ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸೈನಿಕನಿಗೆ ಭೂಮಿ ವಾಪಸ್ ನೀಡದ ಪ್ರಕರಣ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ನ.18: ನಿವೃತ್ತ ಸೈನಿಕನಿಗೆ ತನ್ನ ಮಾಲೀಕತ್ವದ ಜಮೀನು ವಾಪಸ್ ಕೊಡಿಸಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಅಲ್ಲದೆ, ಇಂತಹ ಪ್ರಕರಣಗಳಲ್ಲಿ ಜಮೀನನ್ನು ಉಳುವವರಿಂದ ವಾಪಸು ಕೊಡಿಸಲು ಸರ್ಕಾರ ತನ್ನ ದೈತ್ಯ ಶಕ್ತಿ ಉಪಯೋಗಿಸಬೇಕು ಮತ್ತು ಇದು ಸರ್ಕಾರದ ಆದ್ಯ ಜವಾಬ್ದಾರಿಯಾಗಿರುತ್ತದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶ ನೀಡಿದೆ.

ಅರ್ಜಿ ವಜಾಗೊಳಿಸಿರುವ ನ್ಯಾಯಪೀಠ, 'ಹಿಡುವಳಿ ಕಾಯ್ದೆ ಅಡಿಯಲ್ಲಿ ಉಳುವವನೇ ಒಡೆಯ ತತ್ವವು ಸೈನಿಕರಿಗೆ ಅನ್ವಯ ಆಗುವುದಿಲ್ಲ. ತಮ್ಮ ಜಮೀನು ಲಾವಣಿದಾರರ ವಶಕ್ಕೆ ಹೋಗಿದ್ದರೆ ಸೇವೆಯಿಂದ ಹಿಂದಿರುಗಿ ಅಥವಾ ನಿವೃತ್ತಿ ಪಡೆದು ಬಂದ ನಂತರದ ಒಂದು ವರ್ಷದ ಅವಧಿಯಲ್ಲಿ ವಾಪಸು ಪಡೆಯಲು ಮನವಿ ಸಲ್ಲಿಸಬೇಕು. ಅಂತಹವರಿಗೆ ಕಾಯ್ದೆಯ ಗುತ್ತಿಗೆ ಕರಾರುಗಳಿಂದ ರಿಯಾಯ್ತಿ ನೀಡಲಾಗಿದೆ' ಎಂದು ಹೇಳಿದೆ.

'ಕರ್ನಾಟಕ ಭೂ ಸುಧಾರಣಾ ಕಾಯ್ದೆ 961ರ 15 (5)ರ ಅನುಸಾರ ಸೈನಿಕರು ನಿವೃತ್ತಿ ಆದ ಮೇಲೆ ತಮ್ಮ ಮಾಲೀಕತ್ವದ ಜಮೀನನ್ನು ಪುನಃ ಪಡೆಯಬಹುದು. ಇಲ್ಲವಾದಲ್ಲಿ ಸೈನಿಕರು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಅವರು ಭಾವಿಸಿದ್ದೇ ಆದಲ್ಲಿ, ತಾವು ಹೇಗೆ ದೇಶ ರಕ್ಷಣೆ ಮಾಡಬೇಕು ಎಂಬ ಜಿಜ್ಞಾಸೆಗೆ ಒಳಗಾಗುತ್ತಾರೆ. ಹೀಗಾಗಿ, ಸರ್ಕಾರಗಳು ಸೈನಿಕರ ಬಗ್ಗೆ ಅತ್ಯಂತ ಮುತುವರ್ಜಿಯಿಂದ ವರ್ತಿಸಬೇಕು' ಎಂದು ನ್ಯಾಯಪೀಠ ಹೇಳಿದೆ.

HC comes to the rescue of retired solider and ordered state take steps to get his land

ಅಲ್ಲದೆ, ಆರು ವಾರಗಳಲ್ಲಿ ಸರ್ಕಾರ ನಿವೃತ್ತ ಸೈನಿಕನಿಗೆ ಭೂಮಿ ಕೊಡಿಸಲು ಕ್ರಮ ಕೈಗೊಳ್ಳಬೇಕು ಎದು ನ್ಯಾಯಾಲಯ ಆದೇಶಿಸಿದೆ.

'ನಮ್ಮ ದೇಶದ ಗಡಿಗಳನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಸೈನಿಕರನ್ನು ಸಮಾಜದ ಒಂದು ವಿಭಾಗವು ಎಷ್ಟೊಂದು ಕಳಪೆಯಾಗಿ ನಡೆಸಿಕೊಳ್ಳಬಹುದು ಎಂಬುದಕ್ಕೆ ಇದೊಂದು ಶ್ರೇಷ್ಠ ಉದಾಹರಣೆಯಾಗಿದೆ' ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯಪೀಠ, 'ಲೆಫ್ಟಿನೆಂಟ್ ಕರ್ನಲ್ ಅವರಿಗೆ ಎಂಟು ವಾರಗಳಲ್ಲಿ ಜಮೀನು ಸ್ವಾಧೀನಕ್ಕೆ ನೀಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅರ್ಜಿದಾರರನ್ನು ವಿವಾದಿತ ಸ್ಥಳದಿಂದ ಒಕ್ಕಲೆಬ್ಬಿಸಿ ಸ್ವಾಧೀನಕ್ಕೆ ನೀಡಬೇಕು' ಎಂದು ಖಡಕ್ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ: ಲೆಫ್ಟಿನೆಂಟ್ ಕರ್ನಲ್ ಗೋಪಾಲಕೃಷ್ಣ ಭಟ್ಟ ಅವರು 1993ರಲ್ಲಿ ರಕ್ಷಣಾ ಸೇವೆಯಿಂದ ನಿವೃತ್ತಿ ಹೊಂದಿದ್ದರು. ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ಕಲಂ 15 (4)ರ ಅಡಿಯಲ್ಲಿ ತಮ್ಮ 4 ಎಕರೆಗೂ ಅಧಿಕ ಜಮೀನನ್ನು ವಾಪಸು ಕೊಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ತಹಶೀಲ್ದಾರ್ ಅವರು, ಅರ್ಜಿದಾರರಿಗೆ ಜಮೀನು ಸ್ವಾಧೀನಕ್ಕೆ ಬಿಟ್ಟುಕೊಡುವಂತೆ ನೀಡಿದ್ದರೂ ನಫೀಜಾ ಮತ್ತಿತರ ಅರ್ಜಿದಾರರು ನೋಟಿಸ್ ಅನ್ನು ಮಾನ್ಯ ಮಾಡಿರಲಿಲ್ಲ. ಈ ಜಮೀನನ್ನು ಬಿಟ್ಟುಕೊಡುವಂತೆ ತಹಶಿಲ್ದಾರ್ ಲಾವಣಿ ಮಾಡುತ್ತಿದ್ದ ನಫೀಜಾ ಮತ್ತಿತರರಿಗೆ ನಿರ್ದೇಶಿಸಿದ್ದರು. ಆದರೆ, ತಹಶೀಲ್ದಾರ್ ಆದೇಶವನ್ನು ಪ್ರಶ್ನಿಸಿ ನಫೀಜಾ ಸೇರಿದಂತೆ ಒಟ್ಟು 23 ಜನರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

English summary
Karnataka High Court comes to the rescue of retired solider and ordered state take steps to get his land
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X