12.15 ಲಕ್ಷ ರೂ. ವಾಪಸ್ ನೀಡಲು ಹೈಕೋರ್ಟ್ ನಿರ್ದೇಶನ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ 12.15 ಲಕ್ಷ ರೂಪಾಯಿಗಳನ್ನು ಹಿಂದಿರುಗಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು, ಫೆಬ್ರವರಿ 07; ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ಹಿಂದಿನ ಜಂಟಿ ನಿರ್ದೇಶಕರ ಮನೆಯಿಂದ ವಶಪಡಿಸಿಕೊಂಡಿದ್ದ 12.15 ಲಕ್ಷ ರೂಪಾಯಿಗಳನ್ನು ಹಿಂದಿರುಗಿಸುವಂತೆ ಕರ್ನಾಟಕ ಹೈಕೋರ್ಟ್ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಆದೇಶ ನೀಡಿದೆ.
ನಿವೃತ್ತರಾಗಿರುವ 67ರ ಹರೆಯದ ಶಿವಲಿಂಗಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯಪೀಠ ಮಂಗಳವಾರ ಈ ಆದೇಶ ನೀಡಿದೆ.
2003ರಲ್ಲಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂಪಾಯಿಗಳನ್ನು ಹಿಂದಿರುಗಿಸುವಂತೆ ಕರ್ನಾಟಕ ಹೈಕೋರ್ಟ್ ಲೋಕಾಯುಕ್ತ ಪೊಲೀಸರ ವಿಶೇಷ ನ್ಯಾಯಾಲಯಕ್ಕೆ ಅರ್ಜಿಯ ವಿಚಾರಣೆ ವೇಳೆ ನಿರ್ದೇಶನ ನೀಡಿದೆ.

ಶಿವಲಿಂಗಮೂರ್ತಿಯ ಖುಲಾಸೆಯ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಜಾಗೊಳಿಸಿದೆ.
ಅಲ್ಲದೇ, ಆದಾಯದ ಮೂಲಕ್ಕೆ ಮೀರಿದ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರು ಅರ್ಜಿದಾರರ ವಿರುದ್ಧ 12.15 ಲಕ್ಷ ರೂ. ಬಿಡುಗಡೆ ಮಾಡಬೇಕಿದೆ ಎಂದು ಹೇಳಿದೆ. ಈ ಮೊತ್ತವು 7 ಲಕ್ಷ ರೂ. ಬೇಡಿಕೆ ಮತ್ತು ಲಂಚ ಸ್ವೀಕಾರದ ಪ್ರಕರಣಕ್ಕಿಂತ ಭಿನ್ನವಾಗಿತ್ತು.
2003ರಲ್ಲಿ ನಡೆದ ಐಟಿಐ ಪರೀಕ್ಷೆಯ ವೇಳೆ ಅವ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಅರ್ಜಿದಾರರು, ಅಂದಿನ ಇಲಾಖೆಯ ನಿರ್ದೇಶಕರು ಸೇರಿ ಕೆಲವು ವ್ಯಕ್ತಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಆದಾಗ್ಯೂ, 2018ರಲ್ಲಿ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತು, ಆದರೆ ಅವರ ಮನೆಯಿಂದ ವಶಪಡಿಸಿಕೊಂಡ ಹಣವನ್ನು ಬಿಡುಗಡೆ ಮಾಡಲು ಆದೇಶವನ್ನು ನೀಡಿರಲಿಲ್ಲ.
ಅರ್ಜಿದಾರರ ಕಚೇರಿ ಆವರಣದಲ್ಲಿ ಆರೋಪಿ ಅಧಿಕಾರಿಗಳ ಪರವಾಗಿ ಲಂಚ ವಸೂಲಿ ಮಾಡುತ್ತಿದ್ದ ಇಬ್ಬರು ಖಾಸಗಿ ವ್ಯಕ್ತಿಗಳಿಂದ ವಶಪಡಿಸಿಕೊಂಡ 7 ಲಕ್ಷ ರೂ. ಹೆಚ್ಚುವರಿಯಾಗಿ ವಶಪಡಿಸಿಕೊಳ್ಳಲಾಗಿದೆ.
ಬಹುಪಾಲು ಸಾಕ್ಷಿಗಳು ಪ್ರತಿಕೂಲವಾಗಿ ತಿರುಗಿ ಬಿದ್ದಿದ್ದರಿಂದ ಮತ್ತು ಸಾಕಷ್ಟು ಸಾಕ್ಷ್ಯಾಧಾರಗಳು ಸಿಗದ ಕಾರಣ ವಿಶೇಷ ನ್ಯಾಯಾಲಯವು ಅರ್ಜಿದಾರರನ್ನು ಖುಲಾಸೆಗೊಳಿಸಿತ್ತು.












Click it and Unblock the Notifications