ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

5 ಜಿಲ್ಲಾ ಪಂಚಾಯಿತಿಗಳಿಗೆ ಫೆ.20ರಂದು ಮತದಾನ

|
Google Oneindia Kannada News

ಕಲಬುರಗಿ, ಜನವರಿ 23 : ಐದು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಚುನಾವಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಶುಕ್ರವಾರ ತೆರವುಗೊಳಿಸಿದೆ. ಈ ಜಿಲ್ಲೆಗಳಲ್ಲಿ ಫೆ.20ರಂದು ಮತದಾನ ನಡೆಯಲಿದೆ.

ರಾಜ್ಯ ಚುನಾವಣಾ ಆಯೋಗ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯ ವೇಳಾಪಟ್ಟಿಯನ್ನು ಜನವರಿ 18ರಂದು ಪ್ರಕಟಿಸಿತ್ತು. ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. [ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿವರ]

zilla panchayat

ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಈ 5 ಜಿಲ್ಲೆಗಳ ಚುನಾವಣೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಆದ್ದರಿಂದ ಫೆ. 20ರಂದು ಐದು ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು ಹೇಳಿದ್ದಾರೆ. [ನೀತಿ ಸಂಹಿತೆ ಉಲ್ಲಂಘಿಸಿದ ಮೈಸೂರು ಜಿ.ಪಂ ಅಧ್ಯಕ್ಷೆ]

ಜಿಲ್ಲಾ ಪಂಚಾಯಿತಿಗಳ ಒಟ್ಟು 922 ಕ್ಷೇತ್ರಗಳಿಗೆ ಮತ್ತು 175 ತಾಲೂಕು ಪಂಚಾಯಿತಿಗಳ 3,884 ಕ್ಷೇತ್ರಗಳಿಗೆ ಫೆಬ್ರವರಿ 13 ಮತ್ತು ಫೆ.20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜನವರಿ 18ರಂದು ವೇಳಾಪಟ್ಟಿ ಪ್ರಕಟಗೊಂಡಿದ್ದು, ನೀತಿ ಸಂಹಿತೆ ಅಂದಿನಿಂದಲೇ ಜಾರಿಗೆ ಬಂದಿದೆ.

ಚುನಾವಣೆ ವಿವರ : ಫೆಬ್ರವರಿ 13ರಂದು ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

ಫೆಬ್ರವರಿ 20ರಂದು 2ನೇ ಹಂತದಲ್ಲಿ ವಿಜಯಪುರ, ಬೀದರ್, ರಾಯಚೂರು, ಕಲಬುರಗಿ, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ,ಯಾದಗಿರಿ, ಕೊಪ್ಪಳ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

English summary
Karnataka Election Commissioner P.N.Srinivasachari said, Kalaburagi bench of the Karnataka high court on Friday lift the stay of Zilla panchayat election in 5 districts. Election will be held on February 20, 2016. High court stayed FOR Bidar, Kalaburagi, Vijayapura, Raichur and Yadgir ZP election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X