ಜಾತಿ ಗಣತಿ ವರದಿ: ಕರ್ನಾಟಕ ಸರ್ಕಾರಕ್ಕೆ ಬಿಗ್ ರಿಲೀಫ್‌

ಬೆಂಗಳೂರು, ಮಾರ್ಚ್‌ 06: ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿ ಸಂಬಂಧ ಸದ್ಯ ಯಾವುದೇ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ ಸರ್ಕಾರ ಯಾವುದೇ ಕ್ಷಣದಲ್ಲಿ ಯಾವ ನಿರ್ಧಾರವನ್ನಾದರೂ ಕೈಗೊಳ್ಳಬಹುದು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಜಾತಿ ಗಣತಿ ವರದಿ ಕುರಿತು ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಬೇಕಾದ ಅಗತ್ಯವಿದ್ದು, ಸದ್ಯ ಯಾವುದೇ ರೀತಿಯ ಆದೇಶ ನೀಡಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಹಾಗಾಗಿ ಅರ್ಜಿದಾರರಿಗೆ ತಾತ್ಕಾಲಿಕ ಹಿನ್ನಡೆಯಾಗಿದೆ.

HC Refused Order On Caste Census Report Karnataka

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014ರ ಜನವರಿ 23ರಂದು ಸರ್ಕಾರ ಆದೇಶ ರದ್ದು ಕೋರಿ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ ಸೆಕ್ಷನ್ 9ಕ್ಕೆ ತಂದಿರುವ ತಿದ್ದುಪಡಿ ವಜಾ ಮಾಡುವಂತೆ ಕೋರಿ ಬೀದರ್‌ನ ಶಿವರಾಜ್ ಕಣಶೆಟ್ಟಿ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಯಾವ ನಿರ್ಧಾರವೂ ಇಲ್ಲ: ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಫೆಬ್ರವರಿ 27ಕ್ಕೆ ಸರ್ಕಾರ‌ ಸ್ವೀಕರಿಸಿದೆ. ಈ ವರದಿ ಕುರಿತಂತೆ ಸರ್ಕಾರ ಇನ್ನೂ ನಿರ್ಧಾರಕ್ಕೆ ಬರಬೇಕಾಗಿದೆ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದರು. ಈ ವೇಳೆ ನ್ಯಾಯಪೀಠ, ಇದೇ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ತಿಳಿಸಿತು. ಇದಕ್ಕೆ ಅಡ್ವೋಕೆಟ್ ಜನರಲ್, ಒಂದು ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ನಡುವೆ ಮಧ್ಯಪ್ರವೇಶ ಮಾಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯ ಮುಂದಿನ ವಿಚಾರಣೆವರೆಗೂ ವರದಿಗೆ ಸಂಬಂಧಿಸಿದಂತೆ ಯಾವುದೇ ಕ್ರಮಕ್ಕೆ ಮುಂದಾಗದಂತೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿಗಳ ಸಂಬಂಧ ಸುಧೀರ್ಘ ವಿಚಾರಣೆ ನಡೆಸಬೇಕಾಗಿದೆ. ಆದ್ದರಿಂದ ತಕ್ಷಣಕ್ಕೆ ಯಾವುದೇ ರೀತಿಯ ಆದೇಶವನ್ನು ನೀಡಲಾಗದು‌ ತಿಳಿಸಿ, ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.

ಪ್ರಮಾಣಪತ್ರ ಸಲ್ಲಿಸಲು ಸೂಚನೆ: ರಾಜ್ಯಾದ್ಯಂತ ಜನಗಣತಿ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ ಜಾತಿ ಗಣತಿ ವರದಿ ಸ್ವೀಕರಿಸಿರುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹಾಗಾಗಿ ಇದೀಗ ಸರ್ಕಾರ ಅಧಿಕೃತವಾಗಿ ವರದಿ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲೇಬೇಕಾಗಿದೆ. ಈ ಮಧ್ಯೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವೇ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ತೀವ್ರ ಆಕ್ಷೇಪ ಎತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+