ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರ್ಮಿಕ ಸ್ಥಳಗಳಲ್ಲಿ ಶಬ್ದಮಾಲಿನ್ಯ ತಡೆಯಲು ಹೈಕೋರ್ಟ್ ಆದೇಶ

|
Google Oneindia Kannada News

ಬೆಂಗಳೂರು, ಫೆಬ್ರವರಿ 9: ಧಾರ್ಮಿಕ ಸ್ಥಳಗಳಲ್ಲಿ ಶಬ್ದಮಾಲಿನ್ಯ ತಡೆಯಲು ಸರ್ಕಾರದಿಂದ ಯಾವುದೇ ನಿರ್ದೇಶನಗಳಿಲ್ಲ, ಅಕ್ರಮವಾಗಿ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ. ಈ ಬಗ್ಗೆ ನಿಯಂತ್ರಣ ಅಗತ್ಯ ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಧಾರ್ಮಿಕ ಸ್ಥಳಗಳಲ್ಲಿ ಶಬ್ದಮಾಲಿನ್ಯ ತಡೆಯಲು ಸೂಕ್ತ ಮಾರ್ಗಸೂಚಿ, ನಿರ್ದೇಶನಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ.

"ಧಾರ್ಮಿಕ ಸ್ಥಳಗಳಲ್ಲಿ ಶಬ್ದ ಮಾಲಿನ್ಯ ತಡೆಯುವ ಬಗ್ಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಲಿ, ಇದು ರಾಜ್ಯದೆಲ್ಲೆಡೆ ಅನ್ವಯವಾಗಲಿ" ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎಸ್ ಎಸ್ ಮಗದುಮ್‌ ಅವರಿದ್ದ ವಿಭಾಗೀಯ ಪೀಠವು ಅಭಿಪ್ರಾಯಪಟ್ಟಿದೆ. ವಿಚಾರಣೆ ವೇಳೆ ಧಾರ್ಮಿಕ ಸ್ಥಳಗಳ ಶಬ್ದ ಮಾಪನ ಮಾಡಲು ಸರ್ಕಾರದ ಬಳಿ ಡೆಸಿಬಲ್ ಮೀಟರ್ ಗಳಿಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆ: ಹೈಕೋರ್ಟ್ ಮಹತ್ವದ ಸೂಚನೆಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆ: ಹೈಕೋರ್ಟ್ ಮಹತ್ವದ ಸೂಚನೆ

ಧಾರ್ಮಿಕ ಸ್ಥಳಗಳಲ್ಲಿ ಆಂಪ್ಲಿಫೈಯರ್‌ಗಳು ಮತ್ತು ಧ್ವನಿವರ್ಧಕಗಳನ್ನು ಅಕ್ರಮವಾಗಿ ಬಳಸಲಾಗುತ್ತಿದೆ. ಇದ್ 2000ರ ಶಬ್ದ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆಯಾಗಿದೆ,

HC instructs Govt to curb noise pollution in religious places

ಲೌಡ್ ಸ್ಪೀಕರ್‌ಗಳು ಅಥವಾ ಸಾರ್ವಜನಿಕ ಭಾಷಣಗಳ ಸದ್ದು ಕಾನೂನಿನ ಪ್ರಕಾರ ಪ್ರದೇಶವೊಂದರಲ್ಲಿ 10 ಡಿಬಿ (ಎ) ಸಾಮಾನ್ಯ ಮಾನದಂಡದ ಶಬ್ಧ ಮಟ್ಟ ಮೀರಬಾರದು ಎಂಬ ನಿಯಮ ಜಾರಿಯಾಗಬೇಕಿದೆ. ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮೇಲ್ಕಂಡ ಅಭಿಪ್ರಾಯ ವ್ಯಕ್ತಪಡಿಸಿದೆ.

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಕ್ಕೆ ಶಿವಸೇನಾ ಆಗ್ರಹಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಕ್ಕೆ ಶಿವಸೇನಾ ಆಗ್ರಹ

Recommended Video

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಉದಯ-ವಿರೂಪಾಕ್ಷೇಶ್ವರನ ದರ್ಶನ ಪಡೆದ ಆನಂದ್ ಸಿಂಗ್ | Oneindia Kannada

ಧಾರ್ಮಿಕ ಸ್ಥಳಗಳಲ್ಲಿ ಆಂಪ್ಲಿಫೈಯರ್ ಮತ್ತು ಧ್ವನಿವರ್ಧಕಗಳನ್ನು ಅಕ್ರಮವಾಗಿ ಬಳಸುವುದರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ನಿರ್ದೇಶನ ನೀಡುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಿಲ್ಲವೇಕೆ ಎಂದು ವರದಿ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಫೆಬ್ರವರಿ 17 ಕ್ಕೆ ಮುಂದೂಡಲಾಗಿದೆ.

English summary
Karnataka High Court instructed Govt to issue directions to curb noise pollution in religious places across state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X