ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಎರಡನೇ ಮದುವೆ ಕನಸಿಗೆ ತಣ್ಣೀರೆರೆಚಿದ ಹೈಕೋರ್ಟ್
ಬೆಂಗಳೂರು, ಜನವರಿ 7: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಯ ಎರಡನೇ ಮದುವೆ ಕನಸಿಗೆ ಹೈಕೋರ್ಟ್ ತಣ್ಣೀರೆರೆಚಿದೆ. ಎಂ.ಪಿ. ಕುಮಾರಸ್ವಾಮಿ ಮೊದಲನೇ ಪತ್ನಿ ಸವಿತಾ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಪತ್ನಿ ಸವಿತಾ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಕುಮಾರಸ್ವಾಮಿ ಅವರು ಮಾಡಿಕೊಳ್ಳಲಿದ್ದಾರೆನ್ನಲಾದ ಎರಡನೇ ಮದುವೆಗೆ ಬ್ರೇಕ್ ಬಿದ್ದಿದೆ. ಪತ್ನಿ ಸವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಅಲೋಕ್ ಅರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯಪೀಠ ಈ ಆದೇಶ ನೀಡಿದೆ.
ಸವಿತಾ ಪರ ವಕೀಲರು, ಅರ್ಜಿದಾರರಿಗೆ ಪತಿಯಿಂದ ವಿಚ್ಛೇದನಕ್ಕೆ ಪಡೆಯುವ ಇಚ್ಛೆ ಪತ್ನಿಗೆ ಇಲ್ಲ. ಅವರು 2ನೇ ಮದುವೆಯಾಗುವ ಸಾಧ್ಯತೆ ಇದೆ. ಹಾಗಾಗಿ ವಿಚ್ಛೇದನ ಆದೇಶಕ್ಕೆ ತಡೆ ನೀಡಿದೆ ಎಂದರು. ವಾದ ಆಲಿಸಿದ ನ್ಯಾಯಪೀಠ, ಮೈಸೂರು ನಗರದ ಕೌಟುಂಬಿಕ ನ್ಯಾಯಾಲಯ ಕುಮಾರಸ್ವಾಮಿ ದಂಪತಿಗೆ ನೀಡಿದ್ದ ವಿಚ್ಛೇದನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಮೈಸೂರಿನ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ದಂಪತಿಗೆ ವಿಚ್ಛೇದನ ನೀಡಿತ್ತು . ಆದರೆ ಆ ವಿಚ್ಛೇದನ ಆದೇಶ ಪ್ರಶ್ನಿಸಿ ಪತ್ನಿ ಸವಿತಾ ಹೈಕೋರ್ಟ್ ಮೊರೆ ಹೋಗಿದ್ದರು. ಪತಿಯಿಂದ ವಿಚ್ಛೇದನ ಪಡೆಯುವ ಇಚ್ಛೆ ಪತ್ನಿಗೆ ಇಲ್ಲ. ಅವರು 2 ನೇ ಮದುವೆಯಾಗುವ ಸಾಧ್ಯತೆ ಇದೆ. ಹಾಗಾಗಿ ವಿಚ್ಛೇದನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಮಕ್ಕಳ ಆಯೋಗದ ಅಧ್ಯಕ್ಷರ ನೇಮಕ ಪ್ರಶ್ನೆ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ(ಕೆಎಸ್‌ಸಿಪಿಸಿಆರ್) ಅಧ್ಯಕ್ಷರ ಸ್ಥಾನಕ್ಕೆ ಕೆ. ನಾಗಣ್ಣಗೌಡ ಎಂಬುವರನ್ನು ನೇಮಕ ಮಾಡಿರುವ ಆದೇಶ ರದ್ದು ಮಾಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಕೀಲರಾದ ಸುಧಾ ಕಟ್ವಾ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಲೆ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣಗೌಡ ಮತ್ತು ಸದಸ್ಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.
ಅರ್ಜಿದಾರರ ಪರ ವಕೀಲರು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಸ್ಥಾನ ಭರ್ತಿ ಮಾಡುವುದಕ್ಕಾಗಿ ರಾಜ್ಯ ಸರ್ಕಾರ 2022ರ ಫೆಬ್ರವರಿ 2 ರಂದು ಅಧಿಸೂಚನೆ ಹೊರಡಿಸಿತ್ತು. ನಂತರ ಮೇ 9ರಂದು ಅರ್ಹ 10 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಇದಾದ ಬಳಿಕ 2022ರ ಅಕ್ಟೋಬರ್ 21ರಂದು ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರೇ ಇಲ್ಲದ ಕೆ.ನಾಗಣ್ಣಗೌಡ ಎಂಬುವರನ್ನು ನೇಮಕ ಮಾಡಿ ಆದೇಶಿಸಿದೆ.












Click it and Unblock the Notifications