ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆ: ಏಪ್ರಿಲ್ 6 ರ ವರೆಗೆ ಹೈಕೋರ್ಟ್ ತಡೆಯಾಜ್ಞೆ- ಮುಂದೆ ಕಾದಿದೆಯಾ ಸಂಕಷ್ಟ?
ಬೆಂಗಳೂರು, ಮಾರ್ಚ್ 01: ಸಿಬಿಐ ತನಿಖೆ ನಡೆಸುತ್ತಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರ ವರೆಗೆ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಏಪ್ರಿಲ್ 6ರ ವರೆಗೆ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿತು.
ರಾಜ್ಯ ಸರ್ಕಾರವು ತನಿಖೆಗೆ ಒಪ್ಪಿಗೆ ನೀಡಿದ ನಂತರ ಸಿಬಿಐ 2020 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.
ಶಿವಕುಮಾರ್ ವಿರುದ್ಧದ ವಿಚಾರಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಅದರ ತೆರವು ಕೋರಿ ಸಿಬಿಐ ಅರ್ಜಿ ಸಲ್ಲಿಸಿದೆ. ಅದನ್ನು ಪರಿಗಣಿಸಬೇಕು ಎಂದು ಶುಕ್ರವಾರದ ವಿಚಾರಣೆ ವೇಳೆ ಸಿಬಿಐ ಪರ ವಕೀಲರು ತಿಳಿಸಿದರು.
ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿರುವುದರಿಂದ ಶಿವಕುಮಾರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಸರ್ಕಾರ ಅನುಮತಿ ನೀಡಿದ್ದರ ವಿರುದ್ಧ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ಬೇಕು ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಸರ್ಕಾರಿ ವಕೀಲರು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದರು.

ಆದಾಗ್ಯೂ, ಸಿಬಿಐ ಆರಂಭಿಕ ವಿಚಾರಣೆಗೆ ಸಮಯ ನೀಡುವಂತೆ ಸರ್ಕಾರವು ಹೆಚ್ಚಿನ ಸಮಯವನ್ನು ಕೋರುತ್ತಿದೆ ಎಂದು ನ್ಯಾಯಾಲಯ ಗಮನಸೆಳೆದಿದೆ. ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಲಾಗಿದ್ದು, ಅಷ್ಟರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಹಣ ಎಸೆದ ಪ್ರಕರಣ: ಡಿಕೆಶಿ ವಿರುದ್ಧ ದೂರು ದಾಖಲು
ಮಂಡ್ಯ ತಾಲೂಕಿನ ಬೇವಿನಹಳ್ಳಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರ‍್ಯಾಲಿ ವೇಳೆ ಜನರತ್ತ ಹಣ ಎಸೆದಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ನಡೆದ 'ಪ್ರಜಾಧ್ವನಿ ಯಾತ್ರೆ'ಯಲ್ಲಿ ಡಿ ಕೆ ಶಿವಕುಮಾರ್ ಭಾಗವಹಿಸಿದ್ದರು. ತಾಲೂಕಿನ ಕ್ಯಾತುಂಗೆರೆಯಿಂದ ಪಥಸಂಚಲನ ಆರಂಭವಾಯಿತು. ರ್ಯಾಲಿ ಬೇವಿನಹಳ್ಳಿ ತಲುಪಿದಾಗ ಸಂಗೀತ ತಂಡದ ಕೆಲವರು ವಾಹನದ ಬಳಿ ಬಂದು ಹಣ ಕೇಳಿದರು.
ಶಿವಕುಮಾರ್ ತಮ್ಮ ಜೇಬಿನಿಂದ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಅವರಿಗೆ ನೀಡಲು ಯತ್ನಿಸಿದರು. ಆದರೆ ಅವರು ವಾಹನದ ಮೇಲೆ ನಿಂತಿದ್ದರಿಂದ ಅವರನ್ನು ತಲುಪಲು ಸಾಧ್ಯವಾಗಲಿಲ್ಲ. ಆದ್ದರಿಂದ, ಅವರು ಕಲಾವಿದರು ಮತ್ತು ಪ್ರೇಕ್ಷಕರ ಕಡೆಗೆ ನೋಟುಗಳು ಎಸೆದರು.
ಬುಧವಾರ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಂದಿನ ತಿಂಗಳು ಕರ್ನಾಕದ ವಿಧಾಸನಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿವೆ. ಮೇ 10 ರಂದು ಚುನಾವಣೆ ನಡೆಯಲಿದೆ. ಇದಾದ ಮೂರು ದಿನಗಳ ಬಳಿಕ ಫಲಿತಾಂಶ ಹೊರಬರಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದು, ಡಿಕೆ ಶಿವಕುಮಾರ್ ಅವರು ಕನಕಪುರದಿಂದ ಸ್ಪರ್ಧಿಸಲಿದ್ದಾರೆ. ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಡಿಸಿಎಂ ಜಿ ಪರಮೇಶ್ವರ್ ಅವರು ಕೊರಟಗೆರೆಯಿಂದ ಸ್ಪರ್ಧಿಸಲಿದ್ದಾರೆ.












Click it and Unblock the Notifications