ಆರ್‌ಟಿಐ ಕಾಯ್ದೆಯಿಂದ ದೇವಾಲಯಗಳನ್ನು ಹೊರಗಿಡಲು ನಕಾರ
ಬೆಂಗಳೂರು, ಜೂನ್ 13: ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಎಸ್. ಎನ್ ದೀಕ್ಷಿತ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾ. ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಹೈಕೋರ್ಟ್ ಆದೇಶವೇನು?: ಅರ್ಜಿದಾರರು ಅರ್ಚಕರಾಗಿರುವ ದೇವಾಲಯಗಳು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರಗಳಾಗಿವೆ. ಅಲ್ಲದೆ, ಸರ್ಕಾರದ ಸುತ್ತೋಲೆ ಪ್ರಸ್ತಾಪಿಸಿರುವುದು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಬರುವುದಿಲ್ಲ. ಆದ್ದರಿಂದ ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟು ಅರ್ಜಿ ವಜಾಗೊಳಿಸಿದೆ.
ಅಲ್ಲದೆ, ರಾಜ್ಯ ಸರ್ಕಾರ ಅರ್ಜಿದಾರರ ದೇವಾಲಯಗಳಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಒದಗಿಸಲು ಸಿಬ್ಬಂದಿ ನೇಮಿಸಿರುವ ಆದೇಶ ಧಾರ್ಮಿಕ ದತ್ತಿ ಇಲಾಖೆ ಅಧೀನದ ದೇವಾಲಯಗಳಿಗೆ ಆದೇಶಿಸಿರುವ ಸರ್ಕಾರ ಸುತ್ತೋಲೆ ರದ್ದುಪಡಿಲಾಗದು ಎಂದು ಪೀಠ ಅಭಿಪ್ರಾಯ ಪಟ್ಟಿದೆ.
ದೇಗುಲದಲ್ಲಿ ಸಿದ್ದಪಡಿಸುವ ಪ್ರಸಾದಕ್ಕೆ ಎಷ್ಟು ಪ್ರಮಾಣದ ಸಕ್ಕರೆ?, ಎಷ್ಟು ಅಕ್ಕಿ ಬಳಸುತ್ತೀರಿ?, ದಿನಕ್ಕೆ ಎಷ್ಟು ಅರ್ಚನೆ ಮಾಡುತ್ತೀರಿ? ಎಂಬ ಪ್ರಶ್ನೆಗಳ ಮೂಲಕ ಆರ್ ಟಿಐ ಕಾಯಿದೆಯಡಿ ಪ್ರಶ್ನೆಗಳನ್ನು ಕೇಳಿ ಕಿರುಕುಳ ನೀಡುತ್ತಿದ್ದಾರೆ ಎಂದು ಅರ್ಚಕರು ಹೈಕೋರ್ಟ್ ಮೊರೆ ಹೋಗಿದ್ದರು.
ಕಾಯಿದೆದುರ್ಬಳಕೆ: ಅರ್ಜಿದಾರರ ಪರ ವಕೀಲರು, ಪ್ರಸಾದ ಸಿದ್ಧಪಡಿಸುವ ಸಂದರ್ಭದಲ್ಲಿ ಎಷ್ಟು ಪ್ರಮಾಣದ ಸಕ್ಕರೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಎಷ್ಟು ಅಕ್ಕಿ ಬಳಸಲಾಗುತ್ತಿದೆ?, ದಿನಕ್ಕೆ ಎಷ್ಟು ಅರ್ಚನೆಗಳನ್ನು ಮಾಡಲಾಗುತ್ತಿದೆ? ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಆ ಮೂಲಕ ಕೆಲವು ಜನ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ಅರ್ಚಕರಿಗೆ ಪ್ರಾಯೋಗಿಕವಾಗಿ ಹಿಂಸೆ ನೀಡಲಾಗುತ್ತಿದೆ ಎಂದು ಪೀಠಕ್ಕೆ ವಿವರಿಸಿದರು.
ಅಲ್ಲದೆ, ದೇವಾಲಯಗಳಿಗೆ ಎಲ್ಲವನ್ನು ಭಕ್ತಾದಿಗಳು ದಾನ ಮಾಡಲಾಗಿರುತ್ತದೆ. ಸರ್ಕಾರ ಒಂದು ರೂ.ಗಳನ್ನೂ ಪಾವತಿ ಮಾಡಲಾಗುತ್ತಿಲ್ಲ, ಆದರೂ ಮಾಹಿತಿ ಕೇಳುವ ಮೂಲಕ ಹಿಂಸೆ ನೀಡುತ್ತಿದ್ದಾರೆ. ಆದ್ದರಿಂದ ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯಿದೆಯಿಂದ ಹೊರಗಿಡಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ಈ ರೀತಿಯ ಅರ್ಜಿಗಳ ಸಲ್ಲಿಕೆಗೆ ಕಾರಣವೇ ಇಲ್ಲ. ಆದರೂ ಅರ್ಜಿ ಸಲ್ಲಿಕೆಯಾಗಿದೆ. ಈ ರೀತಿಯಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೇಳುವುದು ತಪ್ಪು ಎಂದರೆ ಹೇಗೆ ಎಂದು ಪೀಠಕ್ಕೆ ವಿವರಿಸಿದರು.
ಅರ್ಜಿಯ ಸಾರಾಂಶ: ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಅರ್ಚಕರು, ವೇದ ವಿದ್ವಾಂಸರು, ಪುರೋಹಿತರಿಗೆ ಮಾಹಿತಿ ಹಕ್ಕು ಕಾಯಿದೆಯಡಿ ವೈಯಕ್ತಿಕ ಮಾಹಿತಿ ಕೇಳುವ ಮೂಲಕ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಅಲ್ಲದೆ, ಹಣ ಮತ್ತು ಬೆಲ ಬಾಳುವ ವಸ್ತುಗಳಿಗೆ ಬೇಡಿಕೆ ಇಡುತ್ತಾರೆ. ನೀಡದಿದ್ದಲ್ಲಿ ದೇವರಿಗೆ ಮಾಡುವ ಹೋಮ, ಅಭಿಷೇಕಗಳನ್ನು ಮಾಡಿಕೊಡುವಂತೆ ಕೋರುತ್ತಾರೆ.
ಅಲ್ಲದೆ, ದೇವಾಲಯಗಳು ಸಾರ್ವಜನಿಕ ಪ್ರಾಧಿಕಾರಗಳಲ್ಲ ಎಂದು ಘೋಷಿಸಬೇಕು. ಆ ಮೂಲಕ ದೇವಾಲಯಗಳನ್ನು ಕಾಯಿದೆಯಿಂದ ಹೊರಗುಳಿಸಬೇಕು. ಅಲ್ಲದೆ, ಮಾಹಿತಿ ಹಕ್ಕು ಕಾಯಿದೆಯಡಿ ಸಾರ್ವಜನಿಕರು ಕೇಳುವ ಮಾಹಿತಿಯನ್ನು ಒದಗಿಸುವ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರಗಳನ್ನು ನೇಮಿಸುವ ಸಂಬಂಧ ರಾಜ್ಯ ಸರ್ಕಾರ 2007ರ ಜೂನ್ 16ರಂದು ಮತ್ತು 2007ರ ಫೆಬ್ರವರಿ 3ರಂದು ಹೊರಡಿಸಿರುವ ಎರಡು ಅಧಿಸೂಚನೆಗಳನ್ನು ರದ್ದುಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications