Haveri: ಮಗನ ಸ್ಮರಣಾರ್ಥವಾಗಿ ಸರ್ಕಾರಿ ಶಾಲೆಗೆ ₹ 2 ಲಕ್ಷದ ವಿಶೇಷ ಕೊಡುಗೆ ಕೊಟ್ಟ ಮುಖ್ಯೋಪಾಧ್ಯಾಯಿನಿ!

ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯರು ಸರ್ಕಾರಿ ಶಾಲೆಗೆ ನೀಡುರುವ ವಿಶೇಷ ಕೊಡುಗೆಯೂ ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರು ತಮ್ಮ ಮಗನ ಹುಟ್ಟುಹಬ್ಬವನ್ನು ಆಚರಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇದಕ್ಕಾಗಿ ಅವರು ಬರೋಬ್ಬರಿ 2 ಲಕ್ಷ ರೂಪಾಯಿ ವೆಚ್ಚ ಮಾಡಿದ್ದಾರೆ. ಮಗನ ಜನ್ಮದಿನಾಚರಣೆಯನ್ನು ವಿಭಿನ್ನ ಮಾದರಿಯಲ್ಲಿ ಹಂಚಿಕೊಂಡಿದ್ದಾರೆ. ಇದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ತಾವು ಸೇವೆ ಸಲ್ಲಿಸುತ್ತಿರುವ ಶಾಲೆಯಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ವಿಶೇಷ ಯೋಜನೆಯನ್ನು ಅವರು ರೂಪಿಸಿದ್ದಾರೆ. ಹೌದು ಹಾವೇರಿಯ ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾನಿಯ ಕ್ರಮವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು ಕರ್ನಾಟಕದ ಕೆಲವೊಂದು ಸರ್ಕಾರಿ ಶಾಲೆಗಳ ಸ್ಥಿತಿ ಗಂಭೀರವಾಗಿದೆ. ಹಲವು ದಾನಿಗಳು - ಸಮಾಜ ಸೇವಕರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅದೇ ರೀತಿ ತಮ್ಮ ಮಗನ ಜನ್ಮದಿನವನ್ನು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರು ಭಿನ್ನವಾಗಿ ಆಚರಿಸಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿ ಉಮೈ ಸಲ್ಮಾ ಕಡೂರ್ ಅವರು ತಮ್ಮ ವೈಯಕ್ತಿಕ ಉಳಿತಾಯದಿಂದ ಸುಮಾರು 2 ಲಕ್ಷ ರೂ.ಗಳನ್ನು ಖರ್ಚು ಮಾಡಿ ಇಡೀ ಶಾಲೆಯ ವಾತಾವರಣವನ್ನೇ ಬದಲಾಯಿಸಿದ್ದಾರೆ. ಸರ್ಕಾರಿ ಶಾಲೆಯ ತರಗತಿಗಳಿಗೆ ಪೇಯಿಂಟಿಂಗ್ ಮತ್ತು ತರಗತಿ ಕೊಠಡಿಗಳನ್ನು ಸುಂದರಗೊಳಿಸಲು ಖರ್ಚು ಮಾಡಿದ್ದಾರೆ. ಈ ಸರ್ಕಾರಿ ಶಾಲೆಗೆ ಸುಣ್ಣಬಣ್ಣ ಬಳಿದು 10 ವರ್ಷಗಳೇ ಆಗಿತ್ತು. ಇದೀಗ ಮತ್ತೆ ಪೇಯಿಂಟಿಂಗ್ ಮಾಡಲಾಗಿದ್ದು, ಶಾಲೆಯ ಕೊಠಡಿಗಳನ್ನು ರೈಲ್ವೆ ಕೋಚ್ ಮಾದರಿಯಲ್ಲಿ ಬದಲಾಯಿಸಲಾಗಿದೆ.

Haveri

ಶಾಲಾ ಅಧಿಕಾರಿಗಳ ಪ್ರಕಾರ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಉಮೈ ಸಲ್ಮಾ ಸಮಿತಿಯ ಸದಸ್ಯರಿಗೆ, ವಾರ್ಷಿಕ ಶಾಲಾ ಸಮಾರಂಭದ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳಬಹುದು. ಆದರೆ ಅವರು ತಮ್ಮ ಪುತ್ರ ಮಲ್ಲಿಕ್ ರೆಹನ್ ಅವರ 26ನೇ ಜನ್ಮದಿನದ ಸ್ಮರಣಾರ್ಥ ಶಾಲೆಯ ಪೇಯಿಂಟಿಂಗ್ ಮಾಡಿದ್ದಾರೆ. ತಮ್ಮ ಮಾತಿನಂತೆ, ಕಾಮಗಾರಿಯ ಸಂಪೂರ್ಣ ವೆಚ್ಚವನ್ನು ಸ್ವತಃ ಭರಿಸಿ ನವೀಕರಣ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಅವರ ಈ ವಿಭಿನ್ನ ಕೊಡುಗೆಗೆ ಪೋಷಕರು, ಶಿಕ್ಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಸರ್ಕಾರಿ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೊಸದಾಗಿ ಬಣ್ಣ ಬಳಿದ ತರಗತಿ ಕೊಠಡಿಗಳು ರೈಲಿನೊಳಗೆ ಪ್ರಯಾಣಿಸುತ್ತಿರುವಂತೆ ಭಾಸವಾಗುತ್ತವೆ. ಕಲಿಕೆಯನ್ನು ಹೆಚ್ಚು ಆನಂದದಾಯಕವಾಗಿಸುವ ಉದ್ದೇಶದಿಂದ ಈ ಮಾದರಿ ಅನುಸರಿಸಲಾಗಿದೆ. ಶಾಲಾ ಕಟ್ಟಡವು ತುಂಬಾ ಕೆಟ್ಟದಾಗಿತ್ತು. ಇದೀಗ ಇದರ ಒಟ್ಟಾರೆ ರೂಪವೇ ಬದಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹಂಸಭಾವಿ ಗ್ರಾಮದ ನಿವಾಸಿಗಳು ಮತ್ತು ಶಿಕ್ಷಕ ಸಮುದಾಯದ ಸದಸ್ಯರು ಉಮೈ ಸಲ್ಮಾ ಅವರ ಈ ವಿನೂತನ ಪ್ಲ್ಯಾನ್‌ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+