ಮದುವೆ ಆಗೋದಾಗಿ ಪೊಲೀಸ್ ಪೇದೆ ವಂಚನೆ; ಜಾಮೀನು ರದ್ದು, 1 ಲಕ್ಷ ದಂಡ
ಬೆಂಗಳೂರು, ಮಾರ್ಚ್ 13: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಲ್ಲದೆ, ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪ ಎದುರಿಸುತ್ತಿದ್ದ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯ ಪೇದೆ ಫಕೀರಪ್ಪ ಹಟ್ಟಿ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಷ್ಟೇ ಅಲ್ಲದೆ, ಕೂಡಲೇ ಆತನನ್ನು ಬಂಧಿಸುವಂತೆ ಡಿಸಿಪಿಗೆ ನಿರ್ದೇಶನವನ್ನೂ ಸಹ ನೀಡಿದೆ.
ಇದರಿಂದಾಗಿ ಪೊಲೀಸ್ ಪೇದೆ ಮತ್ತೆ ಸಿಕ್ಕಿ ಹಾಕಿಕೊಳ್ಳಲಿದ್ದು, ತಪ್ಪಿನ ಮೇಲೆ ತಪ್ಪು ಮಾಡಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಆರೋಪಿ ಪೇದೆ ಎರಡು ವಾರಗಳಲ್ಲಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶ ನೀಡಿದೆ. ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ ರಿಜಿಸ್ಟ್ರಾರ್ ಜನರಲ್ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಮಾಹಿತಿ ಮುಚ್ಟಿಟ್ಟು ನ್ಯಾಯಾಲಯವನ್ನೇ ದಾರಿತಪ್ಪಿಸಿದ ಶಬನಾ ತಾಜ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಹೆಚ್. ಪಿ. ಸಂದೇಶ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಪೇದೆಯನ್ನು ವಶಕ್ಕೆ ಪಡೆಯುವಂತೆ ಹಾಗೂ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಬೈಲಹೊಂಗಲ ತಾಲೂಕಿನ ನೇಗಿನಹಾಳ ಮೂಲದ ಆರೋಪಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿಎಫ್‌ಐಆರ್ ದಾಖಲಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ: ಮಹದೇವಪುರ ಠಾಣೆಯಲ್ಲಿ ಫಕೀರಪ್ಪ ಹಟ್ಟಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮನೆ ಖಾಲಿ ಮಾಡಿಸುವ ವಿಚಾರದಲ್ಲಿ ಪೊಲೀಸ್ ಠಾಣೆಗೆ ತೆರಳಿದಾಗ ಪೇದೆಗೆ ಸಂತ್ರಸ್ತೆ ಪರಿಚಯವಾಯಿತು. ಆನಂತರ ತಾನು ವಿವಾಹವಾಗುವುದಾಗಿ ಆಕೆಯನ್ನು ನಂಬಿಸಿ 2019 ರಿಂದ 2022 ರವರೆಗೆ ನಿರಂತರ ಅತ್ಯಾಚಾರವೆಸಗಿದ್ದರು ಎಂದು ಆರೋಪಿಸಲಾಗಿದೆ.
ಆ ಬಗ್ಗೆ ಪೊಲೀಸ್ ಠಾಣೆ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರೂ ಎಫ್‌ಐಆರ್ ದಾಖಲಿಸಿರಲಿಲ್ಲ. ಕೊನೆಗೆ ಸಂತ್ರಸ್ತೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆನಂತರ ಆರೋಪಿ ನಿರೀಕ್ಷಣಾ ಜಾಮೀನು ಪಡೆದಿದ್ದನು. ಆರೋಪಿ ಸೆಷನ್ಸ್ ಕೋರ್ಟ್‌ನಿಂದ ಪಡೆದಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿತ್ತು.
ಆದರೆ ಜಾಮೀನು ರದ್ದಾದ ವಿಚಾರ ಕೋರ್ಟ್ ಗಮನಕ್ಕೂ ತರದ ಆರೋಪಿ ಹೊರಗೆ ಇದ್ದನು. ಆ ಹಿನ್ನೆಲೆಯಲ್ಲಿ ಮಹಿಳೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯನ್ನು ಆಲಿಸಿದ ನ್ಯಾಯಾಲಯ ಪೇದೆ ಫಕೀರಪ್ಪನನ್ನು ಕೂಡಲೇ ವಶಕ್ಕೆ ಪಡೆಯಲು ಡಿಸಿಪಿಗೆ ಸೂಚನೆ ನೀಡಿದೆ.
ನ್ಯಾಯಾಲಯದ ಹಾದಿ ತಪ್ಪಿಸಿದ್ದು: 'ಪೊಲೀಸ್ ಪೇದೆ ಹೆಸರಿನಲ್ಲಿಆರೋಪಿ ಸಂತ್ರಸ್ತೆಯನ್ನು ಬೆದರಿಸಿದ್ದಾರೆ ಮತ್ತು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಆನಂತರ ನ್ಯಾಯಾಲಯದ ಆದೇಶವನ್ನು ಪೊಲೀಸರು ಪಾಲಿಸಿಲ್ಲ. ಇದು ಕಾನೂನಿನ ಸ್ಪಷ್ಟ ದುರುಪಯೋಗವಾಗಿದೆ. ಆರೋಪಿ ಬಹಳ ಜಾಣ್ಮೆಯಿಂದ ಕೆಲವು ವಸ್ತು ಸಂಗತಿಗಳನ್ನು ಮುಚ್ಟಿಟ್ಟು ನ್ಯಾಯಾಲಯಗಳ ಹಾದಿ ತಪ್ಪಿಸಿದ್ದಾನೆ. ಹಾಗಾಗಿ ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದೆ' ಎಂದು ಕೋರ್ಟ್ ಹೇಳಿದೆ.
ಅಲ್ಲದೆ, ಈ ಪ್ರಕರಣದಲ್ಲಿ ತನಿಖಾಧಿಕಾರಿ ಆರೋಪಿ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ಕೆಲವು ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆ. ಏಕೆಂದರೆ ಈ ಪ್ರಕರಣ ಪೊಲೀಸರಿಗೆ ಸಂಬಂಧಿಸಿದ್ದು ಎಂಬ ಕಾರಣಕ್ಕೆ. ಹಾಗಾಗಿ ಈ ಹಿಂದೆ ಪಡೆದಿರುವ ಜಾಮೀನು ರದ್ದುಗೊಳಿಸಲು ಪ್ರಕರಣ ಎಲ್ಲಾ ರೀತಿಯಲ್ಲೂಅರ್ಹವಾಗಿದೆ. ಆರೋಪಿ ವಿಚಾರಣೆಯನ್ನು ಎದುರಿಸಲಿ ಎಂದು ನ್ಯಾಯಪೀಠ ಆದೇಶಿಸಿದೆ.












Click it and Unblock the Notifications