ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಕೆಲಸಕ್ಕೆ ಅಡ್ಡಿ ಇಲ್ಲ

|
Google Oneindia Kannada News

ಬೆಂಗಳೂರು, ಡಿಸೆಂಬರ್ 18 : ತಮ್ಮ ಪದಚ್ಯುತಿ ಪ್ರಶ್ನಿಸಿ ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿಗೆ ಮುಂದೂಡಿದೆ. ಉಪ ಲೋಕಾಯುಕ್ತರು ಕಾರ್ಯ ನಿರ್ವಹಿಸಬಹುದು ಎಂದು ಕರ್ನಾಟಕ ಸರ್ಕಾರ ಕೋರ್ಟ್‌ಗೆ ಲಿಖಿತ ಹೇಳಿಕೆ ನೀಡಿದೆ.

ಕಾಂಗ್ರೆಸ್‌ನ 78ಕ್ಕೂ ಅಧಿಕ ಶಾಸಕರು ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರ ಪದಚ್ಯುತಿ ನಿರ್ಣಯನ್ನು ಸದನದಲ್ಲಿ ಮಂಡನೆ ಮಾಡಿದ್ದರು. ಇದಕ್ಕೆ ಸದನದ ಒಪ್ಪಿಗೆಯೂ ಸಿಕ್ಕಿತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಪದಚ್ಯುತಿ ನಿರ್ಣಯ ಇನ್ನೂ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಕೈಯಲ್ಲಿಯೇ ಇದೆ. [ಉಪ ಲೋಕಾಯುಕ್ತ ಸುಭಾಷ್‌ ಅಡಿ ಪದಚ್ಯುತಿ?]

lokayukta

ತಮ್ಮ ವಿರುದ್ಧ ಪದಚ್ಯುತಿ ನಿರ್ಣಯವನ್ನು ಮಂಡನೆ ಮಾಡಿರುವುದನ್ನು ಪ್ರಶ್ನಿಸಿ ಸುಭಾಷ್‌ ಬಿ ಅಡಿ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್, ಜನವರಿ 2ನೇ ವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. [ಲೋಕಾಯುಕ್ತ ಪದಚ್ಯುತಿ ನಿರ್ಣಯ ಹೇಗೆ?]

ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರ ಪರವಾಗಿ ಹಿರಿಯ ವಕೀಲ ಬಿ.ವಿ.ಆಚಾರ್ಯ ವಾದ ಮಂಡನೆ ಮಾಡಿದರು. ಉಪ ಲೋಕಾಯುಕ್ತ ಎಂಬುದು ಸಂವಿಧಾನಿಕ ಹುದ್ದೆಯಾಗಿದೆ. ಪದಚ್ಯುತಿ ನಿರ್ಣಯ ಮಂಡನೆಯಾಗಿರುವುದರಿಂದ ಅವರ ಕಾರ್ಯಕ್ಕೆ ತೊಂದರೆಯಾಗಿದೆ. ಅವರ ಮೇಲೆ ಬಂದಿರುವ ಯಾವ ಆರೋಪಗಳು ಸಾಬೀತಾಗಿಲ್ಲ ಎಂದರು. [ಲೋಕಾಯುಕ್ತ ಹುದ್ದೆಗೆ ಎಸ್.ಆರ್.ನಾಯಕ್ ಹೆಸರು?]

ಪದಚ್ಯುತಿ ಪ್ರಸ್ತಾವನೆಯ ಬಗ್ಗೆ ಸರ್ಕಾರದಿಂದ ನ್ಯಾಯಮೂರ್ತಿಗಳು ವಿವರಣೆ ಕೇಳಿದರು. ಉತ್ತರ ನೀಡಲು ಕಾಲಾಕಾಶ ನೀಡುವಂತೆ ಅಡ್ವೊಕೇಟ್ ಜನರಲ್ ಮಧುಸೂದನ್ ನಾಯಕ್ ಕೋರ್ಟ್‌ಗೆ ಮನವಿ ಮಾಡಿದರು. ಆಗ, ಸುಭಾಷ್‌ ಬಿ ಅಡಿ ಕಾರ್ಯನಿರ್ವಹಿಸಬಹುದೆಂದು ಎಜಿಯಿಂದ ಹೇಳಿಕೆ ಪಡೆದ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.

ಯಾವ ಆರೋಪಗಳಿವೆ : ಹಿಂದೆ ಉಪ ಲೋಕಾಯುಕ್ತರಾಗಿದ್ದ ಎಸ್‌.ಬಿ.ಮಜಗೆ ಅವರು ಸುಭಾಷ್‌ ಅಡಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ಆಧಾರದ ಮೇಲೆ ಅವರನ್ನು ಪದಚ್ಯುತಿಗೊಳಿಸುವ ನಿರ್ಣಯವನ್ನು ಕಾಂಗ್ರೆಸ್ ಸದನದಲ್ಲಿ ಮಂಡಿಸಿತ್ತು.

English summary
Karnataka High Court adjourned the hearing of the petition of Justice Subhash B Adi challenging the ouster motion adopted against him from the post of upa-Lokayukta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X