ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ ಎಂದ ಹೈಕೋರ್ಟ್‌

By Nayana
|
Google Oneindia Kannada News

ಬೆಂಗಳೂರು, ಮೇ 18: ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯ ಎಂದು ಹೈಕೋರ್ಟ್ ಹೇಳಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94.24ರಷ್ಟು ಅಂಕ ಗಳಿಸಿರುವ ವಿದ್ಯಾರ್ಥಿ ಡಿ. ಆದರ್ಶ ಭಟ್ ಎಂಬುವವರು ಈ ಬಗ್ಗೆ ಹೈಕೋರ್ಟ್ ಮೊರೆ ಹೋಗಿದ್ದರು.

ನ್ಯಾ. ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ರಜಾಕಾಲದ ನ್ಯಾಯಪೀಠ ರಾಜ್ಯ ಸರ್ಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನೋಟಿಸ್ ನೀಡಿದ ನಂತರ ಈ ಆದೇಶ ಹೊರಡಿಸಿದೆ. ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪದವಿಪೂರ್ವ ಪರೀಕ್ಷಾ ಮಂಡಳಿ 2018-19 ನೇ ಸಾಲಿನ ಪ್ರವೇಶಕ್ಕೆ ಹೊರಡಿಸಿರುವ ನಿಯಮಾವಳಿಯಲ್ಲಿ, ಪ್ರಥಮ ಪಿಯುಸಿ ಪ್ರವೇಶ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು.

ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ ವಿತರಣೆ ಆರಂಭ: ಮೇ.14ರವರೆಗೆ ವಿತರಣೆ ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ ವಿತರಣೆ ಆರಂಭ: ಮೇ.14ರವರೆಗೆ ವಿತರಣೆ

ಇದನ್ನು ವಿದ್ಯಾರ್ಥಿ ಆದರ್ಶ ಭಟ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆಧಾರ್ ಮಾನ್ಯತೆ ಕುರಿತ ವಿಚಾರ ಇನ್ನೂ ಸುಪ್ರೀಂಕೋರ್ಟ್ ಮುಂದೆ ಬಾಕಿ ಇದೆ. ಎಲ್ಲದಕ್ಕೂ ಆಧಾರ್ ಕಡ್ಡಾಯ ಮಾಡುವಹಾಗಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

HC orders AADHAR is not mandatory for PU admission

ಆದರೂ ಶಿಕ್ಷಣ ಇಲಾಖೆ ಆಧಾರ್ ಕಡ್ಡಾಯ ಮಾಡಿರುವುದು ಕಾನೂನುಬಾಹಿರ ಎಂದು ವಿದ್ಯಾರ್ಥಿ ಪರ ವಕೀಲರು ವಾದಿಸಿದರು. ಎಸ್ಎಸ್ಎಲ್‌ಸಿ ಪರೀಕ್ಷೆಯ ನೋಂದಣಿ ಸಂದರ್ಭದಲ್ಲೂ ಆಧಾರ್ ಕಡ್ಡಾಯ ಪ್ರಶ್ನಿಸಿದ್ದ ಇದೇ ವಿದ್ಯಾರ್ಥಿ ಆಗಲೂ ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪಡೆದಿದ್ದರು.

English summary
High Court has set aside notification of Karnataka Pre University Board which was mandated AADHAR card submission for PU college admissions from the academic year 2018-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X