ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಟಿ ಚೈತ್ರಾ ಹಳ್ಳಿಕೇರಿ ಪತಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಜೂ.3. ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಸಂಬಂಧ ನಟಿ ಚೈತ್ರಾ ಹಳ್ಳಿಕೇರಿ ತಮ್ಮ ಪತಿ ಬಾಲಾಜಿ ಮತ್ತು ಮಾವ ಎಂ.ಕೆ.ಪೋತರಾಜು ವಿರುದ್ಧ ನೀಡಿರುವ ದೂರಿನ ಕುರಿತಾಗಿ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ನಟಿಯ ಪತಿ ಸದ್ಯ ವಿಚಾರಣೆಯಿಂದ ಪಾರಾಗಿದ್ದಾರೆ. ಆದರೆ ಇಬ್ಬರ ನಡುವಿನ ವ್ಯಾಜ್ಯಕ್ಕೆ ಹೊಸ ತಿರುವು ಸಿಕ್ಕಿದೆ.

ತಮ್ಮ ವಿರುದ್ಧ ಚೈತ್ರಾ ದಾಖಲಿಸಿರುವ ದೂರು ಹಾಗೂ ಅದಕ್ಕೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಬಾಲಾಜಿ ಮತ್ತು ಅವರ ತಂದೆ ಎಂ.ಕೆ.ಪೋತರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ನಟಿ ಚೈತ್ರಾ ಅವರ ದೂರು ಆಧರಿಸಿ ನಗರದ ವೈಟ್‌ಫೀಲ್ಡ್ ಠಾಣಾ ಪೊಲೀಸರು ಬಾಲಾಜಿ ಮತ್ತು ಪೋತರಾಜು ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ದೂರಿಗೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು.

 HC Stay Inquiry Against Actress Chaitra Hallikeri on Misuse of Bank Account Case

ಅರ್ಜಿದಾರರ ಪರ ಹಿರಿಯ ವಕೀಲರು, ಒಂದೇ ಆರೋಪ ಸಂಬಂಧ ಎರಡು ದೂರು ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ಪತ್ನಿ ಈಗಾಗಲೇ ಆಂತಹ ದೂರು ನೀಡಿದ್ದು, ಅದರ ವಿಚಾರಣೆ ನಡೆಯುತ್ತಿದೆ. ತಾವು ವಿಚ್ಛೇದನ ಅರ್ಜಿ ಸಲ್ಲಿಸಿರುವುದಕ್ಕಾಗಿ ಪ್ರತಿಯಾಗಿ ಚೈತ್ರಾ ಸುಳ್ಳು ದೂರು ದಾಖಲಿಸಿರುವ ಕಾರಣ ಅರ್ಜಿದಾರರ ವಿರುದ್ಧ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ:

ನಟಿ ಚೈತ್ರಾ ಮತ್ತು ಬಾಲಾಜಿ 2006ರಲ್ಲಿ ಮದುವೆಯಾಗಿದ್ದರು. ಬಾಲಾಜಿ ವಿರುದ್ಧ ಚೈತ್ರಾ 2012ರಲ್ಲಿ ಮೊದಲ ಬಾರಿಗೆ ದೂರು ದಾಖಲಿಸಿದ್ದರು. ಬಳಿಕ ದಂಪತಿ ಒಂದಾಗಿ ಜೀವನ ನಡೆಸಿದ್ದರು. ಆದರೆ, ಪತ್ನಿಯ ಕಿರುಕುಳ ಸಹಿಸಲಾಗುತ್ತಿಲ್ಲ ಎಂದು ತಿಳಿಸಿ 2021ರ ಮಾರ್ಚ್‌ನಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಬಾಲಾಜಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಪ್ರತಿಕಾರವಾಗಿ ಚೈತ್ರಾ 2021ಸೆಪ್ಟೆಂಬರ್‌ನಲ್ಲಿ ಬಾಲಾಜಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಸಂಬಂಧ ದೂರು ನೀಡಿದ್ದರು. ಅದರಲ್ಲೂ ಸಹ ಬಾಲಾಜಿ ಮೇಲೆ ಬ್ಯಾಂಕ್ ಖಾತೆಯ ದುರ್ಬಳಕೆ ಆರೋಪ ಹೊರಿಸಿದ್ದರು ಎಂದು ವಿವರಿಸಿದರು.

ಅಲ್ಲದೆ, ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಮಧ್ಯೆ ಒಂದು ವಾರದ ಹಿಂದೆ ವೈಟ್‌ಫೀಲ್ಡ್ ಠಾಣೆಗೆ ತೆರೆಳಿದ್ದ ಚೈತ್ರಾ, ತನ್ನ ಬ್ಯಾಂಕ್ ಖಾತೆಯಲ್ಲಿದ್ದ 14 ಲಕ್ಷ ರೂ.ವನ್ನು ಬಾಲಾಜಿ ಮತ್ತವರ ತಂದೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು. ಅದನ್ನು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅದರ ತನಿಖೆಗೆ ತಡೆ ಕೋರಿ ಪತಿ ಬಾಲಾಜಿ ಹೈಕೋರ್ಟ್ ಮೊರೆ ಹೋಗಿದ್ದರು.

English summary
High Court on Friday granted an order to a court hearing on the complaint filed by actress Chaitra Hallikeri against her husband Balaji and father-in-law MK Potaraju in connection with bank account misconduct.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X