Get Updates
Get notified of breaking news, exclusive insights, and must-see stories!

'ಚಂಬಲ್' ಸಿನಿಮಾ ಬಿಡುಗಡೆಗೆ ಯಾವುದೇ ಅಡ್ಡಿ ಇಲ್ಲ

ಬೆಂಗಳೂರು, ಫೆಬ್ರವರಿ 21: ನೀನಾಸಂ ಸತೀಶ್ ಅಭಿನಯದ ಬಹು ನಿರೀಕ್ಷೆಯ ಚಿತ್ರ 'ಚಂಬಲ್' ಬಿಡುಗಡೆಗೆ ಬಂದಿದ್ದ ವಿಘ್ನ ನಿವಾರಣೆಯಾಗಿದೆ. ಈ ಚಿತ್ರದ ಬಿಡುಗಡೆ, ಪ್ರದರ್ಶನಕ್ಕೆ ತಡೆ ಕೋರಿ ದಿವಂಗತ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಅವರ ತಾಯಿ ಗೌರಮ್ಮ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಂಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರ ಪೀಠ, ಚಿತ್ರವನ್ನು ಸೋಮವಾರ ಬೆಳಗ್ಗೆ ಕೋರ್ಟ್ ಆವರಣದಲ್ಲಿ ಚಿತ್ರ ವೀಕ್ಷಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಆದರೆ, ಚಿತ್ರಮಂದಿರಗಳಲ್ಲಿ ಬಿಡುಗಡೆ ಹಾಗೂ ಪ್ರದರ್ಶನ ರದ್ದು ಮಾಡುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

HC refuses too issue stay order on release of Kannada movie Chambal

ಡಿ.ಕೆ. ರವಿ ಅವರ ತಾಯಿ ಗೌರಮ್ಮ ಮತ್ತು ತಂದೆ ಕರಿಯಪ್ಪ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿ, 'ಚಂಬಲ್' ಚಿತ್ರದಲ್ಲಿ ಡಿ.ಕೆ. ರವಿ ಅವರ ಚಾರಿತ್ರ್ಯಹರಣ ಮಾಡುವ ಅಂಶಗಳನ್ನು ಸೇರಿಸಲಾಗಿದೆ.

ಚಿತ್ರದ ಟ್ರೈಲರ್ ಮತ್ತು ಶೀರ್ಷಿಕೆ ಅವಹೇಳನಕಾರಿಯಾಗಿದ್ದು, ಸೆನ್ಸಾರ್ ಪ್ರಮಾಣ ಪತ್ರ ಹಿಂಪಡೆಯಲು ನಿರ್ದೇಶನ ನೀಡಬೇಕು, ಚಿತ್ರದಲ್ಲಿ ಪ್ರಾಮಾಣಿಕ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರನ್ನು ಚಿತ್ರದಲ್ಲಿ ಕೆಟ್ಟ ವ್ಯಕ್ತಿಯನ್ನಾಗಿ ಬಿಂಬಿಸಲಾಗಿದೆ, ಇದೆಲ್ಲವೂ ಬದಲಾಗಬೇಕು, ಚಿತ್ರ ಯಾವುದೇ ಕಾರಣಕ್ಕೂ ಬಿಡುಗಡೆಯಾಗಬಾರದು ಎಂದು ಗೌರಮ್ಮ ಕೋರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+