ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಕೃತಕಾಮಿ ಉಮೇಶ್ ರೆಡ್ಡಿ ಗಲ್ಲುಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ

By Mahesh
|
Google Oneindia Kannada News

ಬೆಂಗಳೂರು, ಅಕ್ಟೋಬರ್ 20: ಸರಣಿ ಹಂತಕ, ಅತ್ಯಾಚಾರಿ, ವಿಕೃತಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬೆಳಗ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಉಮೇಶ್ ರೆಡ್ಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ. ಮಧ್ಯಂತರ ತಡೆಯಾಜ್ಞೆ ಕುರಿತಂತೆ ಆಕ್ಷೇಪಣೆ ಇದ್ದರೆ 10 ದಿನದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸಲು ಸಿದ್ಧತೆ ನಡೆದಿದೆ. ಒಟ್ಟು 18 ವರ್ಷ ಶಿಕ್ಷೆ ಅದರಲ್ಲಿ 10 ವರ್ಷ ಏಕಾಂತ ಸೆರೆಮನೆವಾಸ ಅನುಭವಿಸಿದ್ದೇನೆ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ರಾಷ್ಟ್ರಪತಿಗಳ ಕ್ಷಮಾದಾನ ವಿಳಂಬವಾದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟಿನಿಂದ ಗಲ್ಲು ಶಿಕ್ಷೆ ವಿಧಿಸಲಾಗಿದೆ.[ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ]

HC gives interim stay on Serial Killer Umesh Reddy Death Penalty

ಗಲ್ಲು ಶಿಕ್ಷೆಯಿಂದ ಕ್ಷಮಾದಾನ ನೀಡಲು ತಿರಸ್ಕರಿಸಿದ ರಾಜ್ಯ ಗೃಹ ಇಲಾಖೆ, ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಉಮೇಶ್ ರೆಡ್ಡಿ ಮನವಿ ಮಾಡಿದ್ದಾನೆ. ಅರ್ಜಿ ಇತ್ಯರ್ಥವಾಗುವವರೆಗೆ ಗಲ್ಲು ವಿಧಿಸುವುದನ್ನು ತಡೆಹಿಡಿಯಬೇಕು ಎಂದು ಉಮೇಶ್ ರೆಡ್ಡಿ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಕೇಳಿಕೊಂಡರು. ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖ್ಜಿ ಮತ್ತು ನ್ಯಾ.ಆರ್.ಬಿ.ಬೂದಿಹಾಳ್ ಅವರಿದ್ದ ಪೀಠದ ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ತಡೆಯಾಜ್ಞೆ ನೀಡಿದೆ.[ಸರಣಿ ಹಂತಕ, ಕಾಮುಕ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆ ಭೀತಿ]

ವಿಕೃತಕಾಮಿ ಹಾಗೂ ಸರಣಿ ಹಂತಕ ಉಮೇಶ ರೆಡ್ಡಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಅಕ್ಟೋಬರ್ 03) ಎತ್ತಿ ಹಿಡಿದಿದೆ. ಸುಮಾರು 12 ವರ್ಷಗಳ ಬಳಿಕ ಸುಪ್ರೀಂಕೋರ್ಟ್‌ನಿಂದ ಮಂಗಳವಾರ ಮಹತ್ವದ ಆದೇಶ 2011ರಲ್ಲಿ ಹೊರಬಿದ್ದಿತ್ತು

ಅತ್ಯಾಚಾರ, ಕೊಲೆ, ಚಿನ್ನಾಭರಣ ಕಳವು ಸೇರಿದಂತೆ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ಮಾಜಿ ಕಾನ್ಸ್ ಟೇಬಲ್ ಉಮೇಶ್‌ ರೆಡ್ಡಿ ವಿರುದ್ಧ 23 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.(ಒನ್ ಇಂಡಿಯಾ ಸುದ್ದಿ)

English summary
Karnataka high court today(October 20) gives interim stay on execution of Serial Killer Umesh Reddy's Death Penalty.Serial rapist and murderer Umesh Reddy alias B.A. Umesh is seeking direction for commutation of death sentence to life imprisonment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X