ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಮೆಡ್ ಕೆ ವಿರುದ್ಧ ಅರ್ಜಿ: ಸರ್ಕಾರಕ್ಕೆ ನೋಟಿಸ್ ಜಾರಿ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.12. ಕಾಮೆಡ್‌-ಕೆ ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ಮರುಪಾವತಿ ನೀತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದೆ.

ನ್ಯಾಯವಾದಿ ಎನ್‌.ಪಿ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸದಸ್ಯ ಕಾರ್ಯದರ್ಶಿ, ಕಾಮೆಡ್-ಕೆ (ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ) ಅಧ್ಯಕ್ಷರೂ ಸೇರಿದಂತೆ ಒಟ್ಟು ಎಂಟು ಜನ ಪ್ರತಿವಾದಿಗಳಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

HC issued notice to state government on challening the Comed K seat selection process and fee policy

ಅರ್ಜಿದಾರರ ಪರ ವಕೀಲರು, 'ಮೊದಲ ಸುತ್ತಿನ ಕೌನ್ಸೆಲಿಂಗ್‌ ನಂತರ ವಿದ್ಯಾರ್ಥಿಗಳು ತಮ್ಮ ಸೀಟನ್ನು ಒಪ್ಪಿಸಿದರೆ ಐದು ಪಟ್ಟು ಶುಲ್ಕವನ್ನು ದಂಡವಾಗಿ ಪಾವತಿಸುವ ನೀತಿ ಏಕಪಕ್ಷೀಯವಾಗಿದೆ ಮತ್ತು ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಶೋಷಣೆಗೆ ಒಳಗಾಗಿದ್ದಾರೆ' ಎಂದು ವಾದ ಮಂಡಿಸಿದರು.

1433 ಟ್ರಾನ್ಸ್ ಫಾರ್ಮರ್ ಸ್ಥಳಾಂತರ ಪ್ರಕ್ರಿಯೆ:

ಈ ಮಧ್ಯೆ ಮತ್ತೊಂದು ಪ್ರಕರಣದಲ್ಲಿ ಬೆಸ್ಕಾಂ, ನಗರದ ಪಾದಚಾರಿ ಮಾರ್ಗಗಳ ಮೇಲಿದ್ದ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಈಗಾಗಲೇ 1,155 ಟ್ರಾನ್ಸ್‌ಫಾರ್ಮರ್‌ ಸ್ಥಳಾಂತರ ಮಾಡಲಾಗಿದ್ದು, ಉಳಿದ 1,433 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಫುಟ್‌ಪಾತ್‌ಗಳು ಹಾಗೂ ರಾಜಕಾಲುವೆಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್‌ ಕಮಾಂಡರ್‌ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್‌ ಅರಾಧೆ ಹಾಗೂ

ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು. ಬೆಸ್ಕಾಂ ಪರ ಹಿರಿಯ ವಕೀಲರು, ಫುಟ್‌ಪಾತ್‌ಗಳ ಮೇಲಿರುವ ಅಪಾಯಕಾರಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಬೆಸ್ಕಾಂ ಪರ ಪ್ರಮಾಣಪತ್ರ ಸಲ್ಲಿಸಿದರು.

ನಗರದಲ್ಲಿಪಾದಚಾರಿ ಮಾರ್ಗಗಳ ಮೇಲಿದ್ದ ಒಟ್ಟು 5,784 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಅಥವಾ ಅವುಗಳನ್ನು ನೆಲಮಟ್ಟದಿಂದ ಎತ್ತರಿಸುವ ಅಗತ್ಯವಿತ್ತು. ಈ ಕಾರ್ಯವನ್ನು 2 ಹಂತದಲ್ಲಿಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ3,194 ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಸ ಸ್ಪನ್‌ ಪೋಲ್‌ ರಚನೆಗೆ ಪರಿವರ್ತಿಸಲಾಗಿದೆ. 2 ಟ್ರಾನ್ಸ್‌ಫಾರ್ಮರ್‌ಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಮೊದಲ ಹಂತದ ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಪ್ರಮಾಣಪತ್ರದಲ್ಲಿಹೇಳಲಾಗಿದೆ.

ಎರಡನೇ ಹಂತದಲ್ಲಿ2,588 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲಾಗುತ್ತಿದ್ದು, ಈಗಾಗಲೇ 1,155 ಟ್ರಾನ್ಸ್‌ಫಾರ್ಮರ್‌ಗಳನ್ನು ಎತ್ತರಿಸಲಾಗಿದೆ. ಉಳಿದ 1,433 ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದಕ್ಕಾಗಿ ಟೆಂಡರ್‌ ಕರೆಯಲಾಗಿದೆ. 2023ರ ಸೆಪ್ಟಂಬರ್‌ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಪ್ರಮಾಣಪತ್ರದಲ್ಲಿವಿವರಿಸಲಾಗಿದೆ.

ಅದನ್ನು ದಾಖಲಿಸಿಕೊಂಡ ಹೈಕೋರ್ಟ್‌, ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಕಾರ್ಯ ಮುಂದುವರಿಸಿ, ಮುಂದಿನ ವಿಚಾರಣೆ ವೇಳೆ ಪ್ರಗತಿ ವರದಿ ಸಲ್ಲಿಸುವಂತೆ ಬೆಸ್ಕಾಂ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜ.9ಕ್ಕೆ ಮುಂದೂಡಿತು.

English summary
The High Court has issued an emergency notice to the state government regarding the petition challenging the admission process and fee refund policy of COMED-K.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X