RSS ಪಥಸಂಚಲನಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರಕ್ಕೆ ಮುಖಭಂಗ: ಬಿ.ವೈ ವಿಜಯೇಂದ್ರ
ಬೆಂಗಳೂರು, ಅಕ್ಟೋಬರ್ 19: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆ ಬ್ಯಾನ್ ಮಾಡಿರುವ ರಾಜ್ಯ ಸರ್ಕಾರಕ್ಕೆ ಇದೀಗ ಹಿನ್ನಡೆ ಆಗಿದೆ. ಚಿತ್ತಾಪುರದಲ್ಲಿ RSS ಪಥಸಂಚಲನ ನಿರ್ಬಂಧಿಸಲು ಸರ್ಕಾರ, ಸಚಿವರು ಮುಂದಾಗಿದ್ದರು. ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ ಎಂದು ಬಿಜೆಪಿ ದೂರಿತ್ತು. ಇದರ ಬೆನ್ನಲ್ಲೆ ಹೈಕೋರ್ಟ್ ಪಥ ಸಂಚಲನಕ್ಕೆ ಅನುಮತಿ ನೀಡಿದ್ದು, ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ. ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ ಎಂದು ವ್ಯಾಖ್ಯಾನಿಸಿದ್ದಾರೆ.
ಕಾಂಗ್ರೆಸ್ ನ ಕುಟಿಲ ನೀತಿಯು ತೀರ್ಪಿನಿಂದ ನಿಷ್ಕ್ರೀಯ
ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಸಂದೇಶ ಇಂದಿನ ತೀರ್ಪಿನ ಮೂಲಕ ರವಾನೆಯಾಗಿದೆ, ರಾಷ್ಟ್ರಭಕ್ತ ಸಂಘಟನೆಗಳನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್ ನ ಕುಟಿಲ ನೀತಿಯು ನ್ಯಾಯಾಲಯದ ತೀರ್ಪಿನಿಂದ ನಿಷ್ಕ್ರಿಯಗೊಂಡಂತಾಗಿದೆ ಎಂದು ಹೇಳಿದರು.
ಇದಕ್ಕು ಮೊದಲು ಅನುಮತಿ ನಿರಾಕರಿಸುವ ಪ್ರಯತ್ನ ವಿರುದ್ಧ ಕಿಡಿ ಕಾರಿದ್ದರು. ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಲಾಗಿದೆ. ಇದು ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ ಎಂದು ಸರ್ಕಾರ ನಡೆ ಖಂಡಿಸಿದ್ದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ. ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತುಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ.
ಚಿತ್ತಾಪುರದಲ್ಲಿ ಉಸಿರುಗಟ್ಟಿಸುವ ವಾತಾವರಣ
ಡಾ.ಬಾಬಾ ಸಾಹೇಬ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಅಣಕಿಸುವ ರೀತಿಯಲ್ಲಿ ಚಿತ್ತಾಪುರದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಮಾಡಿದ್ದಾರೆ. RSS ಪಥಸಂಚಲನ ಹಾಗೂ ಕಾರ್ಯಕ್ರಮದ ಅನುಮತಿಗೆ ವಿಧಿಸಿರುವ ಷರತ್ತುಗಳನ್ನು ರಾಜ್ಯಕ್ಕೆ ಅನ್ವಯಿಸಿ ಬಿಟ್ಟರೆ ಕರ್ನಾಟಕದ ಯಾವುದೇ ಮೂಲೆಗಳಲ್ಲೂ ಯಾವುದೇ ಸಾಂಸ್ಕೃತಿಕ ಹಾಗೂ ರಾಷ್ಟ್ರಭಕ್ತಿಯ ಕಾರ್ಯಕ್ರಮಗಳನ್ನು ನಡೆಸಲು ಆಸ್ಪದವೇ ಇಲ್ಲದಂಥ ಪರಿಸ್ಥಿತಿ ನಿರ್ಮಾಣವಾಗಲಿದೆ.
ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ಆಡಳಿತ ಹೇರಲು ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸುತ್ತಿದೆ ಅದಕ್ಕೆ ಚಿತ್ತಾಪುರವನ್ನು ಪ್ರಯೋಗಾಲಯ ಮಾಡಿಕೊಂಡಿದೆ. ಚಿತ್ತಾಪುರದಲ್ಲಿ ಸದ್ಯ ಆರಂಭವಾಗಿರುವುದು ಸರ್ವಾಧಿಕಾರಿ ಆಡಳಿತ V/S ಪ್ರಜಾಪ್ರಭುತ್ವದ ನಡುವಿನ ಸಮರ ಇದನ್ನು ಸವಾಲಾಗಿ ಸ್ವೀಕರಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಲು ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಎಚ್ಚರಿಸಿದ್ದರು. ಇದರ ಬೆನ್ನಲ್ಲೆ ಕೋರ್ಟ್ ಪಥಸಂಚಲನಕ್ಕೆ ಪರ್ಮಿಷನ್ ಕೊಟ್ಟಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications