ಹೈಕೋರ್ಟ್ : 32 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ನ.11 : ಕರ್ನಾಟಕ ಹೈಕೋರ್ಟ್ ತನ್ನ ಅಧೀನ ನ್ಯಾಯಾಲಯಗಳಲ್ಲಿ 32 ತಂತ್ರಾಶ ತಂತ್ರಜ್ಞರ (Software Technician) ಹುದ್ದೆಗಳ ಭರ್ತಿಯಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 20.

ತಂತ್ರಾಂಶ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ವೆಬ್‌ಸೈಟ್‌ http://karnatakajudiciary.kar.nic.in/recruitment.asp ನಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದಾಗಿದೆ. [32 ಹುದ್ದೆಗಳಿಗೆ ಅರ್ಜಿ ಆಹ್ವಾನ]

high court

ಅರ್ಜಿಯನ್ನು ಸಲ್ಲಿಸಲು 20ನೇ ನವೆಂಬರ್ 2014 ರಾತ್ರಿ 11.59 ರವರೆಗೆ ಕಾಲಾವಕಾಶವಿದೆ. ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1, ಅಂಗವಿಕಲ, ಹೊರತಾಗಿ) ರೂ. 500 ಅನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯ ಅಥವಾ ಆನ್‌ಲೈನ್ ಮೂಲಕ ಸಂದಾಯ ಮಾಡಬಹುದು. [ಅರ್ಜಿ ಇಲ್ಲಿ ದೊರೆಯುತ್ತದೆ]

ತಾರಸಿ ತರಬೇತಿ ಶಿಬಿರ : ಬೆಂಗಳೂರಿನ ಹುಳಿಮಾವಿನಲ್ಲಿರುವ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ನ.21ರಂದು ಒಂದು ದಿನದ ಸಾವಯವ ತಾರಸಿ/ ಕೈತೋಟ ಅಭಿವೃದ್ಧಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ/ರೈತರಿಗೆ/ಸಾರ್ವಜನಿಕರಿಗೆ/ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಉಳ್ಳವರು ರೂ. 300ಗಳನ್ನು ಪಾವತಿಸಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹುಳಿಮಾವು, ಬೆಂಗಳೂರು ಅವರ ಕಚೇರಿಯಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 26582775, 26584904ಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+