ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ವಜ್ಞ ಹುಟ್ಟೂರಿನ ಮನೆ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ನಿರ್ಧಾರ

|
Google Oneindia Kannada News

ಬೆಂಗಳೂರು, ಜುಲೈ 7: ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ.

ಇದರ ಜೊತೆಗೆ ಹಿರೇಕೆರೂರು ಪಟ್ಟಣದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಬಲೂರಿನಲ್ಲಿ ಅವರು ವಾಸವಿದ್ದ ಮನೆಯ ಸ್ಥಳ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಅಗತ್ಯವಿರುವ ಖಾಸಗಿ ಜಮೀನು ಖರೀದಿಸಲು ಒಪ್ಪಿಗೆ ನೀಡಲಾಯಿತು.

ಇದರೊಂದಿಗೆ ಸರ್ವಜ್ಞ ಪ್ರಾಧಿಕಾರದಿಂದ 25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮುಖಾಂತರ ಕೈಗೊಳ್ಳುವಂತೆ ಸೂಚಿಸಿದರು. ಇದರೊಂದಿಗೆ ಸರ್ವಜ್ಞರ ನೆನಪಿಗೆ ರೂಪಿಸುವ ಯೋಜನೆಗಳನ್ನು ಅರ್ಥಪೂರ್ಣವಾಗಿ ಹಾಗೂ ಆಯಾ ವಿಷಯಗಳ ಪರಿಣತರೊಂದಿಗೆ ಸಮಾಲೋಚನೆ ನಡೆಸಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಶಿಥಿಲಾವಸ್ಥೆಯಲ್ಲಿದ್ದ ಸವಣೂರು ನವಾಬರ ಅರಮನೆ ಪುನರುಜ್ಜೀವನ ಕಾರ್ಯ ಪೂರ್ಣಗೊಂಡಿದ್ದು, ಇಲ್ಲಿ ಸ್ಥಳೀಯ ಇತಿಹಾಸವನ್ನು ನೆನಪಿಸುವ ವಸ್ತುಸಂಗ್ರಹಾಲಯ ಸ್ಥಾಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.ಆರು ತಿಂಗಳಲ್ಲಿ ವಸ್ತು ಸಂಗ್ರಹಾಲಯದ ಕೆಲಸ ಪೂರ್ಣಗೊಳಿಸುವಂತೆ ತಿಳಿಸಿದರು.

45.56 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅರಮನೆ

45.56 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅರಮನೆ

45.56 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅರಮನೆ, ಕೋಟೆ ಸಂರಕ್ಷಣೆ, ಜೀರ್ಣೋದ್ಧಾರ ಹಾಗೂ ವಸ್ತುಸಂಗ್ರಹಾಲಯ ನವೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಕಿತ್ತೂರಿನ ರಾಣಿ ಚೆನ್ನಮ್ಮನ ಅರಮನೆ ಮತ್ತು ಕೋಟೆಯನ್ನು 18.05 ಕೋಟಿ ರೂ.ಗಳ ವೆಚ್ಚದಲ್ಲಿ ಸಂರಕ್ಷಣೆ ಹಾಗೂ ಪುನರ್ ಸ್ಥಾಪನೆಯನ್ನು ಹಾಗೂ ವಸ್ತು ಸಂಗ್ರಹಾಲಯದ ನವೀಕರಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು 27. 51 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಕೋಟೆಯ ಸುತ್ತ ಸ್ವಚ್ಛ ಮಾಡಬೇಕು

ಕೋಟೆಯ ಸುತ್ತ ಸ್ವಚ್ಛ ಮಾಡಬೇಕು

ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಪುನರ್ ಸ್ಥಾಪನೆ ಮತ್ತು ಜೀರ್ಣೋದ್ಧಾರ ಎರಡೂ ಆಗಬೇಕಿದೆ. ಕೋಟೆಯ ಒಳಭಾಗದ ಜೀರ್ಣೋದ್ಧಾರ ಸರಿಯಾಗಿ ಮಾಡಬೇಕು ಹಾಗೂ ಕೋಟೆಯ ಸುತ್ತ ಸ್ವಚ್ಛ ಮಾಡಬೇಕು. ಇದರ ನಿರ್ವಹಣೆಗೆ ಅಂದಾಜುಪಟ್ಟಿಯನ್ನು ತಯಾರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ವಸ್ತು ಸಂಗ್ರಹಾಲಯದಲ್ಲಿ ಕಿತ್ತೂರು ಸಂಸ್ಥಾನದ ಸಂಪೂರ್ಣ ಕಥೆಯನ್ನು ಹೇಳುವಂತೆ ಅಭಿವೃದ್ಧಿಗೊಳಿಸಬೇಕು. ಪ್ರತಿ ಪಾತ್ರಕ್ಕೂ ಸಮಾನ ಮಹತ್ವವನ್ನು ನೀಡಬೇಕು ಕಿತ್ತೂರು ಅರಮನೆಯ ದರ್ಬಾರಿನ ಪ್ರತಿರೂಪವನ್ನು ನಿರ್ಮಿಸಲು ಹುಬ್ಬಳ್ಳಿಯ ಮೂರು ಸಾವಿರ ಮಠ ಹಾಗೂ ಅಮ್ಮಿನಭಾವಿ ಮಠಗಳ ವಾಸ್ತುಶಿಲ್ಪವನ್ನು ಅಧ್ಯಯನ ಮಾಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಹಾಲೋಗ್ರಾಫಿಕ್ ಸ್ಟುಡಿಯೋ ನಿರ್ಮಾಣವನ್ನು ಮುಂದಿನ ಹಂತದಲ್ಲಿ ಕೈಗೊಳ್ಳುವಂತೆ ಸೂಚಿಸಿದರು.

ಕಾಮಗಾರಿಯನ್ನು ಅನುಭವ ಮತ್ತು ಪರಿಣಿತಿಹೊಂದಿರುವ ಗುತ್ತಿಗೆದಾರರಿಂದ ಮಾಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು

ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು

ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು ಹಾಗೂ ಬಸವ ತತ್ವದ ಅರಿವು ಮೂಡಿಸಬೇಕು. ಇದಕ್ಕೆ ಪೂರಕವಾಗಿ ಕೂಡಲಸಂಗಮವನ್ನು ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಿವಿಲ್ ಕಾಮಗಾರಿಗಳ ಜೊತೆಗೆ, ಕೂಡಲ ಸಂಗಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮ್ಯೂಸಿಯಂನಲ್ಲಿ ಬಸವಣ್ಣನವರ ಜೀವನಚರಿತ್ರೆ, ಅವರ ವಿಚಾರಧಾರೆ ಹಾಗೂ ಅವರ ಸಮಕಾಲೀನ ಶರಣರ ಕುರಿತ ಮಾಹಿತಿಯನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಸಲು ಸೂಚಿಸಿದರು. ಇದಕ್ಕೆ ಅತ್ಯುತ್ತಮ ಮ್ಯೂಸಿಯಂ ಕ್ಯುರೇಟರ್ ಅವರನ್ನು ನೇಮಕ ಮಾಡಿಕೊಳ್ಳುವಂತೆ ತಿಳಿಸಿದರು.

ಬಾಡಿಗೆ ಮೊತ್ತ ಮನ್ನಾ ಮಾಡಲು ಸಭೆಯಲ್ಲಿ ಒಪ್ಪಿಗೆ

ಬಾಡಿಗೆ ಮೊತ್ತ ಮನ್ನಾ ಮಾಡಲು ಸಭೆಯಲ್ಲಿ ಒಪ್ಪಿಗೆ

2023ರ ಮುಂದಿನ ಮೇ ಅಂತ್ಯದೊಳಗೆ ಮೊದಲ ಹಂತವನ್ನು ಪೂರ್ಣಗೊಳಿಸಬೇಕು. ಬಸವ ಅಂತರರಾಷ್ಟ್ರೀಯ ಕೇಂದ್ರದ ಕಟ್ಟಡದ ಪರಿಷ್ಕೃತ ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಪರಿಷ್ಕೃತ ಅಂದಾಜನ್ನು ಅನುಮೋದನೆಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ದೇವಸ್ಥಾನ ಹಾಗೂ ಮಾರಾಟ ಮಳಿಗೆಗಳು ಮುಚ್ಚಿದ್ದವು. ಈ ಹಿನ್ನೆಲೆಯಲ್ಲಿ ಕೂಡಲಸಂಗಮದ ಮಾರಾಟ ಮಳಿಗೆ ಬಾಡಿಗೆದಾರರು ಆರ್ಥಿಕ ಸಂಕಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯ ಬಾಡಿಗೆ ಮೊತ್ತ ಮನ್ನಾ ಮಾಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ಮುರುಗೇಶ್ ನಿರಾಣಿ, ಪ್ರಾಧಿಕಾರದ ವ್ಯಾಪ್ತಿಯ ಶಾಸಕರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recommended Video

Sigandhur Bridge ದೇಶದ ಎರಡನೇ ಅತಿ ದೊಡ್ಡ ಸೇತುವೆ | *India | OneIndia Kannada

English summary
The State government has decided to develop poet Sarvajna's house at his native Abaluru in Haveri district in the name of his parents and his Samadhi(tomb) at Masuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X