ಗುತ್ತಿಗೆದಾರರ ಬಾಕಿ ಪಾವತಿ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು, ನವೆಂಬರ್ 30: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ ಸಂಬಂಧ ಕರ್ನಾಟಕ ಸರ್ಕಾರದ ಕಾರ್ಯವೈಖರಿಯನ್ನು ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? ಎಂದು ಕೇಳಿದೆ. ಡಿಸೆಂಬರ್ 13ರೊಳಗೆ ಹಣ ಪಾವತಿಸುವಂತೆ ಆದೇಶ ನೀಡಿದೆ.

ಮೆಸರ್ಸ್‌ ನಿಕ್ಷೇಪ್‌ ಇನಾಧ್ರಿ ಪ್ರಾಜೆಕ್ಟ್ ಬಾಕಿ ಪಾವತಿ ಸಂಬಂಧ ನ್ಯಾಯಾಲಯದ ಆದೇಶ ಪಾಲಿಸದ ಬಿಬಿಎಂಪಿ ವಿರುದ್ಧ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಸರ್ಕಾರದ ವಿರುದ್ಧ ಕಿಡಿ ಕಾರಿತು.

HC Came Down Against State For Not Paying Dues To Contractors

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, "ನಾವು 2023ರ ಅ.30ರ ಮಧ್ಯಂತರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ, ಆದರೂ ಬಾಕಿ ಪಾವತಿಗೆ ಹಿಂದೂ ಮುಂದೂ ನೋಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೆ ಕಚೇರಿಗೆ ಕಚೇರಿಗೆ ಅಲೆದಾಡಿಸುವುದು ಸರಿಯೇ?. ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಿರುವ ಬಗ್ಗೆ ಯಾವುದೇ ವಿವಾದವಿಲ್ಲ. ಕಾಮಗಾರಿ ಸ್ಥಗಿತಗೊಳಿಸಿ ಅದು ಅರ್ಧಕ್ಕೆ ನಿಂತಿರುವ ಪರಿಸ್ಥಿತಿಯೂ ಇಲ್ಲ. ಇದು ಸರಳ ಪ್ರಕರಣ, ಕಾಮಗಾರಿ ಪೂರ್ಣಗೊಳಿಸಿದ ನಂತರ ನೀವು ಕಾಯುತ್ತಿರೀ ಎಂದರೆ ಹೇಗೆ?" ಎಂದು ಕೇಳಿತು.

"ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗಾಗಿ ನಿಮ್ಮ ದಾಖಲೆ ಪರಿಶೀಲಿಸಿ. ನೀವು ಗುತ್ತಿಗೆದಾರರನ್ನು ಮೂಲೆಗುಂಪು ಮಾಡಬೇಡಿ. ಈ ಬಾಕಿ ಪಾವತಿಗೆ ಬಿಬಿಎಂಪಿ ಅನುಸರಿಸುತ್ತಿರುವ ವಿಧಾನವೇ ತಿಳಿಯುತ್ತಿಲ್ಲ, ಕಲ್ಯಾಣ ರಾಜ್ಯದಲ್ಲಿ ಕೆಲವು ಕಾಮಗಾರಿಗಳಿಗೆ ಸ್ಥಳೀಯ ಸಂಸ್ಥೆ ಟೆಂಡರ್‌ ಕರೆದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಳಿಕ ಮೊತ್ತ ಪಾವತಿಗೆ ಷರತ್ತುಗಳನ್ನು ಒಡ್ಡುವುದು, ಅನಗತ್ಯ ವಿಳಂಬ ಮಾಡುವುದು ಎಷ್ಟರ ಮಟ್ಟಿಗೆ ಸರಿ?" ಎಂದು ಪ್ರಶ್ನಿಸಿತು.

ನಕಲಿ ಬಿಲ್‌ಗಳ ವಿಚಾರ; ಈ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ನಗರಾಭಿವೃದ್ಧಿ ಕಾರ್ಯದರ್ಶಿ ಡಾ. ಅಜಯ್‌ ನಾಗಭೂಷಣ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ವಾಣಿ, ಬಿಬಿಎಂಪಿ ಮಲ್ಲೇಶ್ವರ ವಿಭಾಗದ ಕಾರ್ಯಕಾರಿ ಇಂಜಿನಿಯರ್‌ ಜೈಶಂಕರ್‌ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕೆಲವು ನಕಲಿ ಬಿಲ್‌ಗಳ ವಿಚಾರ ಪ್ರಸ್ತಾಪಿಸಿದಾಗ ನ್ಯಾಯಾಲಯ, "ಆದಕ್ಕೂ ಈ ಅರ್ಜಿದಾರರಿಗೂ ಸಂಬಂಧ ಇಲ್ಲ, ಒಂದು ವೇಳೆ ನೀವು ಸ್ವಚ್ಛಗೊಳಿಸುವ ಕಾರ್ಯಾಚರಣೆ ಆರಂಭಿಸಿದರೆ ಅದನ್ನು ಮೊದಲು ನಿಮ್ಮ ಮನೆಯಿಂದ ಆರಂಭಿಸಿ. ನೀವು ನಿಮ್ಮ ಅಧಿಕಾರಿಗಳ ವಿರುದ್ಧ ಏನಾದರೂ ಕ್ರಮ ಕೈಗೊಂಡಿದ್ದಿರಾ?, ಹಾಗಿದ್ದರೆ ಹೇಳಿ? ನಾವು ನಮ್ಮ ಆದೇಶದಲ್ಲಿ ಅತ್ಯಂತ ಸ್ಪಷ್ಟವಾಗಿ ಹೇಳಿದ್ದೇವೆ, ರಾಜ್ಯ ಸರ್ಕಾರ ಸ್ವಲ್ಪ ವಿವೇಚನೆಯಿಂದ ಕಾರ್ಯನಿರ್ವಹಿಸಬೇಕು ಅಷ್ಟೇ" ಎಂದು ನ್ಯಾಯಾಲಯ ಹೇಳಿತು.

ಬಿಬಿಎಂಪಿ ಪರ ವಕೀಲರು ಕೆಲವು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಕ್ಕೆ ನ್ಯಾಯಪೀಠ, ನಾವು ಹಿಂದಿನ ಆದೇಶದಲ್ಲಿ ಉಲ್ಲೇಖಿಸಿದಂತೆ ರಾಜ್ಯ ಸರ್ಕಾರವೇ ಇಂತಹ ಪರಿಸ್ಥಿತಿಗಳನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದೆ ಎಂದು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+