ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಕೇಸ್ ಹೈಕೋರ್ಟ್‌ನಿಂದ ರದ್ದು

ಬೆಂಗಳೂರು, ಆಗಸ್ಟ್‌ 08: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯಲ್ಲಿ ನಡೆದಿದ್ದ ಪ್ರಚಾರದ ವೇಳೆ ಮತದಾರರಿಗೆ ಆಮಿಷ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪದಿಂದ ಅವರು ಮುಕ್ತರಾಗಿದ್ದಾರೆ.

ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಜೆಪಿ ನಡ್ಡಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ನಡ್ಡಾ ಅರ್ಜಿಯನ್ನು ಮಾನ್ಯ ಮಾಡಿ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

jp-nadda-poll-code-violation

ಜೆಪಿ ನಡ್ಡಾ ಪರ ಹಿರಿಯ ವಕೀಲರು ವಾದ ಮಂಡಿಸಿ, "ನಡ್ಡಾ ಅವರ ಭಾಷಣದ ಮೂಲಕ ಮತದಾರರಿಗೆ ಆಮಿಷ ಮತ್ತು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಅದನ್ನು ಋಜುವಾತುಪಡಿಸುವ ಅಂಶಗಳು ದೂರುದಾರರ ಬಳಿ ಇಲ್ಲ. ನಡ್ಡಾ ಅವರ ಭಾಷಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದರ ಬಗ್ಗೆಯೂ ಪುರಾವೆಗಳಿಲ್ಲ" ಎಂದರು.

ಅಲ್ಲದೇ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಅವರಿಂದ ಅನುಮತಿ ಪಡೆದುಕೊಳ್ಳುವಾಗ ಕಾನೂನು ನಿಯಮಗಳನ್ನು ಪಾಲಿಸಿಲ್ಲ. ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ ವಿಚಾರಣಾ ನ್ಯಾಯಾಲಯದ ಕ್ರಮವೂ ದೋಷಪೂರಿತವಾಗಿದೆ ಎಂದು ನಡ್ಡಾ ಪರ ವಕೀಲರು ವಾದಿಸಿದ್ದರು. ಇದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಜೆಪಿ ನಡ್ಡಾ, ಡಬಲ್ ಇಂಜಿನ್ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ ಎಂದು ಹೇಳಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ನಿಮಗೆ ಅಭಿವೃದ್ಧಿ ಬೇಕಾಗಿದ್ದರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು.

ಈ ಸಂಬಂಧ ಚುನಾವಣಾ ಅಧಿಕಾರಿಗಳು ಹರಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ರದ್ದು ಕೋರಿ ಜೆಪಿ ನಡ್ಡಾ ಹೈಕೋರ್ಟ್ ಮೊರೆ ಹೋಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+