರಣದಲ್ಲಿ ಹಾಲಿ ಶಾಸಕರೊಬ್ಬರು ಜೈಲುಪಾಲಾಗಲಿದ್ದಾರೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವ ತೀರ್ಪು ನೀಡಿದೆ.
ಹೌದು, ಲಕ್ಷಾಂತರ ರೂಪಾಯಿ ಮೌಲ್ಯದ ಕಾಮಗಾರಿಯೊಂದನ್ನು ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೆಕಾರ್ (BJP MLA Neharu Olekar) ಅವರು ತಮ್ಮ ಇಬ್ಬರು ಮಕ್ಕಳಿಗೆ ನೀಡಿದ್ದಾರೆ. ಈ ಸಂಬಂಧ ಶಾಸಕರಿಗೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾದ ಸ್ಥಿತಿ ಎದುರಾಗಿದೆ.
ಒಟ್ಟು ಸುಮಾರು 50 ಲಕ್ಷ ಮೊತ್ತದ ಕಾಮಗಾರಿಯನ್ನು ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರು ತಮ್ಮ ಪುತ್ರರಾದ ಪುತ್ರರಾದ ಮಂಜುನಾಥ್, ದೇವರಾಜ್ ನೀಡಿದ್ದರು. ಈ ಆರೋಪದ ಮೇರೆಗೆ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕರು ಹಾಗೂ ಅವರ ಇಬ್ಬರು ಮಕ್ಕಳಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೋಮವಾರ ಆದೇಶ ಹೊರಡಿಸಿದೆ.

50 ಲಕ್ಷ ರೂ. ಮೊತ್ತದ ಕಾಮಗಾರಿ ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲವು ಕಾಮಗಾರಿಗಳಲ್ಲಿ ಶಾಸಕರಾದ ನೆಹರು ಓಲೆಕಾರ್ ಅವರ ವಿರುದ್ಧ ಸ್ವಜನ ಪಕ್ಷಪಾತದ ಆರೋಪ ಕೇಳಿ ಬಂದಿದ್ದು, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ಇದಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ ಶಾಸಕರಿಗೆ ಜಾಮೀನು ಮಂಜೂರು ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಅದೇ ರೀತಿ ಮೂಡಿಗೆರೆಯಲ್ಲಿ ಮತ್ತೊಬ್ಬ ಬಿಜೆಪಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿಗೆ ಅವರಿಗೂ ಶಿಕ್ಷೆಯ ಸಂಕಷ್ಟವೊಂದು ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಶಾಕಸರಿಗೆ ಶಿಕ್ಷೆ ವಿಧಿಸಿದೆ.
ಒಟ್ಟು 8 ಕೇಸ್ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಮೂರ್ತಿ ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.












Click it and Unblock the Notifications