ಪೋಸ್ಕೋ ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಜಾಮೀನು

ಬೆಂಗಳೂರು, ಜೂನ್ 18: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿ) ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ನೀಡಲಾಗಿದೆ. ಇದು ಕರ್ನಾಟಕ ಹೈಕೋರ್ಟ್‌ ನೀಡಿರುವ ಅಪರೂಪದ ಆದೇಶವಾಗಿದೆ. ಮಾನವೀಯತೆಯ ದೃಷ್ಟಿಯಲ್ಲಿ ಇದು ಅತ್ಯಂತ ಸಮಂಜಸ ಎಂದು ಹೇಳಲಾಗಿದೆ.

ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಸದ್ಯ 18 ವರ್ಷ. ಈ ಹಿಂದೆ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದು ಮಗುವಿಗೆ ತಿಳಿದಿಲ್ಲ. ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಿಸಬೇಕಿದೆ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ಅವಮಾನಕ್ಕೆ ಗುರಿಯಾಗಬಾರದು ಎಂದು ಭಾವಿಸಿದ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ.

HC Grants Bail To Posco Accused To Marry Victim

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿಯಾದ ಮೈಸೂರಿನ ಯುವಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಸಂತ್ರಸ್ತೆಯನ್ನು ಮದುವೆಯಾಗಲು 2024ರ ಜೂನ್ 17ರಿಂದ ಅನ್ವಯವಾಗುವಂತೆ ಜುಲೈ 3ರವರೆಗೆ ಆ ಯುವಕನನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.

ಹೈಕೋರ್ಟ ಆದೇಶವೇನು?: ಸಂತ್ರಸ್ತೆಯನ್ನು ಮದುವೆಯಾಗಿ ಜುಲೈ 3ರ ಸಂಜೆ ಹಿಂದಿರುಗಬೇಕು. ಜುಲೈ 4ರಂದು ವಿವಾಹ ನೋಂದಣಿ ಪತ್ರವನ್ನು ಕೋರ್ಟ್‌ಗೆ ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ ಸಮಯದಲ್ಲಿ ಆತ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ವಾರಕ್ಕೊಮ್ಮೆ ಹಾಜರಾಗಬೇಕು. ಒಂದು ವೇಳೆ ಮಧ್ಯಂತರ ಜಾಮೀನು ಮಂಜೂರಾತಿಯ ಉದ್ದೇಶ ಉಲ್ಲಂಘಿಸಿದರೆ, ಆ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ನಿರ್ದೇಶಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ.

ನ್ಯಾಯಪೀಠ ಎಲ್ಲಾ ಅಂಶಗಳು ಪರಿಗಣಿಸಿದ ಬಳಿಕ ಆರೋಪಿ ಮತ್ತು ಸಂತ್ರಸ್ತೆಯೇ ಮಗುವಿನ ಜೈವಿಕ ತಂದೆ-ತಾಯಿ ಎಂಬುದು ಮಗುವಿನ ಡಿಎನ್‌ಎ ವರದಿ ಸ್ಪಷ್ಟಪಡಿಸುತ್ತದೆ. ಮಗುವನ್ನು ಸಂತ್ರಸ್ತೆ ತಾಯಿ ಪೋಷಣೆ ಮಾಡಬೇಕಿದೆ. ಸಣ್ಣ ಮಗುವಿಗೆ ಈ ಹಿಂದೆ ಏನೆಲ್ಲಾ ಘಟನೆ ನಡೆದಿದೆ ಎಂಬುದು ಗೊತ್ತಿಲ್ಲ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯ ಅವಮಾನ ಅನುಭವಿಸಬಾರದು. ತಾಯಿ ಮತ್ತು ಮಗುವಿನ ಹಿತಾಸಕ್ತಿಯನ್ನು ರಕ್ಷಣೆ ಮಾಡಬೇಕಿದೆ. ಅದರಂತೆ ಆರೋಪಿಗೆ ಮಧ್ಯಂತರ ಜಾಮೀನು ನೀಡಿ ಸಂತ್ರಸ್ತೆಯನ್ನು ಮದುವೆಯಾಗಲು ಅನುಮತಿ ನೀಡಲಾಗುತ್ತಿದೆ ಎಂದ ಆದೇಶಿಸಿದೆ

ಪ್ರಕರಣದ ಹಿನ್ನೆಲೆ: 23 ವರ್ಷದ ಆತ ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. 2023ರ ಆರಂಭದಲ್ಲಿ ಒಂದು ದಿನ ಸಂತ್ರಸ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಆರೋಪಿ ಮೇಲಿದೆ.

ಆ ಸಂದರ್ಭದಲ್ಲಿ ಶಾಲೆಯಲ್ಲಿ ಓದುತ್ತಿದ್ದ ಆಕೆಗೆ 16 ವರ್ಷ 9 ತಿಂಗಳು ಆಗಿತ್ತು. ಇದರಿಂದ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪೋಕ್ಸೋ ಕಾಯ್ದೆಯಡಿ ಆತನ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ದೂರು ದಾಖಲಾದ ಮರು ದಿನದಿಂದ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಅರ್ಜಿ ಇತ್ತೀಚೆಗೆ ವಿಚಾರಣೆಗೆ ಬಂದಾಗ ರವಿ ಮತ್ತು ಸಂತ್ರಸ್ತೆಯ ಪರ ವಕೀಲರು ಹಾಜರಾಗಿ, ಅರ್ಜಿದಾರರು ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಮಧ್ಯೆ ಪೋಷಕರು ಬಂದಿದ್ದಾರೆ. ಲೈಂಗಿಕ ಸಂಪರ್ಕದಿಂದ ಅವರಿಗೆ ಮಗು ಜನಿಸಿದ್ದು, ಅದಕ್ಕೆ ಸದ್ಯ ಒಂದು ವರ್ಷ.

ರವಿ ಬಂಧನಕ್ಕೆ ಒಳಗಾಗುವ ದಿನಕ್ಕೆ ಸಂತ್ರಸ್ತೆಗೆ 18 ವರ್ಷ ತುಂಬಿರಲಿಲ್ಲ. ಆಕೆಗೆ ಸದ್ಯ 18 ವರ್ಷ ತುಂಬಿದೆ. ಅವರಿಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಅದಕ್ಕೆ ಪೋಷಕರೂ ಒಪ್ಪಿಗೆಯಿದೆ. ಮದುವೆಯಾಗುವುದರಿಂದ ಸಂತ್ರಸ್ತೆ ಮತ್ತು ಮಗು ದಿಕ್ಕಿಲ್ಲದಂತಾಗುವುದು ತಪ್ಪಲಿದೆ. ಈ ರಾಜಿ ಸಂಧಾನ ಪರಿಗಣಿಸಿ ಇಡೀ ಪ್ರಕರಣವನ್ನು ಮುಕ್ತಾಯಗೊಳಿಸಬೇಕು ಎಂದು ಕೋರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+