ಹೊಸದಾಗಿ ಕನಿಷ್ಠ ವೇತನ ನಿಗದಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಅಕ್ಟೋಬರ್ 08; ಕನಿಷ್ಠ ವೇತನ ಕುರಿತಂತೆ ರಾಜ್ಯ ಸರ್ಕಾರ ಕಳೆದ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿದೆ. ಅಲ್ಲದೆ, ಸುಪ್ರೀಂಕೋರ್ಟ್ ರೋಪ್ಟಾ ಕೋಸ್ ಪ್ರಕರಣದಲ್ಲಿ ತಿಳಿಸಿರುವ ಮಾರ್ಗಸೂಚಿಗಳ ಅನ್ವಯದಂತೆ ಮರು ಲೆಕ್ಕಾಚಾರ ಮಾಡಿ ಹೊಸದಾಗಿ ನಿಗದಿ ಪಡಿಸುವಂತೆ ಸರ್ಕಾರಕ್ಕೆ ನಿರ್ದೆಶನ ನೀಡಿದೆ. ಈ ಆದೇಶದಿಂದ ರಾಜ್ಯದಲ್ಲಿನ ಅಸಂಘಟಿತ ವಲಯದ ಕೋಟ್ಯಾಂತರ ಕಾರ್ಮಿಕರ ವೇತನ ಹೆಚ್ಚಳವಾಗಲಿದೆ.

ರಾಜ್ಯ ಸರ್ಕಾರ 2022ರ ಜೂನ್ 6ರಲ್ಲಿ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಇಂಡಿಯನ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಯುಟಿಯುಸಿ) ಮತ್ತು ಎಂಜಿನಿಯರಿಂಗ್ ಅಂಡ್ ಜನರಲ್ ವರ್ಕರ್ಸ್ ಯೂನಿಯನ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಮುಂದಿನ ಎರಡು ತಿಂಗಳಲ್ಲಿ ವೇತನ ಪರಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದೆ.

minimum-wages-karnataka-high-court-order

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಕಾರ್ಮಿಕ ಇಲಾಖೆ ಕನಿಷ್ಟ ವೇತನ ನಿಗದಿ ಮಾಡುವುದಕ್ಕೆ ಮಾತ್ರ ಸಮೀಕ್ಷೆ ನಡೆಸುವುದು ಕಡ್ಡಾಯವಾಗಿದೆ. ಆದರೆ, ಪರಿಷ್ಕರಣೆಗೆ ಈ ಸಮೀಕ್ಷೆ ಅಗತ್ಯವಿಲ್ಲ ಎಂದು ವಾದಿಸಿತ್ತು. ಈ ವಾದವನ್ನು ತಳ್ಳಿಹಾಕಿರುವ ಹೈಕೋರ್ಟ್, ಮುಂದಿನ ಎರಡು ತಿಂಗಳಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಪರಿಷ್ಕೃತ ವೇತನ ನಿಗದಿ ಪಡಿಸಬೇಕು ಎಂದು ಸೂಚನೆ ನೀಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ರಾಜ್ಯ ಸರ್ಕಾರ 2022ರ ಜೂನ್ 25ರಂದು ಸುಮಾರು 34 ವಲಯಗಳ ಅಸಂಘಟಿತ ಕಾರ್ಮಿಕ ವಲಯಕ್ಕೆ ಶೇ.5 ರಿಂದ ಶೇ.10ರೆಗೂ ವೇತನ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿತ್ತು. ಆದರೆ, ಈ ಅಧಿಸೂಚನೆ ಹೊರಡಿಸುವುದಕ್ಕೂ ಮುನ್ನ ಸುಪ್ರೀಂಕೋರ್ಟ್ ಯಾವುದೇ ನಿಯಮಗಳನ್ನು ಅನುಸರಿಸಿಲ್ಲ.

ಅಲ್ಲದೆ, ಕಾರ್ಮಿಕ ಇಲಾಖೆಗಳ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಆದ ಕಾರಣ ಅಧಿಸೂಚನೆ ರದ್ದುಪಡಿಸಬೇಕು. ಅಲ್ಲದೆ, ಸುಪ್ರೀಂಕೋರ್ಟ್ 1992ರಲ್ಲಿ ರೋಪ್ಟಾ ಕೋಸ್ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಕನಿಷ್ಟ ವೇತನವನ್ನು ನಿಗದಿ ಪಡಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ರಾಜ್ಯದಲ್ಲಿ 105 ವಲಯಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ಕನಿಷ್ಟ ವೇತನ ಅನ್ವಯವಾಗಲಿದೆ. ಕನಿಷ್ಟ ವೇತನವನ್ನು ಪ್ರತಿ ಐದು ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡಬೇಕಾಗಿದೆ. ಅಲ್ಲದೆ, ರಾಜ್ಯದಲ್ಲಿ ಸರ್ಕಾರ 16 ಕೇಂದ್ರಗಳಲ್ಲಿ ಅಗತ್ಯ ವಸ್ತುಗಳ ಮೌಲ್ಯಗಳ ಸಂಬಂಧ ಪರಿಗಣಿಸಿರುವುದಾಗಿ ಹೇಳಲಾಗಿದೆ. ಆದರೆ, ವೇತನ ಪರಿಷ್ಕರಣೆ ಮಾಡುವುದಕ್ಕೂ ಮುನ್ನ ಕಾರ್ಮಿಕ ಇಲಾಖೆ ಸಮೀಕ್ಷೆ ನಡೆಸಿರಲಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+