ಪಾಕ್ ಮೂಲದ ಮಕ್ಕಳಿಗೆ ಭಾರತೀಯ ಪೌರತ್ವ ನೀಡಲಾಗದು; ಹೈಕೋರ್ಟ್

ಬೆಂಗಳೂರು, ಏಪ್ರಿಲ್ 07; ಪಾಕಿಸ್ತಾನದ ತಂದೆ ಮತ್ತು ಭಾರತದ ತಾಯಿಗೆ ದುಬೈನಲ್ಲಿ ಜನಿಸಿರುವ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಭಾರತೀಯ ಪೌರತ್ವ ನೀಡಲಾಗದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಬೆಂಗಳೂರಿನಲ್ಲಿ ನೆಲೆಸಿರುವ 17 ಮತ್ತು 14 ವರ್ಷದ ಇಬ್ಬರು ಪಾಕಿಸ್ತಾನದ ಅಪ್ರಾಪ್ತ ಮಕ್ಕಳು ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯಪೀಠ ಈ ಆದೇಶ ಮಾಡಿದೆ.

ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಪೀಠ, ಪೌರತ್ವ ತ್ಯಜಿಸಲು 21 ವರ್ಷ ವಯಸ್ಸಾಗಬೇಕೆಂದು ಪಾಕಿಸ್ತಾನ ದೇಶದ ನಿಯಮವಿದೆ. ಹಾಗಾಗಿ, ಅರ್ಜಿದಾರರು ಭಾರತದ ಕಾನೂನುಗಳು ಹೊಂದಿಕೊಳ್ಳಲು ಸಾಧ್ಯವಿಲ್ಲ. ಪಾಕಿಸ್ತಾನದ ಪೌರತ್ವವನ್ನು ತ್ಯಜಿಸಿದ ಬಳಿಕವೇ ಅರ್ಜಿದಾರರು ಭಾರತದ ಪೌರತ್ವ ಕೋರಿ ಅರ್ಜಿ ಸಲ್ಲಿಸಬಹುದು ಎಂದು ಕೋರ್ಟ್‌ ತನ್ನ ಆದೇಶದಲ್ಲಿ ಹೇಳಿದೆ.

HC Rejects To Direct MHA To Give Indian Citizenship To Two Pakistan Minor Children

ಪ್ರಕರಣದ ಹಿನ್ನೆಲೆ:

ಭಾರತದ ಮೂಲದ ಅಮೀನಾ ಎಂಬುವರು ದುಬೈನಲ್ಲಿರುವ ಪಾಕಿಸ್ತಾನದ ಪ್ರೆಜೆಯಾದ ಅಸ್ಸಾದ್ ಮಲ್ಲಿಕ್ ಎಂಬುವರನ್ನು 2002ರಲ್ಲಿ ಷರಿಯಾ ಕಾನೂನಿನ ಪ್ರಕಾರ ವಿವಾಹವಾಗಿದ್ದರು. ದಂಪತಿಗೆ ದುಬೈನಲ್ಲಿಯೇ 2004ರಲ್ಲಿ ಮೊದಲ ಮಗು ಮತ್ತು 2008ರಲ್ಲಿ ಎರಡನೇ ಮಗು ಜನಿಸಿತ್ತು. ಈ ದಂಪತಿ ದುಬೈ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದರು. ಜತೆಗೆ, ಮಕ್ಕಳ ಮೇಲಿನ ಹಕ್ಕನ್ನು ತಾಯಿಗೇ (ಅಮೀನಾ) ಬಿಟ್ಟುಕೊಡಲಾಗಿತ್ತು. ಈ ಮಕ್ಕಳು ದುಬೈನಲ್ಲಿ ಉದ್ಯೋಗದಲ್ಲಿದ್ದ ತಾಯಿಯೊಂದಿಗೆ ನೆಲೆಸಿದ್ದರು.

ಆದರೆ, ದುಬೈನಲ್ಲಿ ಜೀವನ ನಡೆಸುವುದಕ್ಕೆ ಸಾಧ್ಯವಾಗದ ಕಾರಣ ಅಮೀನಾ ಅವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿದ್ದ ತನ್ನ ಪೋಷಕರ ಮನೆಗೆ 2021ರಲ್ಲಿ ಹಿಂದಿರುಗಲು ಮುಂದಾಗಿದ್ದರು. ಮಕ್ಕಳು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಆ ಪಾಸ್‌ಪೋರ್ಟ್ ಹೊಂದಿರುವ ಕಾರಣ ಭಾರತಕ್ಕೆ ಕರೆತರಲು ಅನುಮತಿ ಕೋರಿ ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಸಲ್ಲಿಸಿದ್ದರು.

ಅದನ್ನು ಪರಿಗಣಿಸಿದ್ದ ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು, ಪಾಕಿಸ್ತಾನದ ಪಾಸ್‌ಪೋರ್ಟ್‌ನ್ನು ಹಿಂದಿರುಗಿಸಿದ ಬಳಿಕ ಅವರ ಪೌರತ್ವದ ಕುರಿತು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಷರತ್ತನ್ನು ವಿಧಿಸಿ ಮಾನವೀಯತೆ ದೃಷ್ಠಿಯಿಂದ ತಾತ್ಕಾಲಿಕವಾಗಿ ಭಾರತಕ್ಕೆ ಬರಲು 2021ರ ಮೇ 21ಪಾಸ್ ಪೋರ್ಟ್ ನೀಡಿದ್ದರು. ಇನ್ನೂ ದುಬೈನಲ್ಲಿರುವ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ರಾಯಭಾರಿ ಕಚೇರಿಯ ಅಧಿಕಾರಿಗಳು, ಇಬ್ಬರು ಅಪ್ರಾಪ್ತರಿಗೆ ಭಾರತದ ಪೌರತ್ವ ನೀಡುವುದಕ್ಕೆ ನಮಗೆ ಅಡ್ಡಿಯಿಲ್ಲ. ಆದರೆ, ಪಾಕಿಸ್ತಾನ ಪೌರತ್ವ ಕಾಯ್ದೆ ಪ್ರಕಾರ ಪಾಕಿಸ್ತಾನದ ಪೌರತ್ವ ತ್ಯಜಿಸಬೇಕಾದರೆ 21 ವರ್ಷ ವಯಸ್ಸಾಗಿರುವುದು ಕಡ್ಡಾಯ. ಅದರಂತೆ ಮಕ್ಕಳಿಗೆ 21 ವರ್ಷ ವಯಸ್ಸಾಗುವರೆಗೂ ಪೌರತ್ವ ತ್ಯಜಿಸಲು ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

HC Rejects To Direct MHA To Give Indian Citizenship To Two Pakistan Minor Children

ಪೌರತ್ವಕ್ಕೆ ಅರ್ಜಿ:

ಮತ್ತೊಂದೆಡೆ ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಅಮೀನಾ ಅವರು ತನ್ನ ಇಬ್ಬರೂ ಮಕ್ಕಳಿಗೆ ಭಾರತದ ಪೌರತ್ವ ನೀಡಬೇಕು ಎಂದು ಕೋರಿ ಕೇಂದ್ರ ಗೃಹ ಇಲಾಖೆಗೆ 2022ರ ಮೇ 5ರಂದು ಪತ್ರ ಬರೆದು ಕೋರಿದ್ದರು. ಅದಕ್ಕೆ ಕೇಂದ್ರ ಗೃಹ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಜುಲೈನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅಮೀನಾ, ತನ್ನ ಇಬ್ಬರು ಮಕ್ಕಳಿಗೆ ಭಾರತದ ಪೌರತ್ವ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೆಕು ಎಂದು ಕೋರಿದ್ದರು.

ಈ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ 2022ರ ಸೆಪ್ಟೆಂಬರ್‌ನಲ್ಲಿ ಅಮೀನಾ ಮನವಿಯನ್ನು ತಿರಸ್ಕರಿಸಿ ಗೃಹ ಸಚಿವಾಲಯ ಆದೇಶಿಸಿತ್ತು. ಇದೀಗ ಹೈಕೋರ್ಟ್ ಸಹ ಅಮೀನಾ ಮತ್ತವರ ಅಪ್ರಾಪ್ತ ಮಕ್ಕಳ ಮನವಿಯನ್ನು ತಿರಸ್ಕಾರ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+